AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಸಾವು, ಬಿಲ್​ ಪಾವತಿಗೆ ರಂಪಾಟ: ಖಾಸಗಿ ಆಸ್ಪತ್ರೆ ಎದುರು ತಮಟೆ ಹೋರಾಟ

ವಿಜಯಪುರ: ಖಾಸಗಿ ಆಸ್ಪತ್ರೆಯಲ್ಲಿ ಸೋಂಕಿತ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ಬಾಕಿ ಬಿಲ್ ಪಾವತಿಸಿ ಶವ ತೆಗೆದುಕೊಂಡು ಹೋಗಲು ಸೂಚನೆ ನೀಡಿದ ಆಸ್ಪತ್ರೆ ವಿರುದ್ಧ ಮೃತನ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ. ಅಂದ ಹಾಗೆ, ಘಟನೆ ನಗರದ ಬಂಜಾರಾ ಕ್ರಾಸ್ ಬಳಿಯ ಕೋಟಿ ಆಸ್ಪತ್ರೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಸಂಕೇಶ್ವರ ಮೂಲದ ರಾಜು ಭೋವಿ (40) ಕಳೆದ 12 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದನಂತೆ. ಕೋರೊನಾದಿಂದ ಬಳಲುತ್ತಿದ್ದ ರಾಜು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದನು. ಈಗಾಗಲೇ ಮೃತ ಸೋಂಕಿತನ ಸಂಬಂಧಿಕರು 4.87 ಲಕ್ಷ […]

ಕೊರೊನಾದಿಂದ ಸಾವು, ಬಿಲ್​ ಪಾವತಿಗೆ ರಂಪಾಟ: ಖಾಸಗಿ ಆಸ್ಪತ್ರೆ ಎದುರು ತಮಟೆ ಹೋರಾಟ
KUSHAL V
|

Updated on:Sep 23, 2020 | 11:53 AM

Share

ವಿಜಯಪುರ: ಖಾಸಗಿ ಆಸ್ಪತ್ರೆಯಲ್ಲಿ ಸೋಂಕಿತ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ಬಾಕಿ ಬಿಲ್ ಪಾವತಿಸಿ ಶವ ತೆಗೆದುಕೊಂಡು ಹೋಗಲು ಸೂಚನೆ ನೀಡಿದ ಆಸ್ಪತ್ರೆ ವಿರುದ್ಧ ಮೃತನ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ. ಅಂದ ಹಾಗೆ, ಘಟನೆ ನಗರದ ಬಂಜಾರಾ ಕ್ರಾಸ್ ಬಳಿಯ ಕೋಟಿ ಆಸ್ಪತ್ರೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಸಂಕೇಶ್ವರ ಮೂಲದ ರಾಜು ಭೋವಿ (40) ಕಳೆದ 12 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದನಂತೆ. ಕೋರೊನಾದಿಂದ ಬಳಲುತ್ತಿದ್ದ ರಾಜು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದನು.

ಈಗಾಗಲೇ ಮೃತ ಸೋಂಕಿತನ ಸಂಬಂಧಿಕರು 4.87 ಲಕ್ಷ ರೂಪಾಯಿ ಬಿಲ್ ಪಾವತಿಸಿದ್ದಾರಂತೆ. ಆದರೆ, ಉಳಿದ 3 ಲಕ್ಷ ರೂಪಾಯಿ ಬಿಲ್ ಭರಿಸಿ ಮೃತದೇಹ ತೆಗೆದುಕೊಂಡು ಹೋಗುವಂತೆ ಆಸ್ಪತ್ರೆಯವರು ಸೂಚಸಿದ್ದಾರಂತೆ.

ಹಾಗಾಗಿ, ವೈದ್ಯರ ನಡೆಯನ್ನು ಖಂಡಿಸಿ ಮೃತನ ಸಂಬಂಧಿಕರಿಂದ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಲಾಯಿತು. ತಮಟೆ ಬಾರಿಸುವುದರ ಮೂಲಕ ಆಸ್ಪತ್ರೆ ವೈದ್ಯರ ವಿರುದ್ಧ ಹೋರಾಟ ನಡೆಸುತ್ತಿರುವ ಸಂಬಂಧಿಕರು ನ್ಯಾಯಕ್ಕಾಗಿ ಮೊರೆಯಿಟ್ಟರು. ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಹೋರಾಟ ನಡೆಸುತ್ತಿರುವ ಮೃತನ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿತ್ತು. ಹಾಗಾಗಿ, ಆದರ್ಶನಗರ ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.

Published On - 11:51 am, Wed, 23 September 20

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ