ದಿನಭವಿಷ್ಯ | ಜನವರಿ 13, 2021

|

Updated on: Jan 13, 2021 | 6:46 AM

ಜನವರಿ 13, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನಭವಿಷ್ಯ.

ದಿನಭವಿಷ್ಯ | ಜನವರಿ 13, 2021
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ದಕ್ಷಿಣಾಯನ, ಮಾರ್ಗಶಿರ ಮಾಸ, ಹೇಮಂತ ಋತು, ಕೃಷ್ಣಪಕ್ಷ, ಅಮಾವಾಸ್ಯೆ, ಬುಧವಾರ, ಜನವರಿ 13,2021. ಪೂರ್ವಾಷಾಢ ನಕ್ಷತ್ರ, ರಾಹುಕಾಲ: ಬೆಳಿಗ್ಗೆ 12.23ರಿಂದ ಮಧ್ಯಾಹ್ನ 1.46 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.49. ಸೂರ್ಯಾಸ್ತ: ಸಂಜೆ 5.59.

ತಾ.13-01-2021 ರ ಬುಧವಾರದ ಅಮಾವಾಸ್ಯೆಯ ರಾಶಿಭವಿಷ್ಯ

ಮೇಷ: ವ್ಯಾಪಾರದಲ್ಲಿ ಪ್ರಗತಿ ಇರುವುದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 5

ವೃಷಭ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 7

ಮಿಥುನ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು. ಶುಭ ಸಂಖ್ಯೆ: 6

ಕಟಕ: ಧನ ಅಪವ್ಯಯವಾಗುವ ಲಕ್ಷಣಗಳಿವೆ ಆದರೆ ಸಣ್ಣ ವ್ಯಾಪಾರಿಗಳಿಗೆ ಉತ್ತಮ ಲಾಭವಾಗುವುದು. ಶ್ರಮಿಕವರ್ಗಕ್ಕೆ ಉನ್ನತಿ ಇರುವುದು. ಕೌಟುಂಬಿಕ ಸಂಬಂಧಗಳು ಫಲಿಸುವವು. ಋಣಪರಿಹಾರವಾಗುವುದು. ಶುಭ ಸಂಖ್ಯೆ: 9

ಸಿಂಹ: ತಪ್ಪುಗಳನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸುವಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಶುಭ ಸಂಖ್ಯೆ: 3

ಕನ್ಯಾ: ಸಹನೆಗೆ ತಕ್ಕ ಫಲ ದೊರೆಯುವುದು. ಬಹು ದಿನದ ಕನಸು ನನಸಾಗುವ ಕಾಲವಿದೆ. ಕೋರ್ಟ್​ನಲ್ಲಿದ್ದ ವ್ಯಾಜ್ಯಗಳಲ್ಲಿ ಜಯ ದೊರೆಯುವುದು. ಸಂತಾನಫಲದ ಅಪೇಕ್ಷೆ ಈಡೇರುವುದು. ಆರ್ಥಿಕ ವ್ಯವಹಾರಗಳ ಅದೃಷ್ಟ ಲಾಭತರುವವು. ಶುಭ ಸಂಖ್ಯೆ: 2

ತುಲಾ: ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 8

ವೃಶ್ಚಿಕ: ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ಮನೋಚಿಂತಿತ ಕಾರ್ಯ ಕೈಗೂಡುವುದು. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ. ಶುಭ ಸಂಖ್ಯೆ: 2

ಧನು: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 4

ಮಕರ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 6

ಕುಂಭ: ಅನಿರೀಕ್ಷಿತ ಸಂಚಾರ ಒದಗಿಬಂದರೂ ತೃಪ್ತಿದಾಯಕವೆನ್ನಬಹುದು. ವ್ಯಾಪಾರಾದಿ ಉದ್ಯಮಗಳಲ್ಲಿ ಅಪೇಕಿಸಿದಂತೆ ಪ್ರಗತಿ. ಲಾಭ ತೋರಿಬರುತ್ತದೆ. ಹೊಸದಾದ ಆಲೋಚನಾ ಸಿದ್ಧಿ. ವಿಪರೀತ ಖರ್ಚು. ಶುಭ ಸಂಖ್ಯೆ: 7

ಮೀನ: ಧನಾರ್ಜನೆಯ ಮಾರ್ಗವು ಶ್ರೇಷ್ಠ ಮಟ್ಟದಲ್ಲಿದ್ದು, ಐಶ್ವರ್ಯ ಸಮೃದ್ಧಿಯಾಗುತ್ತದೆ. ಸಂಸಾರಿಕ ದೃಷ್ಟಿಯಲ್ಲೂ ಸುಖ, ಸಂಭ್ರಮಗಳಿದ್ದು ತೃಪ್ತಿ ಲಭಿಸಿದರೂ ಶತ್ರುಜನರ ಪೀಡೆ ಅಧಿಕವಾಗುತ್ತದೆ. ಅನಿವಾರ್ಯ ಪ್ರವಾಸ ಸಾಧ್ಯತೆ ಇದೆ. ಶುಭ ಸಂಖ್ಯೆ: 5

ಬಸವರಾಜ ಗುರೂಜಿ

(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 9972848937)

Published On - 6:43 am, Wed, 13 January 21