AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಭವಿಷ್ಯ | ಜನವರಿ 08, 2021

ಜನವರಿ 8, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನಭವಿಷ್ಯ.

ದಿನಭವಿಷ್ಯ | ಜನವರಿ 08, 2021
ದಿನ ಭವಿಷ್ಯ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jan 08, 2021 | 6:06 PM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ದಕ್ಷಿಣಾಯನ, ಮಾರ್ಗಶಿರ ಮಾಸ, ಹೇಮಂತ ಋತು, ಕೃಷ್ಣಪಕ್ಷ, ದಶಮಿ, ಶುಕ್ರವಾರ, ಜನವರಿ 8, 2021. ಸ್ವಾತಿ ನಕ್ಷತ್ರ, ರಾಹುಕಾಲ: ಬೆಳಿಗ್ಗೆ 10.58 ರಿಂದ 12.21. ಬೆಂಗಳೂರಿನಲ್ಲಿ ಸೂರ್ಯೋದಯ : ಬೆಳಿಗ್ಗೆ 6.48. ಸೂರ್ಯಾಸ್ತ: ಸಂಜೆ 5.56.

ತಾ.08-01-2021 ರ ಶುಕ್ರವಾರದ ರಾಶಿಭವಿಷ್ಯ

ಮೇಷ: ವಿನಾಕಾರಣ ನಿಂದನೆಯ ಸಂಭವವಿದೆ. ಖರ್ಚು ಹೆಚ್ಚಾಗುವದು ಯೋಗ ಇರುವದರಿಂದ ಉಳಿತಾಯದ ಯೋಜನೆ ಮಾಡಿರಿ. ಮನೆಯಲ್ಲಿ ಶಾಂತಿಯುತ ನೆಮ್ಮದಿಯ ವಾತಾವರಣ ಇರುವದು. ಶುಭ ಸಂಖ್ಯೆ: 8

ವೃಷಭ: ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ. ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ. ಶುಭ ಸಂಖ್ಯೆ: 5

ಮಿಥುನ: ನಿರೀಕ್ಷೆಗೆ ತಕ್ಕಂತೆ ಕೆಲಸ ಆಗದೇ ಮಾನಸಿಕ ಅಶಾಂತಿ ಕಂಡುಬರುವದು. ವ್ಯವಹಾರಗಳಲ್ಲಿ ಹಾನಿಯಾಗುವ ಭಯ ಇರುವದು. ಪರಿಣಿತರ ಅಥವಾ ಹಿರಿಯರ ಸಲಹೆಯಂತೆ ಮುಂದುವರೆಯಿರಿ. ವಿದ್ಯಾರ್ಥಿಗಳಿಗೆ ಒಳ್ಳೆಯ ಫಲವಿದೆ. ಶುಭ ಸಂಖ್ಯೆ: 6

ಕಟಕ: ಅಭದ್ರತೆ ಕಾಡುವ ಸಂಭವವಿದೆ. ಸ್ಥಾನಚ್ಯುತಿಯಾಗುವ ಸಾಧ್ಯತೆ ಇದೆ. ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವದು. ಶುಭ ಸಂಖ್ಯೆ: 7

ಸಿಂಹ: ಆಸ್ತಿ ಖರೀದಿ ಅಥವಾ ಹೊಸ ವ್ಯವಹಾರ ಆರಂಭಕ್ಕೂ ಮೊದಲು ಆತ್ಮೀಯರೊಂದಿಗೆ ಸಮಾಲೋಚನೆ ಮಾಡಿ ಮುಂದುವರಿಯಿರಿ. ಅಡೆತಡೆಗಳ ಮಧ್ಯದಲ್ಲಿಯೂ ನಿರೀಕ್ಷಿತ ಕಾರ್ಯಗಳು ಪೂರ್ಣವಾಗುವವು. ಶುಭ ಸಂಖ್ಯೆ: 3

ಕನ್ಯಾ: ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ. ಶುಭ ಸಂಖ್ಯೆ: 2

ತುಲಾ: ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವದು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ನೆಮ್ಮದಿಯ ವಾತಾವರಣ ಇರುವದು. ಶುಭ ಸಂಖ್ಯೆ: 6

ವೃಶ್ಚಿಕ: ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವದು. ಮನೋಚಿಂತಿತ ಕಾರ್ಯ ಕೈಗೂಡುವದು. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ. ಶುಭ ಸಂಖ್ಯೆ: 4

ಧನು: ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು. ಶುಭ ಸಂಖ್ಯೆ: 9

ಮಕರ: ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವದು. ಶುಭ ಸಂಖ್ಯೆ: 5

ಕುಂಭ: ಹಿರಿಯರ ಮಾರ್ಗದರ್ಶನ ದೊರೆಯಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವದು. ಶುಭ ಸಂಖ್ಯೆ: 1

ಮೀನ: ನಿಧಾನವಾಗಿ ಕಾರ್ಯಸಿದ್ಧಿಯಾಗುವದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶಾಂತಚಿತ್ತರಾಗಿ ವ್ಯವಹರಿಸಿರಿ. ಶುಭ ಸಂಖ್ಯೆ: 7

ಬಸವರಾಜ ಗುರೂಜಿ

(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 9972848937)

Published On - 6:57 am, Fri, 8 January 21

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್