ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಸಾಂಪ್ರದಾಯಿಕ ಪೂಜೆ; ಗಜಪಯಣಕ್ಕೆ ಚಾಲನೆ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2020 ರ ಭಾಗವಾಗಿ ಜಲ್ಲೆಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಇದರ ಅಂಗವಾಗಿ ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಇಂದು ದಸರಾ ಗಜಪಡೆಗೆ ಪೂಜೆ ಸಲ್ಲಿಸಲಾಯಿತು. ಜಿಲ್ಲಾಡಳಿತದಿಂದ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿಲಾಯಿತು. ತುಲಾ ಲಗ್ನ ಸಮಯ 10:10 ರಿಂದ 11 ರ ಶುಭ ಲಗ್ನದಲ್ಲಿ ಗಜಪಡೆಗೆ ಪೂಜೆ ಸಲ್ಲಿಸಲಾಯಿತು. ಆರ್ಚಕರಾದ ಪ್ರಹ್ಲಾದ ರಾವ್ ನೇತೃತ್ವದಲ್ಲಿ ಪೂಜೆ ನೆರವೇರಿಸಿಲಾಯಿತು. ಪೂಜೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸಹ ಭಾಗಿಯಾಗಿದ್ದರು. ಕ್ಯಾಪ್ಟನ್ ಅಭಿಮನ್ಯು ಸೇರಿದಂತೆ ಗಜಪಡೆಗೆ […]

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2020 ರ ಭಾಗವಾಗಿ ಜಲ್ಲೆಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಇದರ ಅಂಗವಾಗಿ ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಇಂದು ದಸರಾ ಗಜಪಡೆಗೆ ಪೂಜೆ ಸಲ್ಲಿಸಲಾಯಿತು. ಜಿಲ್ಲಾಡಳಿತದಿಂದ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿಲಾಯಿತು.
ತುಲಾ ಲಗ್ನ ಸಮಯ 10:10 ರಿಂದ 11 ರ ಶುಭ ಲಗ್ನದಲ್ಲಿ ಗಜಪಡೆಗೆ ಪೂಜೆ ಸಲ್ಲಿಸಲಾಯಿತು. ಆರ್ಚಕರಾದ ಪ್ರಹ್ಲಾದ ರಾವ್ ನೇತೃತ್ವದಲ್ಲಿ ಪೂಜೆ ನೆರವೇರಿಸಿಲಾಯಿತು. ಪೂಜೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸಹ ಭಾಗಿಯಾಗಿದ್ದರು.
ಕ್ಯಾಪ್ಟನ್ ಅಭಿಮನ್ಯು ಸೇರಿದಂತೆ ಗಜಪಡೆಗೆ ಅಷ್ಟಗಂಧ, ಅರಶಿನ ಮತ್ತು ಕುಂಕುಮ ಹಚ್ಚಿದ ಬಳಿಕ ಪುಷ್ಪಾರ್ಚನೆ ಮಾಡಿ ಗಜಪಯಣಕ್ಕೆ ಚಾಲನೆ ನೀಡಲಾಯಿತು.

Published On - 1:48 pm, Thu, 1 October 20



