AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಕಿ ಕೆರೆ ಬಳಿ ಜಲಪಾತ ನಿರ್ಮಾಣ: ಸ್ಥಳ ಪರಿಶೀಲನೆ ಮಾಡಿದ ಡಿಸಿಎಂ

ಶಿವರಾತ್ರಿಯ ದಿನ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ಸ್ಯಾಂಕಿ ಟ್ಯಾಂಕಿನ ಬಳಿ ನಿರ್ಮಿಸುತ್ತಿರುವ ಫಾಲ್ಸ್​ನ ಕಾಮಗಾರಿ ವೀಕ್ಷಣೆ ಮಾಡಿದರು.

ಸ್ಯಾಂಕಿ ಕೆರೆ ಬಳಿ ಜಲಪಾತ ನಿರ್ಮಾಣ: ಸ್ಥಳ ಪರಿಶೀಲನೆ ಮಾಡಿದ ಡಿಸಿಎಂ
ಸ್ಯಾಂಕಿ ಕೆರೆ​ ಬಳಿ ಸಿದ್ಧವಾಗುತ್ತಿರುವ ಜಲಪಾತ
ಡಾ. ಭಾಸ್ಕರ ಹೆಗಡೆ
| Updated By: Skanda|

Updated on: Mar 11, 2021 | 9:31 PM

Share

ಬೆಂಗಳೂರು: ಉದ್ಯಾನನಗರಿ ಬೆಂಗಳೂರಿನಲ್ಲಿ ಜಲಪಾತವೊಂದು ಸೃಷ್ಟಿಯಾಗಲಿದ್ದು, ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಮಹಾ ಶಿವರಾತ್ರಿ ದಿನ ಆ ಯೋಜನೆ ಕುರಿತು ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಮಲ್ಲೇಶ್ವರದ ಸ್ಯಾಂಕಿ ಕೆರೆಯ ಈಜುಕೊಳದ ಪಕ್ಕದಲ್ಲಿ ಜಲಪಾತ ನಿರ್ಮಿಸುವ ಸಂಬಂಧ ಗುರುವಾರ ಬೆಳಗ್ಗೆ ಡಿಸಿಎಂ ಸ್ಥಳ ಪರಿಶೀಲನೆ ನಡೆಸಿದರು. ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಿಸಿಕೊಂಡು ಕೃತಕ ಜಲಪಾತವನ್ನು ನಿರ್ಮಾಣ ಮಾಡಲಾಗುತ್ತಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ, “ಸದಾಶಿವನಗರದ ಸ್ಯಾಂಕಿ ಕೆರೆ ನವೀಕರಣ ಕಾಮಗಾರಿ‌‌‌ ನಡೆಯುತ್ತಿದ್ದು ಹೆಚ್ಚುವರಿಯಾಗಿ ಕೆರೆ ಪಕ್ಕದ ಈಜುಕೊಳಕ್ಕೆ ಹೊಂದಿಕೊಂಡಂತೆ ಜಲಪಾತದ ಗೋಡೆ‌ ನಿರ್ಮಿಸಲಾಗುವುದು. ವಾಟರ್ ಫಾಲ್ಸ್ ಜತೆಗೆ ಏರಿಯೇಟರ್ಸ್ ಕೂಡ ಅಳವಡಿಸಲಾಗುವುದು. ಇದರಿಂದ ಕೆರೆ ನೀರು ಸ್ವಚ್ಛ ಆಗಲಿದೆ. ಈಗಾಗಲೇ ಸರ್ವಋತುಗಳಲ್ಲಿಯೂ ನಳನಳಿಸುವ ಉದ್ಯಾನವನ ಬೆಳೆಸಿರುವುದರಿಂದ ಈ ಜಲಪಾತ ಮತ್ತಷ್ಟು ಮೆರಗು ನೀಡಲಿದೆ. ಮಲ್ಲೇಶ್ವರದ ಪಾರಂಪರಿಕ ವೈಭವಕ್ಕೆ ಪೂರಕವಾಗಿರಲಿದೆ. ಇದಕ್ಕೆ ಒಂದೂವರೆ ಕೋಟಿ ಖರ್ಚಾಗುವ ಅಂದಾಜಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

Sankey Tank

ಸ್ಯಾಂಕಿ ಕೆರೆ​ ಬಳಿ ಸಿದ್ಧವಾಗುತ್ತಿರುವ ಜಲಪಾತ

12ರಿಂದ 15 ಅಡಿ ಎತ್ತರ ಹಾಗೂ ಸುಮಾರು 100 ಅಡಿ ಅಗಲ ಇರಲಿರುವ ಈ ಜಲಪಾತ ನಗರದ ಪ್ರವಾಸೋದ್ಯಮಕ್ಕೂ ಪುರಕವಾಗಿರಲಿದೆ ಎಂದು ಡಿಸಿಎಂ ಮಾಹಿತಿ ನೀಡಿದರು. ಸ್ಯಾಂಕಿ ಕೆರೆಯು ಮಲ್ಲೇಶ್ವರಕ್ಕೆ ಮಾತ್ರವಲ್ಲ, ಇಡೀ ಬೆಂಗಳೂರಿಗೆ ಒಂದು ಮಹತ್ವದ ತಾಣ. ಮುಂದಿನ ದಿನಗಳಲ್ಲಿ ಕೆರೆಗೆ ಇನ್ನಷ್ಟು ಕಾಯಕಲ್ಪ ನೀಡಲಾಗುವುದು. ಪ್ರತಿಯೊಬ್ಬ ಬೆಂಗಳೂರಿನ ನಿವಾಸಿಯೂ ಇಲ್ಲಿಗೆ ಭೇಟಿ ನೀಡಲೇಬೇಕು. ಆ ರೀತಿಯಲ್ಲಿ ಇಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದರು.

ಪಾಲಿಕೆ‌ಯ ಮುಖ್ಯ ಎಂಜಿನಿಯರ್ (ಕೆರೆ) ಮೋಹನ್ ಕೃಷ್ಣ, ಪಾಲಿಕೆ ಕಾರ್ಯನಿರ್ವಾಹಕ ಎಂಜಿನಿಯರ್ ಪಾಪರೆಡ್ಡಿ, ಸಹಾಯಕ ಎಂಜಿನಿಯರ್ ಗಳಾದ ಸುಷ್ಮಾ, ಸ್ಬಪ್ನಾ, ಬಿಬಿಎಂಪಿ ಮಾಜಿ ಸದಸ್ಯರಾದ ಮಂಜುನಾಥ ರಾಜು ಸೇರಿದಂತೆ ಹಲವು ಬಿಜೆಪಿ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

ಇದನ್ನೂ ಓದಿ:

ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿಗೆ ರಾಜವಂಶಸ್ಥರಿಂದ ಸಲಹೆ ಪಡೆದ ಸಚಿವ ಸಿ.ಪಿ.ಯೋಗೇಶ್ವರ್ 

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!