ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಪುಷ್ಯಮಾಸ, ಹೇಮಂತ ಋತು, ಶುಕ್ಲಪಕ್ಷ, ಹುಣ್ಣಿಮೆ ತಿಥಿ, ಗುರುವಾರ, ಜನವರಿ 28, 2021. ಪುಷ್ಯ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1.53 ರಿಂದ ಸಂಜೆ 3.18. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.48. ಸೂರ್ಯಾಸ್ತ: ಸಂಜೆ 6.8.
ತಾ.28-01-2021 ರ ಗುರುವಾರದ ರಾಶಿಭವಿಷ್ಯ
ಮೇಷ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ಶುಭ ಸಂಖ್ಯೆ: 9
ವೃಷಭ: ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ. ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ. ಶುಭ ಸಂಖ್ಯೆ: 3
ಮಿಥುನ: ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವುದು. ಶಾಂತಿ, ನೆಮ್ಮದಿಯುಕ್ತ ಜೀವನ ಇರುವುದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವುದರಿಂದ ಗುರಿ ಮುಟ್ಟುವುದು ನಿಶ್ಚಿತ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 1
ಕಟಕ: ಕಾಯಕನಿಷ್ಠೆ ನಿಮಗೇ ಹೊರೆಯಾಗದಂತೆ ನೋಡಿಕೊಳ್ಳಿರಿ. ನಿರಂತರ ದುಡಿಮೆಯಿಂದ ಅನಾರೋಗ್ಯ ಅಥವಾ ಮಾನಸಿಕ ಕಿರಿಕಿರಿ ಆಗುವ ಸಂಭವವಿದೆ. ಹಣಕಾಸಿನಿನ ವ್ಯವಹಾರದಲ್ಲಿ ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 2
ಸಿಂಹ: ನಿಶ್ಚಿತ ಕೆಲಸಕ್ಕೆ ಬೆಂಬಲ ಸಿಗುವುದರಿಂದ ಉತ್ತಮ ಫಲ ದೊರೆಯುವುದು. ಸುಮ್ಮನೇ ಕೂಡದ ಜಾಯಮಾನ ಇರುವುದರಿಂದ ಹೊಸ ಯೋಜನೆಯನ್ನು ರೂಪಿಸುವಿರಿ. ಹಿಂದಿನ ಬಾಕಿ ವಸೂಲಾತಿಗೆ ಶ್ರಮಿಸಬೇಕಾಗುವುದು. ಶುಭ ಸಂಖ್ಯೆ: 6
ಕನ್ಯಾ: ಒಂದೇ ಮನಸಿನ ಕ್ರೀಯಾಶೀಲವಾದ ಬದುಕು ಸಾಧನೆಗೆ ಕಾರಣವಾಗುವುದು. ಅಡೆತಡೆಗಳ ನಿವಾರಣೆ ಯಾಗುವುದು. ನಿಶ್ಚಿತ ಅವಧಿಯ ಪರೀಕ್ಷೆಗಳು ಎದುರಾದರೂ ಬಲಗುಂದುವುದಿಲ್ಲ. ಹಿರಿಯರ ಸಲಹೆ ದೊರೆಯುವುದು. ಶುಭ ಸಂಖ್ಯೆ: 5
ತುಲಾ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 8
ವೃಶ್ಚಿಕ: ಮನಸ್ಸಿನಂತೆಯೇ ಎಲ್ಲ ಕೆಲಸಗಳೂ ಪೂರ್ಣವಾಗುವವು. ಉದ್ಯೋಗಸ್ಥಾನದಲ್ಲಿ ಕಾರ್ಯಭಾರ ಹೆಚ್ಚುವುದು. ಆಸ್ತಿ ಸಂಬಂಧಿತ ವಿಷಯದಲ್ಲಿ ವಂಚನೆಯಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತೋಷದ ಕಾರ್ಯಗಳು ನೆರವೇರುವವು. ಶುಭ ಸಂಖ್ಯೆ: 4
ಧನು: ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವುದು ಅಮಾಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವುದು. ಕೈಗೊಂಡ ಕಾರ್ಯ ಯಶಸ್ವಿ ಕಾಣುವುದು. ಶುಭ ಸಂಖ್ಯೆ: 7
ಮಕರ: ವ್ಯವಹಾರಿಕ ಏಳ್ಗೆ ಇರುವುದು. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ವಿವಿಧ ಸೌಭಾಗ್ಯಪ್ರಾಪ್ತಿ. ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ವಾಹನ, ಮಶಿನರಿಗಳಿಂದ ತೊಂದರೆ. ಶುಭ ಸಂಖ್ಯೆ: 1
ಕುಂಭ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು. ಶುಭ ಸಂಖ್ಯೆ: 9
ಮೀನ: ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು. ಶುಭ ಸಂಖ್ಯೆ: 3
(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 9972848937)
Published On - 6:52 am, Thu, 28 January 21