AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಭವಿಷ್ಯ | ಜನವರಿ 23, 2021

ಜನವರಿ 23, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನಭವಿಷ್ಯ.

ದಿನಭವಿಷ್ಯ | ಜನವರಿ 23, 2021
ದಿನ ಭವಿಷ್ಯ
ಪೃಥ್ವಿಶಂಕರ
|

Updated on: Jan 23, 2021 | 7:00 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಪುಷ್ಯಮಾಸ, ಹೇಮಂತ ಋತು, ಶುಕ್ಲಪಕ್ಷ, ದಶಮಿ ತಿಥಿ, ಶನಿವಾರ, ಜನವರಿ 23, 2021. ಕೃತ್ತಿಕೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9.38 ರಿಂದ ಬೆಳಿಗ್ಗೆ 11.02. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.49. ಸೂರ್ಯಾಸ್ತ: ಸಂಜೆ 6.6 .

ತಾ.23-01-2021 ರ ಶನಿವಾರದ ರಾಶಿಭವಿಷ್ಯ

ಮೇಷ: ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವವು. ವೃಥಾ ತಿರುಗಾಟ ಇರುವದು ಆದರೂ ಕೀರ್ತಿದಾಯಕ ಫಲವಿದೆ. ಶುಭ ಸಂಖ್ಯೆ: 5

ವೃಷಭ: ಅನಿರೀಕ್ಷಿತ ಧನಲಾಭವಾಗುವದು. ಬುದ್ಧಿಕೌಶಲ್ಯದಿಂದ ಉದ್ಯೋಗದಲ್ಲಿ ಬಡ್ತಿ ಕಂಡುಬರುವದು. ಸಿಟ್ಟಿನ ಸ್ವಭಾವದಿಂದ ತೊದರೆಯಾಗುವ ಸಾಧ್ಯತೆ ಇದೆ. ಕಾರ್ಯಕ್ಷಮತೆಗೆ ತಕ್ಕ ಫಲ ದೊರೆಯುವದು. ಶುಭ ಸಂಖ್ಯೆ: 3

ಮಿಥುನ: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ. ಶುಭ ಸಂಖ್ಯೆ: 8

ಕರ್ಕ: ನಿರೀಕ್ಷೆಗೆ ತಕ್ಕಂತೆ ಕೆಲಸ ಆಗದೇ ಮಾನಸಿಕ ಅಶಾಂತಿ ಕಂಡುಬರುವದು. ವ್ಯವಹಾರಗಳಲ್ಲಿ ಹಾನಿಯಾಗುವ ಭಯ ಇರುವದು. ಪರಿಣಿತರ ಅಥವಾ ಹಿರಿಯರ ಸಲಹೆಯಂತೆ ಮುಂದುವರೆಯಿರಿ. ವಿದ್ಯಾರ್ಥಿಗಳಿಗೆ ಒಳ್ಳೆಯ ಫಲವಿದೆ. ಶುಭ ಸಂಖ್ಯೆ: 7

ಸಿಂಹ: ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆನಿಂತ ಕೆಲಸಗಳು ಮುಂದುವರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಶುಭ ಸಂಖ್ಯೆ: 9

ಕನ್ಯಾ: ಸ್ವಪ್ರತಿಷ್ಟೆ ಬಿಟ್ಟು ಬಲ್ಲವರ ಸಹಾಯ ಪಡೆಯಿರಿ. ಮರೆತು ಹೋದ ವಸ್ತು ಲಾಭದಾಯಕವಾಗಿ ಪರಿಣಮಿಸುವದು. ಹಳೆಯ ಮಿತ್ರರ ಒಡನಾಟ ಸಂತಸ ತರುವದು. ಆರ್ಥಿಕ ಸ್ಥಿತಿಯಲ್ಲಿ ಬೆಳವಣಿಗೆ ಇರುವದು. ಶುಭ ಸಂಖ್ಯೆ: 1

ತುಲಾ: ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವದು. ಸಮತೋಲಿತ ಜೀವನವಿರುವದು. ಶುಭ ಸಂಖ್ಯೆ: 4

ವೃಶ್ಚಿಕ: ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವದು ಅಮಾಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವದು. ಕೈಗೊಂಡ ಕಾರ್ಯ ಯಶ ಕಾಣುವದು. ಶುಭ ಸಂಖ್ಯೆ: 6

ಧನು: ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 2

ಮಕರ: ವ್ಯಾಪಾರದಲ್ಲಿ ಪ್ರಗತಿ ಇರುವದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವದು. ಶುಭ ಸಂಖ್ಯೆ: 7

ಕುಂಭ: ನಿರೀಕ್ಷಿತ ಸರ್ವಕಾರ್ಯಗಳು ನೆರವೆರುತ್ತದೆ. ಆರ್ಥಿಕ ಮಟ್ಟವೂ ಏರಿ, ಸ್ಥಿರಪ್ರಾಪ್ತಿ, ಸಂಸಾರಸುಖ ಸಂಬ್ರಮಗಳಿರುತ್ತದೆ. ಶುಭ ಕಾರ್ಯ ಪ್ರಯತ್ನ ಫಲಕೊಡುತ್ತದೆ. ಶುಭ ಸಂಖ್ಯೆ: 9

ಮೀನ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು. ಶುಭ ಸಂಖ್ಯೆ: 4

ಡಾ. ಬಸವರಾಜ್ ಗುರೂಜಿ

(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 9972848937)

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ