AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನದ ಕಟ್ಟೆ ಮೇಲೆ ಕೂತಿದ್ದಕ್ಕೆ ದಲಿತ ಯುವಕನ ಹತ್ಯೆ?

ವಿಜಯಪುರ:ದೇವಸ್ಥಾನದ ಕಟ್ಟೆಯ ಮೇಲೆ ಮೇಲ್ಜಾತಿಯವರ ಸಮನಾಗಿ ಕುಳಿತಿದ್ದಕ್ಕೆ, ದಲಿತ ಸಮಾಜದ ಯುವಕನ ಹತ್ಯೆ ನಡೆದಿರುವ ಶಂಕೆ ವಿಜಯಪುರ ಜಿಲ್ಲೆಯಾದ್ಯಂತ ಈಗ ಭಾರಿ ತಲ್ಲಣ ಮೂಡಿಸಿದೆ. ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಬೂದಿಹಾಳ ಪಿ,ಹೆಚ್ ಗ್ರಾಮದಲ್ಲಿ ಆಗಸ್ಟ್ 26ರಂದು ಈ ಕೊಲೆ ನಡೆದಿದ್ದು, ಅನಿಲ್ ಇಂಗಳಗಿ (26) ಕೊಲೆಯಾದ ದುರ್ದೈವಿಯಾಗಿದ್ದಾನೆ. ಅದೇ ಗ್ರಾಮದ ಸಿದ್ದು ಬಿರಾದಾರ್ ಹಾಗೂ ಆತನ ಸಂಬಂಧಿ ಸಂತೋಷ್ ಇಬ್ಬರು ಸೇರಿ, ಅನಿಲ್​ನನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಕೆಲವು ದಿನಗಳ ಹಿಂದೆ ಗ್ರಾಮದ ಮಲ್ಲಿಕಾರ್ಜುನ […]

ದೇವಸ್ಥಾನದ ಕಟ್ಟೆ ಮೇಲೆ ಕೂತಿದ್ದಕ್ಕೆ ದಲಿತ ಯುವಕನ ಹತ್ಯೆ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 28, 2020 | 3:26 PM

Share

ವಿಜಯಪುರ:ದೇವಸ್ಥಾನದ ಕಟ್ಟೆಯ ಮೇಲೆ ಮೇಲ್ಜಾತಿಯವರ ಸಮನಾಗಿ ಕುಳಿತಿದ್ದಕ್ಕೆ, ದಲಿತ ಸಮಾಜದ ಯುವಕನ ಹತ್ಯೆ ನಡೆದಿರುವ ಶಂಕೆ ವಿಜಯಪುರ ಜಿಲ್ಲೆಯಾದ್ಯಂತ ಈಗ ಭಾರಿ ತಲ್ಲಣ ಮೂಡಿಸಿದೆ.

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಬೂದಿಹಾಳ ಪಿ,ಹೆಚ್ ಗ್ರಾಮದಲ್ಲಿ ಆಗಸ್ಟ್ 26ರಂದು ಈ ಕೊಲೆ ನಡೆದಿದ್ದು, ಅನಿಲ್ ಇಂಗಳಗಿ (26) ಕೊಲೆಯಾದ ದುರ್ದೈವಿಯಾಗಿದ್ದಾನೆ. ಅದೇ ಗ್ರಾಮದ ಸಿದ್ದು ಬಿರಾದಾರ್ ಹಾಗೂ ಆತನ ಸಂಬಂಧಿ ಸಂತೋಷ್ ಇಬ್ಬರು ಸೇರಿ, ಅನಿಲ್​ನನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

ಕೆಲವು ದಿನಗಳ ಹಿಂದೆ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ, ಮೇಲ್ಜಾತಿಯವರ ಸಮಾನಾಗಿ ದೇವಸ್ಥಾನದ ಕಟ್ಟೆಯ ಮೇಲೆ ಅನಿಲ್ ಕುಳಿತಿದ್ದ. ಇದನ್ನು ಪ್ರಶ್ನಿಸಿದ ಸಿದ್ದು ಬಿರಾದಾರ್, ಅನಿಲ್ ಜೊತೆ ಜಗಳ ಮಾಡಿದ್ದ. ಈ ದ್ವೇಷದ ಹಿನ್ನೆಲೆಯಿಂದ ಸಿದ್ದು ಬಿರಾದಾರ್ ಹಾಗೂ ಸಂತೋಷ್ ಇಬ್ಬರು ಸೇರಿ ಅನಿಲ್​ನನ್ನು ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ.

ಅನಿಲ್ ಮೃತದೇಹವನ್ನು ಸಿಂದಗಿ ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಇಟ್ಟು ಸಂಬಂಧಿಕರು ಹಾಗೂ ಕೆಲವು ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದಾರೆ. ಹಾಗೂ ಇಂಥ ಘಟನೆ ಮತ್ತೆಲ್ಲೂ ಜರುಗಬಾರದು, ಹೀಗಾಗಿ ಅನಿಲ್ ಹತ್ಯೆ ಮಾಡಿದವರನ್ನು ಕೂಡಲೇ ಬಂಧಿಸಬೇಕೆಂದು ಕುಟುಂಬಸ್ಥರು ಪೊಲೀಸರಲ್ಲಿ ಮನವಿ ಮಾಡಿದ್ದಾರೆ.

Follow Us
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು