AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಭವಿಷ್ಯ | ಜನವರಿ 09, 2021

ಜನವರಿ 9, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನಭವಿಷ್ಯ.

ದಿನಭವಿಷ್ಯ | ಜನವರಿ 09, 2021
ದಿನ ಭವಿಷ್ಯ
ಆಯೇಷಾ ಬಾನು
| Edited By: |

Updated on: Jan 09, 2021 | 6:30 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ದಕ್ಷಿಣಾಯನ, ಮಾರ್ಗಶಿರ ಮಾಸ, ಹೇಮಂತ ಋತು, ಕೃಷ್ಣಪಕ್ಷ, ಏಕಾದಶಿ, ಶನಿವಾರ, ಜನವರಿ 9,2021. ವಿಶಾಖ ನಕ್ಷತ್ರ, ರಾಹುಕಾಲ: ಬೆಳಿಗ್ಗೆ 9.35 ರಿಂದ 10.58ರ ವೆರೆಗೆ. ಬೆಂಗಳೂರು ಸೂರ್ಯೋದಯ :ಬೆಳಿಗ್ಗೆ 6.48. ಸೂರ್ಯಾಸ್ತ: 5.57.

ತಾ.09-01-2021 ರ ಶನಿವಾರದ ರಾಶಿಭವಿಷ್ಯ

ಮೇಷ: ಶಾಂತಚಿತ್ತರಾಗಿ ಕೆಲಸ ನಿರ್ವಹಿಸಿರಿ. ಹೊಸ ವ್ಯಾಪಾರ, ಉದ್ಯೋಗದ ಅವಕಾಶಗಳು ಕೂಡಿ ಬರುವವು. ಹಳೆಯ ಸಮಸ್ಯೆಗಳು ಪರಿಹಾರವಾಗುವವು. ಶುಭಕಾರ್ಯದಲ್ಲಿ ಪಾಲ್ಗೊಳ್ಳುವಿರಿ. ಶುಭ ಸಂಖ್ಯೆ: 8

ವೃಷಭ: ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 4

ಮಿಥುನ: ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಅನವಶ್ಯಕ ಭಯ ಅಗತ್ಯವಿಲ್ಲ, ನಿಮ್ಮ ಸೇವೆ ಫಲ ನೀಡುವದು. ಸಂಕಷ್ಟದ ಮಧ್ಯೆಯೂ ಸಂತೋಷದ ದಿನಗಳಿವೆ. ಆಗಂತುಕರೊಂದಿಗೆ ಜಾಗೃತೆ ಅಗತ್ಯ. ಶುಭ ಸಂಖ್ಯೆ: 3

ಕಟಕ: ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆ ನಿಂತ ಕೆಲಸಗಳು ಮುಂದುವರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಶುಭ ಸಂಖ್ಯೆ: 1

ಸಿಂಹ: ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಸಹೋದರ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ. ಪರಸ್ಪರ ದೋಷಾರೋಪ ಬೇಡ. ಮಿತ್ರರ ಸಹಾಯ ದೊರೆಯುವದು. ಶುಭ ಸಂಖ್ಯೆ: 9

ಕನ್ಯಾ: ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವದು. ಸಮತೋಲಿತ ಜೀವನವಿರುವದು. ಶುಭ ಸಂಖ್ಯೆ: 6

ತುಲಾ: ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವದು. ಉನ್ನತ ವ್ಯಾಸಂಗದ ಯೋಗವಿದೆ. ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ. ಶತ್ರುಬಾಧೆ ಕಂಡುಬರುವದು. ಆರೋಗ್ಯದ ಮೇಲೆ ನಿಗಾ ಇರಲಿ. ಶುಭ ಸಂಖ್ಯೆ: 7

ವೃಶ್ಚಿಕ: ಅಂತಃಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ. ಹಳೆಯ ಸಮಸ್ಯೆಗಳು ಮತ್ತೆ ಎದುರಾಗುವ ಸಂಭವವಿದೆ. ಚಂಚಲತೆ ಬೇಡ, ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿ. ಆರ್ಥಿಕ ಲಾಭವಿದೆ ಆದರೆ ವಿದ್ಯೆಯಲ್ಲಿ ಹಿನ್ನಡೆ ಕಂಡುಬರುವದು. ಶುಭ ಸಂಖ್ಯೆ: 5

ಧನು: ಸಂಗಡಿಗರು ಸಹಕಾರ ತೋರುವದರಿಂದ ನಿರಾತಂಕ ಜೀವನ ಇರುವದು. ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವದು. ಉನ್ನತ ಶಿಕ್ಷಣದ ಕನಸು ಈಡೇರುವದು. ಶುಭ ಸಂಖ್ಯೆ: 8

ಮಕರ: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ. ಶುಭ ಸಂಖ್ಯೆ: 2

ಕುಂಭ: ತಾಪತ್ರಯಗಳೆಲ್ಲ ದೂರವಾಗಿದ್ದು ಆರ್ಥಿಕ ಸ್ಥಿತಿ ಸುಧಾರಣೆಯಾಗುತ್ತದೆ. ವ್ಯಾಪಾರಾದಿ ಉದ್ಯಮಗಳು ಇಷ್ಟದಂತೆ ನಡೆಯುತ್ತದೆ. ಕೆಲವೊಮ್ಮೆ ಸಣ್ಣ ವಿಷಯಗಳಿಗೂ ಭಯ ತೋರಿದರೂ ಹಾನಿಯಿಲ್ಲ. ಶುಭ ಸಂಖ್ಯೆ: 6

ಮೀನ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ: 3

ಬಸವರಾಜ ಗುರೂಜಿ

(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 9972848937)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ