ಮನೆ ಕುಸಿತ: ದಂಪತಿ ಸಾವು
ಜಿಟಿಜಿಟಿ ಮಳೆಯಿಂದಾಗಿ ಮಣ್ಣಿನ ಮನೆ ಕುಸಿದು ಬಿದ್ದು ದಂಪತಿಗಳು ಸಾವನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಕೌಲ್ ಬಜಾರ್ ಪ್ರದೇಶದ ಅದೋನಿ ಸ್ಟ್ರೀಟ್ನಲ್ಲಿ ನಡೆದಿದೆ.
ಬಳ್ಳಾರಿ: ಜಿಟಿಜಿಟಿ ಮಳೆಯಿಂದಾಗಿ ಮಣ್ಣಿನ ಮನೆ ಕುಸಿದು ಬಿದ್ದು ದಂಪತಿಗಳು ಸಾವನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಕೌಲ್ ಬಜಾರ್ ಪ್ರದೇಶದ ಅದೋನಿ ಸ್ಟ್ರೀಟ್ನಲ್ಲಿ ನಡೆದಿದೆ.
ಕೊಲಣ್ಣ (45 ವರ್ಷ) ಹಾಗೂ ಆತನ ಪತ್ನಿ ಸಾವಿತ್ರಿ (40) ಮೃತರು. ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಘಟನೆಯ ಸಂದರ್ಭದಲ್ಲಿ ದಂಪತಿಯ ಪುತ್ರ ಸಂತೋಷ್ (13) ಮಣ್ಣಿನಲ್ಲಿ ಸಿಲುಕಿಕೊಂಡಿದ್ದ. ಇದನ್ನು ಗಮನಿಸಿದ ಸ್ಥಳೀಯರು ಆತನನ್ನು ರಕ್ಷಿಸಿದ್ದಾರೆ. ಸಂತೋಷ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಕಳೆದ 2 ದಿನಗಳಿಂದ ನಿವಾರ್ ಚಂಡಮಾರುತದಿಂದಾಗಿ ಮಳೆಯ ಆರ್ಭಟ ಹೆಚ್ಚಿತ್ತು. ಈ ಕಾರಣದಿಂದಾಗಿ ದಂಪತಿಗಳ ಮಣ್ಣಿನ ಮನೆ ಸಂಪೂರ್ಣವಾಗಿ ನೆಲಸಮಗೊಂಡಿದೆ. ಮಣ್ಣಿನಲ್ಲಿ ಸಿಲುಕಿದ ದಂಪತಿಗಳು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕೌಲಬಜಾರ್ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
Published On - 11:26 am, Tue, 1 December 20