ದಿನಭವಿಷ್ಯ | ಜನವರಿ 22, 2021

ಜನವರಿ 22, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನಭವಿಷ್ಯ.

ದಿನಭವಿಷ್ಯ | ಜನವರಿ 22, 2021
ದಿನ ಭವಿಷ್ಯ
Follow us
ಆಯೇಷಾ ಬಾನು
|

Updated on: Jan 22, 2021 | 6:56 AM

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಪುಷ್ಯಮಾಸ, ಹೇಮಂತ ಋತು, ಶುಕ್ಲಪಕ್ಷ, ನವಮಿ ತಿಥಿ, ಶುಕ್ರವಾರ, ಜನವರಿ 22, 2021. ಭರಣಿ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 11.2 ರಿಂದ ಬೆಳಿಗ್ಗೆ 12.26. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.49. ಸೂರ್ಯಾಸ್ತ: ಸಂಜೆ 6.5 .

ತಾ.22-01-2021 ರ ಶುಕ್ರವಾರದ ರಾಶಿಭವಿಷ್ಯ

ಮೇಷ: ಎಲ್ಲವನ್ನು ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವುದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 1

ವೃಷಭ: ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 6

ಮಿಥುನ: ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ನೆಮ್ಮದಿಯ ವಾತಾವರಣ ಇರುವುದು. ಶುಭ ಸಂಖ್ಯೆ: 9

ಕಟಕ: ತಪ್ಪುಗಳನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಶುಭ ಸಂಖ್ಯೆ: 5

ಸಿಂಹ: ಅನಿಸಿಕೆಗಿಂತ ವಾಸ್ತವ ಬೇರೆ ಇರುವದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷ್ಮತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವದು ಒಳ್ಳೆಯದು. ಧನಹಾನಿಯ ಸಂಭವವಿದೆ. ಶುಭ ಸಂಖ್ಯೆ: 4

ಕನ್ಯಾ: ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು. ಶುಭ ಸಂಖ್ಯೆ: 2

ತುಲಾ: ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. ಶುಭ ಸಂಖ್ಯೆ: 7

ವೃಶ್ಚಿಕ: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವಸಾಮರ್ಥ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 3

ಧನು: ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು. ಶುಭ ಸಂಖ್ಯೆ: 4

ಮಕರ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 7

ಕುಂಭ: ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವವು. ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು. ಶುಭ ಸಂಖ್ಯೆ: 9

ಮೀನ: ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವುದು. ಸತತ ಪ್ರಯತ್ನವಿಲ್ಲದೇ ಫಲ ದೊರೆಯಲಾರದು. ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬುದ್ದಿಯಿಂದ ತಾಳ್ಮೆಕಳೆದುಕೊಳ್ಳದೇ ಮುಂದುವರೆಯಿರಿ. ಶುಭ ಸಂಖ್ಯೆ: 8

ಡಾ. ಬಸವರಾಜ್ ಗುರೂಜಿ

(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 9972848937)

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ