ಬಳ್ಳಾರಿಯಲ್ಲಿ ಮತ್ತೆ ಮರುಕಳಿಸಿತು ಅಮಾನವೀಯ ಘಟನೆ!
ಬಳ್ಳಾರಿ: ಹೊಸಪೇಟೆ ತಾಲೂಕು ಆಸ್ಪತ್ರೆಯ ಆವರಣದಲ್ಲಿ ಮೃತದೇಹವನ್ನು ಅನಾಥವಾಗಿ ಬಿಟ್ಟಿರುವ ಅಮಾನವೀಯ ಘಟನೆ ನಡೆದಿದೆ. ಆಟೋ ಚಾಲಕನೊಬ್ಬ ತನ್ನ ಮೊಬೈಲ್ನಲ್ಲಿ ಈ ದೃಶ್ಯವನ್ನು ಸೆರೆ ಹಿಡಿದಿದ್ದಾನೆ. ವಿಡಿಯೋ ಮಾಡುತ್ತಾ, ಇಲ್ಲಿನ ಹೊಸಪೇಟೆ ತಾಲೂಕು ಆಸ್ಪತ್ರೆ ಹೇಗಿದೆ ಎಂಬುದು ನಿಮಗೆ ಗೊತ್ತು. ಪ್ರತಿನಿತ್ಯ ಈ ಆಸ್ಪತ್ರೆಗೆ ಗರ್ಭಿಣಿಯರು ಸೇರಿದಂತೆ ಅನೇಕರು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಹೀಗಾಗಿ ಕೊರೊನಾ ವೈರಸ್ ಪರೀಕ್ಷಾ ಕೇಂದ್ರವನ್ನು ಬೇರೆಡೆ ಸ್ಥಳಾಂತರಿಸಬೇಕೆಂದು ಮನವಿ ಮಾಡಿದ್ದಾನೆ. ಮೃತದೇಹವನ್ನು ಆಸ್ಪತ್ರೆ ಆವರಣದಲ್ಲಿಯೇ ಬಿಟ್ಟಿರುವ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಅಮಾನವೀಯವಾಗಿ ವರ್ತಿಸಿದ್ದಾರೆ. […]
ಬಳ್ಳಾರಿ: ಹೊಸಪೇಟೆ ತಾಲೂಕು ಆಸ್ಪತ್ರೆಯ ಆವರಣದಲ್ಲಿ ಮೃತದೇಹವನ್ನು ಅನಾಥವಾಗಿ ಬಿಟ್ಟಿರುವ ಅಮಾನವೀಯ ಘಟನೆ ನಡೆದಿದೆ. ಆಟೋ ಚಾಲಕನೊಬ್ಬ ತನ್ನ ಮೊಬೈಲ್ನಲ್ಲಿ ಈ ದೃಶ್ಯವನ್ನು ಸೆರೆ ಹಿಡಿದಿದ್ದಾನೆ. ವಿಡಿಯೋ ಮಾಡುತ್ತಾ, ಇಲ್ಲಿನ ಹೊಸಪೇಟೆ ತಾಲೂಕು ಆಸ್ಪತ್ರೆ ಹೇಗಿದೆ ಎಂಬುದು ನಿಮಗೆ ಗೊತ್ತು. ಪ್ರತಿನಿತ್ಯ ಈ ಆಸ್ಪತ್ರೆಗೆ ಗರ್ಭಿಣಿಯರು ಸೇರಿದಂತೆ ಅನೇಕರು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಹೀಗಾಗಿ ಕೊರೊನಾ ವೈರಸ್ ಪರೀಕ್ಷಾ ಕೇಂದ್ರವನ್ನು ಬೇರೆಡೆ ಸ್ಥಳಾಂತರಿಸಬೇಕೆಂದು ಮನವಿ ಮಾಡಿದ್ದಾನೆ.
ಮೃತದೇಹವನ್ನು ಆಸ್ಪತ್ರೆ ಆವರಣದಲ್ಲಿಯೇ ಬಿಟ್ಟಿರುವ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಅಮಾನವೀಯವಾಗಿ ವರ್ತಿಸಿದ್ದಾರೆ. ಕೆಲ ಗಂಟೆಗಳ ಬಳಿಕ ಮೃತದೇಹಕ್ಕೆ ಪಿಪಿಇ ಕಿಟ್ ಹಾಕಿ ಮುಚ್ಚಿದ್ದಾರೆ. ಈ ಘಟನೆ ಬಗ್ಗೆ ಇಲ್ಲಿನ ಆಟೋ ಚಾಲಕರು ಬೇಸರ ವ್ಯಕ್ತಪಡಿಸಿದ್ದಾರೆ. ಆದರೆ ಹೀಗೆ ಆಸ್ಪತ್ರೆ ಆವರಣದಲ್ಲಿ ಅನಾಥವಾಗಿ ಬಿಟ್ಟಿರುವ ಈ ಮೃತದೇಹ ಕೊರೊನಾ ದಿಂದ ಸಾವನ್ನಪ್ಪಿದ್ದರೋ ಅಥವಾ ಬೇರೆ ಕಾಯಿಲೆಯಿಂದ ಸಾವನ್ನಪ್ಪಿದ್ದರೋ ಅನ್ನೋದು ಗೊತ್ತಾಗಬೇಕಿದೆ.