ದಾವಣಗೆರೆ ಮುಳ್ಳು ಗದ್ದುಗೆ ಉತ್ಸವದಲ್ಲಿ ಸಾವಿರಾರು ಭಕ್ತರು ಭಾಗಿ

ಪೊಲೀಸ್​ ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ದಾವಣಗೆರೆ ಪೊಲೀಸರು ವಿಶಿಷ್ಟ ಮ್ಯಾರಥಾನ್​ ಆಯೋಜಿಸಿದ್ದಾರೆ. ರನ್​ ವಿತ್​ ಪೊಲೀಸ್​ ಎಂಬ ಹೆಸರಿನಡಿ ಈ ಓಟವನ್ನು ಆಯೋಜನೆ ಮಾಡಲಾಗಿದೆ. ಇನ್ನೊಂದೆಡೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹರನಹಳ್ಳಿ ಕೆಂಗಾಪುರದಲ್ಲಿ ರಾಮಲಿಂಗೇಶ್ವರ ಸ್ವಾಮೀಜಿ ಮುಳ್ಳು ಗದ್ದುಗೆ ಉತ್ಸವ ನಡೆಯಿತು.

ದಾವಣಗೆರೆ ಮುಳ್ಳು ಗದ್ದುಗೆ ಉತ್ಸವದಲ್ಲಿ ಸಾವಿರಾರು ಭಕ್ತರು ಭಾಗಿ
ಮುಳ್ಳುಗದ್ದುಗೆ ಉತ್ಸವ
Follow us
Skanda
|

Updated on:Mar 13, 2021 | 10:01 AM

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಹರನಹಳ್ಳಿ ಕೆಂಗಾಪುರದಲ್ಲಿ ರಾಮಲಿಂಗೇಶ್ವರ ಸ್ವಾಮೀಜಿ ಮುಳ್ಳು ಗದ್ದುಗೆ ಉತ್ಸವ ನಡೆಯಿತು. ಮುಳ್ಳುಗದ್ದುಗೆ ಉತ್ಸವದಲ್ಲಿ ಸಾವಿರಾರು ಭಕ್ತರು ಭಾಗಿಯಾಗಿ ಭಕ್ತಿ ಮೆರೆದರು. ರಾಮಲಿಂಗೇಶ್ವರ ಸ್ವಾಮೀಜಿ ಅವರ ಮುಳ್ಳು ಗದ್ದುಗೆ ಉತ್ಸವ ಮಠದಿಂದ ಸುಮಾರು ಎರಡು ಕಿಲೋ ಮೀಟರ್ ದೂರದ ತನಕ ಸಾಗುವುದಾಗಿದ್ದು, ಕಳೆದ 45 ವರ್ಷಗಳಿಂದ ನಡೆಯುತ್ತಿರುವ ಉತ್ಸವಕ್ಕೆ ರಾಜ್ಯದ ವಿವಿಧ ಕಡೆಯಿಂದ ಭಕ್ತರು ಆಗಮಿಸುತ್ತಾರೆ.

ಈ ಉತ್ಸವದಲ್ಲಿ ಮೆರೆದಿದ್ದ ಜನ ಸ್ವಾಮೀಜಿಯನ್ನು ಪಲ್ಲಕ್ಕಿಯಲ್ಲಿ ಕುಳ್ಳಿರಿಸಿ, ನಂತರ ಹೊತ್ತು ಮೆರೆಯುವ ಮೂಲಕ ಭಕ್ತಿ ಪ್ರದರ್ಶಿಸಿದರು. ಕೊರೊನಾ ನಂತರ ಆಯೋಜಿಸಲಾಗಿದ್ದ ಊರ ಉತ್ಸವಕ್ಕೆ ಸ್ಥಳೀಯರು ಬಹು ಸಂಭ್ರಮದಿಂದ ಕೈ ಜೋಡಿಸಿದರು. ಪರ ಊರುಗಳ ಭಕ್ತಾದಿಗಳು ಸಹ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಭಕ್ತಿಯಿಂದ ಭಾಗವಹಿಸಿದರು.

ಪೊಲೀಸರ ಜೊತೆ ಸಾರ್ವಜನಿಕರ ಓಟ ಪೊಲೀಸ್​ ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ದಾವಣಗೆರೆ ಪೊಲೀಸರು ವಿಶಿಷ್ಟ ಮ್ಯಾರಥಾನ್​ ಆಯೋಜಿಸಿದ್ದಾರೆ. ರನ್​ ವಿತ್​ ಪೊಲೀಸ್​ ಎಂಬ ಹೆಸರಿನಡಿ ಈ ಓಟವನ್ನು ಆಯೋಜನೆ ಮಾಡಲಾಗಿದ್ದು, ಸುಮಾರು 10 ಕಿಲೋ ಮೀಟರ್​ ದೂರ ಪೊಲೀಸರು ಹಾಗೂ ಸಾರ್ವಜನಿಕರು ಜೊತೆಯಾಗಿ ಓಡಿದ್ದಾರೆ. ಪೂರ್ವ ವಲಯ ಐಜಿಪಿ ರವಿ.ಎಸ್ ಹಾಗೂ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮ್ಯಾರಥಾನ್​ಗೆ ಚಾಲನೆ ನೀಡಿದ್ದು ಸಾರ್ವಜನಿಕರು ಅತ್ಯತ್ಸಾಹದಿಂದ ಭಾಗಿಯಾಗಿದ್ದಾರೆ.

ದಾವಣಗೆರೆ ನಗರದ ಜಯದೇವ ವೃತ್ತದಿಂದ ಸುಮಾರು ಹತ್ತು ಕಿಲೋ ಮೀಟರ್ ದೂರದ ತನಕ ಆಯೋಜಿಸಲಾಗಿದ್ದ ಈ ಮ್ಯಾರಥಾನ್​ನಲ್ಲಿ ಪುರುಷರು ಹಾಗೂ ಮಹಿಳೆಯರಿಗಾಗಿ ಪ್ರತ್ಯೇಕ ಸ್ಪರ್ಧೆ ಏರ್ಪಡಿಸಲಾಗಿತ್ತು. ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ಇಂಥದ್ದೊಂದು ಪ್ರಯತ್ನಕ್ಕೆ ಪೊಲೀಸರು ಕೈ ಹಾಕಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಾರ್ವಜನಿಕರು ಪೊಲೀಸರೊಂದಿಗೆ ಓಡುವ ಮೂಲಕ ಮ್ಯಾರಥಾನ್​ನಲ್ಲಿ ಭಾಗಿಯಾದರು.

Davanagere News

ದಾವಣಗೆರೆಯಲ್ಲಿ ನಡೆದ ಕಾರ್ಯಕ್ರಮಗಳು

ಇದನ್ನೂ ಓದಿ: ದಾವಣಗೆರೆಯಲ್ಲಿ ಭಕ್ತರ ಜತೆ ಮಾತನಾಡುವ ದೇವರು… ಏನಿದರ ವಿಶೇಷತೆ? 

ದಾವಣಗೆರೆಯಲ್ಲಿ ವೀರಭದ್ರ ದೇವರ ಉತ್ಸವ: ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಎಂಬ ಅಲಿಖಿತ ನಿಯಮ; ಹರಿದು ಬಂದ ಭಕ್ತ ಸಾಗರ

Published On - 9:59 am, Sat, 13 March 21

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ