AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿಯ ಐಪಿಎಲ್​ ಸೀಸನ್​ನಲ್ಲಿ ಡೇಲ್ ಸ್ಟೀನ್ ಆರ್​ಸಿಬಿ ಪರ ಆಡುವುದಿಲ್ಲ!

ತಮ್ಮ ಕರೀಯರ್​ನ ಉತ್ತುಂಗದಲ್ಲಿ ಬ್ಯಾಟ್ಸ್​ಮನ್​ಗಳ ಎದೆಯಲ್ಲಿ ಭೀತಿ ಹುಟ್ಟಿಸುತ್ತಿದ್ದ ಡೇಲ್ ಸ್ಟೀನ್ ಸ್ವಲ್ಪ ಸಮಯದವರೆಗೆ ಕ್ರಿಕೆಟ್​ನಿಂದ ಬ್ರೇಕ್ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಈ ವರ್ಷದ ಐಪಿಎಲ್ ಸೀಸನ್​ನಲ್ಲಿ ಅವರು ಅಡುವುದಿಲ್ಲವಂತೆ.

ಈ ಬಾರಿಯ ಐಪಿಎಲ್​ ಸೀಸನ್​ನಲ್ಲಿ ಡೇಲ್ ಸ್ಟೀನ್ ಆರ್​ಸಿಬಿ ಪರ ಆಡುವುದಿಲ್ಲ!
ಡೇಲ್ ಸ್ಟೀನ್
ಅರುಣ್​ ಕುಮಾರ್​ ಬೆಳ್ಳಿ
|

Updated on:Jan 02, 2021 | 7:08 PM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಡುವ ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಡೇಲ್ ಸ್ಟೀನ್ ಅಭಿಮಾನಿಗಳಿಗೆ ಒಂದು ನಿರಾಶಾದಾಯಕ ಸುದ್ದಿ. ಭಯಂಕರ ವೇಗ ಮತ್ತು ನಿಖರತೆಯಿದ ಬೌಲರ್​ಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸ್ಟೀನ್ ಈ ವರ್ಷ ನಡೆಯುವ ಇಂಡಿಯನ್ ಪ್ರಿಮೀಯರ್ ಲೀಗ್​ನಲ್ಲಿ ಆಡುವುದಿಲ್ಲ.

ಸರಣಿ ಟ್ವೀಟ್​ಗಳ ಮೂಲಕ ತಮ್ಮ ನಿರ್ಧಾರವನ್ನು ತಿಳಿಸಿರುವ 37ರ ಪ್ರಾಯದ ಸ್ಟೀನ್ ಸ್ವಲ್ಪ ಸಮಯದವರೆಗೆ ಕ್ರೀಡೆಯಿಂದ ದೂರವಿರಲು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ.

‘ಚಿಕ್ಕ ಸಂದೇಶದ ಮೂಲಕ ಒಂದು ವಿಷಯವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಇಷ್ಟಪಡುತ್ತೇನೆ. ಈ ಬಾರಿಯ ಐಪಿಎಲ್ ಸೀಸನ್​ನಲ್ಲಿ ನಾನು ಆರ್​ಸಿಬಿ ಪರ ಆಡುತ್ತಿಲ್ಲ. ಹಾಗಂತ ನಾನು ಬೇರೆ ಟೀಮಿಗೆ ಆಡಬೇಕೆನ್ನುವ ನಿರ್ಧಾರ ಮಾಡಿಲ್ಲ. ಸ್ವಲ್ಪ ಸಮಯದವರೆಗೆ ಕ್ರಿಕೆಟ್​ನಿಂದ ದೂರವಿರಲು ನಿಶ್ಚಯಿಸಿಕೊಂಡಿದ್ದೇನೆ,’ ಅಂತ ಸ್ಟೀನ್ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್​ನಲ್ಲಿ ಸ್ಟಿನ್, ‘ಖಂಡಿತವಾಗಿಯೂ ಬೇರೆ ಲೀಗ್​ಗಳಲ್ಲಿ ಆಡುವ ಇಚ್ಛೆ ನನಗಿಲ್ಲ. ಕ್ರೀಡೆಯಿಂದ ಒಂದು ಬ್ರೇಕ್ ತೆಗೆದುಕೊಳ್ಳುತ್ತಿದ್ದೇನೆ, ಅಷ್ಟೆ. ನನ್ನನ್ನು ಅರ್ಥಮಾಡಿಕೊಂಡಿರುವುದಕ್ಕೆ ಆರ್​ಸಿಬಿಗೆ ಧನ್ಯವಾದಗಳು,’ ಎಂದು ಬರೆದುಕೊಂಡಿದ್ದಾರೆ.

ಊಟ ಮಾಡುವಾಗ ಸೆಲ್ಫಿ ತೆಗೆದುಕೊಂಡಿರುವ ಸ್ಟೀನ್

ಸೀಮಿತ ಓವರ್​ಗಳ ಕ್ರಿಕೆಟ್ ಮೇಲೆ ಹೆಚ್ಚು ಗಮನ ಕೇಂದ್ರೀಕರಿಸಲು ಸ್ಟೀನ್ 2019 ರಲ್ಲಿ ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳಿದರು. ಕೊವಿಡ್-19 ಪಿಡುಗಿನಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್​ಗೆ ಸ್ಥಳಾಂತರಗೊಂಡ ಐಪಿಎಲ್ 2020 ಸೀಸನ್​ನಲ್ಲಿ ಸ್ಟೀನ್ ಕಳಾಹೀನ ಬೌಲಿಂಗ್ ಪ್ರದರ್ಶನ ನೀಡಿದರು. ಆಡಿದ 3 ಪಂದ್ಯಗಳಲ್ಲಿ ಅವರು ಕೇವಲ ಒಂದು ವಿಕೆಟ್ ಮಾತ್ರ ಪಡೆದರು. ಹಾಗಂತ ಎಲ್ಲಾ ಫಾರ್ಮಾಟ್​ಗಳಿಂದ ಕ್ರಿಕೆಟ್​ನಿಂದ ಸನ್ಯಾಸ ತೆಗೆದುಕೊಳ್ಳುವ ನಿರ್ಧಾರಕ್ಕೇನೂ ಸ್ಟೀನ್ ಬಂದಿಲ್ಲ.

‘ಕ್ರಮೇಣವಾಗಿ ಮತ್ತು ಹಂತಹಂತವಾಗಿ ನಾನು ಬೇರೆ ಬೇರೆ ಲೀಗ್​ಗಳಲ್ಲಿ ಆಡುತ್ತೇನೆ. ನಾನು ಕ್ರಿಕೆಟ್​ನಿಂದ ಸನ್ಯಾಸ ತೆಗೆದುಕೊಳ್ಳುತ್ತಿದ್ದೇನೆ ಅಂತ ಯಾರೂ ಭಾವಿಸಬಾರದು’ ಎಂದು ಇನ್ನೊಂದು ಟ್ವೀಟ್​ನಲ್ಲಿ ಸ್ಟೀನ್ ಹೇಳಿದ್ದಾರೆ.

ವೈಫಲ್ಯದ ಹೊಣೆಗಾರಿಕೆ ಹೊತ್ತು ಕೊಹ್ಲಿ ಆರ್​ಸಿಬಿಯ ನಾಯಕತ್ವ ತ್ಯಜಿಸಬೇಕು: ಗಂಭೀರ್ | Time for Kohli to step down from RCB captaincy: Gambhir

Published On - 7:04 pm, Sat, 2 January 21

3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್