ಎಂ.ಪಿ. ರೇಣುಕಾಚಾರ್ಯ ಅವರನ್ನು ಬೆದರಿಸಲು ಹೋಗಿ ಬಲೆಗೆ ಬಿತ್ತು ಕೋತಿ!

ಶಾಸಕ ರೇಣುಕಾಚಾರ್ಯ ಮೇಲೆ ಕೋತಿ ಎರಗಲು ಹೋದ ನಂತರ ಅದನ್ನು ಸೆರೆ ಹಿಡಿಯಲು ವಿಶೇಷ ತಂಡ ಕರೆಸುವುದಾಗಿ ವಲಯ ಅರಣ್ಯಾಧಿಕಾರಿ ಭರವಸೆ ನೀಡಿದ್ದರು. ಕಾರ್ಯಾಚರಣೆಯ ನಂತರ ಇದೀಗ ಕೋತಿ ಬಲೆಗೆ ಬಿದ್ದಿದೆ.

ಎಂ.ಪಿ. ರೇಣುಕಾಚಾರ್ಯ ಅವರನ್ನು ಬೆದರಿಸಲು ಹೋಗಿ ಬಲೆಗೆ ಬಿತ್ತು ಕೋತಿ!
ಬಲೆಗೆ ಬಿದ್ದ ಕೋತಿ
Follow us
Skanda
|

Updated on:Dec 16, 2020 | 7:22 PM

ದಾವಣಗೆರೆ: ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ಆಪ್ತ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕ  ಎಂ.ಪಿ.ರೇಣುಕಾಚಾರ್ಯ ಅವರನ್ನು ಬೆದರಿಸಿದ್ದ ಕೋತಿ ಬಲೆಗೆ ಬಿದ್ದಿದೆ. ನಿನ್ನೆ ಪಟ್ಟಣದ ತಾಲೂಕು ಕಚೇರಿ ಎದುರು ರೇಣುಕಾಚಾರ್ಯ ಕೋತಿ ದಾಳಿಯಿಂದ ಸ್ವಲ್ಪದರಲ್ಲೇ ಬಚಾವಾಗಿದ್ದರು.

ಸುಮಾರು 1 ತಿಂಗಳಿನಿಂದ 20ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿದ್ದ ಕೋತಿ ಸಾರ್ವಜನಿಕರ ನೆಮ್ಮದಿಗೆಡಿಸಿತ್ತು. ಅರಣ್ಯ ಇಲಾಖೆಯವರು ಬಲೆ ತಂದು ಹಿಡಿಯಲು ಎಷ್ಟೇ ಪ್ರಯತ್ನಿಸಿದರೂ ಕೋತಿ ತಪ್ಪಿಸಿಕೊಳ್ಳುತ್ತಿದೆ ಎಂದು ಸಬೂಬು ನೀಡುತ್ತಿದ್ದರು.

ಬಸ್ ನಿಲ್ದಾಣ, ಪುರಸಭೆ, ದುರ್ಗಿಗುಡಿ, ಟಿ.ಬಿ.ಸರ್ಕಲ್ ಪ್ರದೇಶದಲ್ಲಿ ಅಡ್ಡಾಡುತ್ತಿದ್ದ ಕೋತಿ ಕಂಡಕಂಡವರ ಮೇಲೆರಗುತ್ತಿತ್ತು. ಅಂತೆಯೇ, ಇಂದು ಬೆಳಗ್ಗೆ ರೇಣುಕಾಚಾರ್ಯ ಅವರ ಮೇಲೆ ಎರಗಲು ಹೋಗಿತ್ತಾದರೂ ಸಹಚರರ ಸಹಾಯದಿಂದ ಶಾಸಕರು ಬಚಾವಾಗಿದ್ದರು.

ಶಾಸಕರ ಮೇಲೆ ಕೋತಿ ಎರಗಲು ಹೋದ ನಂತರ ಅದನ್ನು ಸೆರೆ ಹಿಡಿಯಲು ವಿಶೇಷ ತಂಡ ಕರೆಸುವುದಾಗಿ ವಲಯ ಅರಣ್ಯಾಧಿಕಾರಿ ಭರವಸೆ ನೀಡಿದ್ದರು. ಕಾರ್ಯಾಚರಣೆಯ ನಂತರ ಇದೀಗ ಕೋತಿ ಬಲೆಗೆ ಬಿದ್ದಿದೆ. 20ಕ್ಕೂ ಹೆಚ್ಚು ಜನರನ್ನು ಕಾಡಿದ್ದ ಕೋತಿ ಕೊನೆಗೂ ಬಲೆಗೆ ಬಿದ್ದಿರುವುದು ಹೊನ್ನಾಳಿ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಕೋತಿ ದಾಳಿಯಿಂದ ರೇಣುಕಾಚಾರ್ಯ ಬಚಾವ್

Published On - 5:50 pm, Wed, 16 December 20

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ