ದಿನಭವಿಷ್ಯ | ಜನವರಿ 25, 2021

ಜನವರಿ 25, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನಭವಿಷ್ಯ.

  • ಡಾ.ಬಸವರಾಜ ಗುರೂಜಿ
  • Published On - 6:35 AM, 25 Jan 2021
ದಿನಭವಿಷ್ಯ | ಜನವರಿ 25, 2021
ದಿನ ಭವಿಷ್ಯ

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಪುಷ್ಯಮಾಸ, ಹೇಮಂತ ಋತು, ಶುಕ್ಲಪಕ್ಷ, ದ್ವಾದಶಿ ತಿಥಿ, ಸೋಮವಾರ, ಜನವರಿ 25, 2021. ಮೃಗಶಿರ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 8.13ರಿಂದ ಬೆಳಿಗ್ಗೆ 9.37. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.49. ಸೂರ್ಯಾಸ್ತ: ಸಂಜೆ 6.7.

ತಾ.25-01-2021 ರ ಸೋಮವಾರದ ರಾಶಿಭವಿಷ್ಯ

ಮೇಷ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 7

ವೃಷಭ: ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವದು. ಗುರುಬಲ ವೃದ್ಧಿಸುವದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವದು. ಶುಭ ಸಂಖ್ಯೆ: 4

ಮಿಥುನ: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂ ಅಧಿಕ ಖರ್ಚು ಇರುವದು. ಶುಭ ಸಂಖ್ಯೆ: 1

ಕರ್ಕ: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭ ಸಂಖ್ಯೆ: 3

ಸಿಂಹ: ವ್ಯವಹಾರಿಕ ಏಳ್ಗೆ ಇರುವದು. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ.ವಿವಿಧ ಸೌಭಾಗ್ಯಪ್ರಾಪ್ತಿ..ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್,ವಾಹನ,ಮಶಿನರಿಗಳಿಂದ ತೊಂದರೆ. ಶುಭ ಸಂಖ್ಯೆ: 5

ಕನ್ಯಾ: ವ್ಯಾಪಾರದಲ್ಲಿ ಅದೃಷ್ಟಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ಶುಭ ಸಂಖ್ಯೆ: 9

ತುಲಾ: ಹಳೆಯ ಸಾಲ ಮರುಪಾವತಿಯಾಗುವದು. ಬೇಡವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಭವವಿದೆ. ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಎದುರಾಡುವ ಸಂಭವವಿದೆ. ಶುಭ ಸಂಖ್ಯೆ: 6

ವೃಶ್ಚಿಕ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ಶುಭ ಸಂಖ್ಯೆ: 8

ಧನು: ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ.ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವವು. ಶುಭ ಸಂಖ್ಯೆ: 2

ಮಕರ: ಮನೆಯಲ್ಲಿ ಅಸಮಾಧಾನ ಇರುವದು. ಕೂಡಿಟ್ಟ ಹಣ ಹಾನಿಯಾಗುವ ಸಂಭವವಿದೆ. ಅಣ್ಣತಮ್ಮಂದಿರಲ್ಲಿ ಸಹಕಾರ ಅತ್ಯಂತ ಅವಶ್ಯಕ. ತೋಟಗಾರಿಕೆ ಫಲಪ್ರದವಾಗಲಿದೆ.ವ್ಯಾಪಾರ ವೃದ್ಧಿಯಾಗುವದು. ಶುಭ ಸಂಖ್ಯೆ: 5

ಕುಂಭ: ದಿಟ್ಟತನ, ಮನೋಸ್ಥೈರ್ಯ, ನೇರ,ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವದು. ಶುಭ ಸಂಖ್ಯೆ: 3

ಮೀನ: ಪ್ರೀತಿವಿಶ್ವಾಸದ ಬಲದಿಂದ ಅಧಿಕಾರಿಗಳ ಗಮನ ಸೆಳೆಯುವಿರಿ. ಅತಿಯಾದ ಮೃದು ಧೋರಣೆ ದುರುಪಯೋಗವಾಗದಂತೆ ನೋಡಿಕೊಳ್ಳಿರಿ. ಮಂಗಲಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಇರುವದು. ಶುಭ ಸಂಖ್ಯೆ: 9

ಡಾ. ಬಸವರಾಜ್ ಗುರೂಜಿ

(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 9972848937)