MLC ಫೈಟ್​ನಲ್ಲಿ ಗೆದ್ದ ಸವದಿ: ಪರಿಷತ್​ ಆಯ್ಕೆಯಿಂದ DCM ಪಟ್ಟ ಸುಭದ್ರ

ಬೆಂಗಳೂರು: ವಿಧಾನ ಪರಿಷತ್​ನ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಡಿಸಿಎಂ ಹಾಗೂ ಬಿಜೆಪಿ ಅಭ್ಯರ್ಥಿ ಲಕ್ಷ್ಮಣ್ ಸವದಿ ಗೆಲುವಿನ ನಗೆ ಬೀರಿದ್ದಾರೆ. ಚಲಾವಣೆಯಾಗಿದ್ದ 120 ಮತಗಳ ಪೈಕಿ ಲಕ್ಷ್ಮಣ್ ಸವದಿ 113 ಮತಗಳನ್ನು ಪಡೆದಿದ್ದು, 7 ಮತಗಳು ಅಸಿಂಧುವಾಗಿದೆ. ಈ ಮೂಲಕ ಉಪ ಮುಖ್ಯಮಂತ್ರಿ ಲಕ್ಷ್ಮಣ್​ ಸವದಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ನಂತರ ಅನಿಲ್ ಕುಮಾರ್ ನಿವೃತ್ತರಾಗಿದ್ದರು. ಹಾಗಾಗಿ ಡಿಸಿಎಂ ಲಕ್ಷ್ಮಣ ಸವದಿ ಗೆಲುವಿನ ಹಾದಿ ಸುಗಮವಾಗಿದೆ. ರಿಜ್ವಾನ್​ ಅರ್ಷದ್​ ಶಾಸಕರಾಗಿ ಆಯ್ಕೆಯಾಗಿದ್ದರಿಂದ […]

MLC ಫೈಟ್​ನಲ್ಲಿ ಗೆದ್ದ ಸವದಿ: ಪರಿಷತ್​ ಆಯ್ಕೆಯಿಂದ DCM ಪಟ್ಟ ಸುಭದ್ರ
ಸಾಧು ಶ್ರೀನಾಥ್​

Updated on: Feb 17, 2020 | 6:30 PM

ಬೆಂಗಳೂರು: ವಿಧಾನ ಪರಿಷತ್​ನ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಡಿಸಿಎಂ ಹಾಗೂ ಬಿಜೆಪಿ ಅಭ್ಯರ್ಥಿ ಲಕ್ಷ್ಮಣ್ ಸವದಿ ಗೆಲುವಿನ ನಗೆ ಬೀರಿದ್ದಾರೆ. ಚಲಾವಣೆಯಾಗಿದ್ದ 120 ಮತಗಳ ಪೈಕಿ ಲಕ್ಷ್ಮಣ್ ಸವದಿ 113 ಮತಗಳನ್ನು ಪಡೆದಿದ್ದು, 7 ಮತಗಳು ಅಸಿಂಧುವಾಗಿದೆ.

ಈ ಮೂಲಕ ಉಪ ಮುಖ್ಯಮಂತ್ರಿ ಲಕ್ಷ್ಮಣ್​ ಸವದಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ನಂತರ ಅನಿಲ್ ಕುಮಾರ್ ನಿವೃತ್ತರಾಗಿದ್ದರು. ಹಾಗಾಗಿ ಡಿಸಿಎಂ ಲಕ್ಷ್ಮಣ ಸವದಿ ಗೆಲುವಿನ ಹಾದಿ ಸುಗಮವಾಗಿದೆ.

ರಿಜ್ವಾನ್​ ಅರ್ಷದ್​ ಶಾಸಕರಾಗಿ ಆಯ್ಕೆಯಾಗಿದ್ದರಿಂದ ತೆರವಾಗಿದ್ದ ಒಂದು ಸ್ಥಾನಕ್ಕೆ ಇಂದು ಉಪಚುನಾವಣೆ ನಡೆದಿದೆ. ಸಂಜೆ 4 ಗಂಟೆಯವರೆಗೆ ಮತದಾನ ನಡೆದಿದ್ದು, 5 ಗಂಟೆ ನಂತರ ಚುನಾವಣಾ ಅಧಿಕಾರಿ ವಿಶಾಲಾಕ್ಷಿ ನೇತೃತ್ವದಲ್ಲಿ ಮತ ಎಣಿಕೆ ಮತ ಎಣಿಕೆ ಕಾರ್ಯ ನಡೆದಿದೆ.

ಪರಿಷತ್ ಚುನಾವಣೆಯಲ್ಲಿ ಗೆಲುವು ಹಿನ್ನೆಲೆ ಡಿಸಿಎಂ ಲಕ್ಷ್ಮಣ ಸವದಿ ಪಕ್ಷದ ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.  ಈ ಗೆಲುವಿನಿಂದ ಪಕ್ಷ ಹಾಗೂ ಸರಕಾರದಲ್ಲಿ ಹೊಸ ಶಕ್ತಿಯಿಂದ ಕೆಲಸ ಮಾಡಲು ಅವಕಾಶ ಸಿಕ್ಕಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.

Published On - 6:05 pm, Mon, 17 February 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us