ಮಹಾಮಾರಿಗೆ ವಿಜಯಪುರ ಜಿಲ್ಲೆಯಲ್ಲಿ 4ನೇ ಬಲಿ
ವಿಜಯಪುರ: ಮಹಾಮಾರಿ ಕೊರೊನಾಗೆ ಜಿಲ್ಲೆಯಲ್ಲಿ ನಾಲ್ಕನೇ ಬಲಿಯಾಗಿದೆ. ಪೇಶಂಟ್ ನಂಬರ್ 1291 ಎಂದು ಗುರುತಿಸಲಾಗಿರುವ 65 ವರ್ಷದ ಪುರುಷ ಇಂದು ಮಾರಕ ಸೋಂಕಿಗೆ ಬಲಿಯಾಗಿದ್ದಾರೆ. ಈಗಾಗಲೇ ಕಂಟೇನಮೆಂಟ್ ಏರಿಯಾದಲ್ಲಿ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಉಸಿರಾಟ ತೊಂದರೆ ಹಾಗೂ ಹೃದಯ ಸಂಬಂಧಿ ಖಾಯಿಲೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಜಿಲ್ಲಾಸ್ಪತ್ರೆಗೆ ಕರೆ ತರುವ ವೇಳೆ ಮೃತಪಟ್ಟಿದ್ದಾರೆ. ಮೃತನ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ಮೃತನಲ್ಲಿ ಸೋಂಕು ದೃಢಪಟ್ಟಿದೆ. ಇದರಿಂದ ಕಂಟೇನಮೆಂಟ್ ಏರಿಯಾದಲ್ಲಿ ಮತ್ತಷ್ಟು ಭಯದ ವಾತಾವರಣ […]
ವಿಜಯಪುರ: ಮಹಾಮಾರಿ ಕೊರೊನಾಗೆ ಜಿಲ್ಲೆಯಲ್ಲಿ ನಾಲ್ಕನೇ ಬಲಿಯಾಗಿದೆ. ಪೇಶಂಟ್ ನಂಬರ್ 1291 ಎಂದು ಗುರುತಿಸಲಾಗಿರುವ 65 ವರ್ಷದ ಪುರುಷ ಇಂದು ಮಾರಕ ಸೋಂಕಿಗೆ ಬಲಿಯಾಗಿದ್ದಾರೆ.
ಈಗಾಗಲೇ ಕಂಟೇನಮೆಂಟ್ ಏರಿಯಾದಲ್ಲಿ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಉಸಿರಾಟ ತೊಂದರೆ ಹಾಗೂ ಹೃದಯ ಸಂಬಂಧಿ ಖಾಯಿಲೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಜಿಲ್ಲಾಸ್ಪತ್ರೆಗೆ ಕರೆ ತರುವ ವೇಳೆ ಮೃತಪಟ್ಟಿದ್ದಾರೆ.
ಮೃತನ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ಮೃತನಲ್ಲಿ ಸೋಂಕು ದೃಢಪಟ್ಟಿದೆ. ಇದರಿಂದ ಕಂಟೇನಮೆಂಟ್ ಏರಿಯಾದಲ್ಲಿ ಮತ್ತಷ್ಟು ಭಯದ ವಾತಾವರಣ ಮೂಡಿದೆ. ಈಗಾಗಲೇ ಜಿಲ್ಲೆಯಲ್ಲಿ ಓರ್ವ ಮಹಿಳೆ ಮತ್ತು ಇಬ್ಬರು ಪುರುಷರು ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
Published On - 1:05 pm, Tue, 19 May 20