ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ದಕ್ಷಿಣಾಯನ, ಮಾರ್ಗಶಿರ ಮಾಸ, ಹೇಮಂತ ಋತು, ಕೃಷ್ಣಪಕ್ಷ, ನವಮಿ, ಗುರುವಾರ, ಜನವರಿ 7, 2021. ಚಿತ್ತೆ, ರಾಹುಕಾಲ: ಮಧ್ಯಾಹ್ನ 1.45 ರಿಂದ 3.8. ಬೆಂಗಳೂರಿನಲ್ಲಿ ಸೂರ್ಯೋದಯ: ಬೆಳಿಗ್ಗೆ 6.47. ಸೂರ್ಯಾಸ್ತ: ಸಂಜೆ 5.56
ರಾಶಿಭವಿಷ್ಯ ಮೇಷ: ಕೆಲಸದಲ್ಲಿ ಅಭಿವೃದ್ಧಿ ಇದೆ. ಹಣಕಾಸಿನ ವ್ಯವಹಾರವನ್ನು ತಾಳ್ಮೆಯಿಂದ ನಿಭಾಯಿಸಿ. ಮನೆಯಲ್ಲಿ ಸಂಭ್ರಮದ ವಾತಾವರಣ ಇರುವದು. ಮಂಗಲ ಕಾರ್ಯ ಜರುಗುವವು. ಶುಭ ಸಂಖ್ಯೆ 2
ವೃಷಭ: ಉದ್ಯೋಗ ಪ್ರಾಪ್ತಿ, ಉದ್ಯಮದಲ್ಲಿ ಪ್ರಗತಿ ಇರುವದು. ಹಳೆಯ ಸಾಲ ತೀರುವದು. ಅನೇಕ ಮೂಲಗಳಿಂದ ಧನಪ್ರಾಪ್ತಿಯ ಯೋಗವಿದೆ. ಬಂಧುವರ್ಗದಲ್ಲಿಯ ಅಸಮಾಧಾನಗಳು ಪರಿಹಾರವಾಗುವವು. ಶುಭ ಸಂಖ್ಯೆ 8
ಮಿಥುನ: ಕೆಲಸಗಳು ನಿಧಾನಗತಿಯಲ್ಲಿ ಸಾಗುವವು ಸೂಕ್ಷ್ಮತೆಯಿಂದ ವ್ಯವಹರಿಸಿರಿ. ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ಮನೋಚಿಂತಿತ ಕಾರ್ಯ ಕೈಗೂಡುವದು. ಹಳೆಯ ಸಾಲ ತೀರುವದು. ಶುಭ ಸಂಖ್ಯೆ 7
ಕರ್ಕ: ಚಂಚಲಚಿತ್ತದಿಂದ ಕಾರ್ಯಹಾನಿಯಾಗುವ ಲಕ್ಷಣಗಳಿವೆ. ಆಸ್ತಿ ಸಂಬಂಧಿತ ಕ್ರಯವಿಕ್ರಯ ವ್ಯವಹಾರಗಳು ಕುದುರುವವು. ಅನವಶ್ಯಕ ಮಾತಿನಿಂದ ಇಕ್ಕಟ್ಟಿಗೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ತಜ್ಞರ ಸಹಾಯ ಪಡೆಯಿರಿ. ಶುಭ ಸಂಖ್ಯೆ 5
ಸಿಂಹ: ಜವಾಬ್ದಾರಿಯ ನಿಮಿತ್ತ ದೂರ ಪ್ರಯಾಣದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರುವದು. ಅಹಂಭಾವದಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುವ ಪ್ರಸಂಗವಿದೆ ಎಚ್ಚರಿಕೆ ವಹಿಸಿರಿ. ನಮೃತೆಗೆ ಯೋಗ್ಯ ಸಮ್ಮಾನ ದೊರೆಯುವದು. ಶುಭ ಸಂಖ್ಯೆ 4
ಕನ್ಯಾ: ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವದು. ಆರ್ಥಿಕ ಅಭಿವೃದ್ಧಿ ಕಂಡುಬರುವದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವದು. ಶತೃಗಳೂ ಸೌಮ್ಯರಾಗುವ ಕಾಲ ಇರುವದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ. ಶುಭ ಸಂಖ್ಯೆ 6
ತುಲಾ: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ 1
ವೃಶ್ಚಿಕ: ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವದು. ಸಂಕಷ್ಟಗಳ ಪರಿಹಾರಕ್ಕಾಗಿ ಅಲೆದಾಡಬೇಕಾದ ಸಂಭವವಿದೆ. ಶುಭ ಸಂಖ್ಯೆ 8
ಧನು: ಧನಾರ್ಜನೆಯ ಮಾರ್ಗವು ಶ್ರೇಷ್ಠ ಮಟ್ಟದಲ್ಲಿದ್ದು, ಐಶ್ವರ್ಯ ಸಮೃದ್ಧಿಯಾಗುತ್ತದೆ. ಸಂಸಾರಿಕ ದೃಷ್ಟಿಯಲ್ಲೂ ಸುಖ, ಸಂಭ್ರಮಗಳಿದ್ದು ತೃಪ್ತಿ ಲಭಿಸಿದರೂ ಶತ್ರುಜನರ ಪೀಡೆ ಅಧಿಕವಾಗುತ್ತದೆ. ಅನಿವಾರ್ಯ ಪ್ರವಾಸ ಸಾಧ್ಯತೆ ಇದೆ. ಶುಭ ಸಂಖ್ಯೆ 3
ಮಕರ: ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ. ಶುಭ ಸಂಖ್ಯೆ 5
ಕುಂಭ: ಹೊಸ ಯೋಜನೆಗಳು ಬೇಡ.ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವದು. ಕೊಟ್ಟ ಸಾಲ ಮರುಪಾವತಿ ಆಗಲಾರದು,ವ್ಯಾಪರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಧ್ಯತೆ ಇದೆ. ಶುಭ ಸಂಖ್ಯೆ 2
ಮೀನ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು. ಶುಭ ಸಂಖ್ಯೆ 6
ಬಸವರಾಜ ಗುರೂಜಿ
(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 99728 48937)