
ವಿಜಯಪುರ: ಖಾಸಗಿ ಆಸ್ಪತ್ರೆಯಲ್ಲಿ ಸೋಂಕಿತ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ಬಾಕಿ ಬಿಲ್ ಪಾವತಿಸಿ ಶವ ತೆಗೆದುಕೊಂಡು ಹೋಗಲು ಸೂಚನೆ ನೀಡಿದ ಆಸ್ಪತ್ರೆ ವಿರುದ್ಧ ಮೃತನ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ. ಅಂದ ಹಾಗೆ, ಘಟನೆ ನಗರದ ಬಂಜಾರಾ ಕ್ರಾಸ್ ಬಳಿಯ ಕೋಟಿ ಆಸ್ಪತ್ರೆಯಲ್ಲಿ ನಡೆದಿದೆ.
ಈಗಾಗಲೇ ಮೃತ ಸೋಂಕಿತನ ಸಂಬಂಧಿಕರು 4.87 ಲಕ್ಷ ರೂಪಾಯಿ ಬಿಲ್ ಪಾವತಿಸಿದ್ದಾರಂತೆ. ಆದರೆ, ಉಳಿದ 3 ಲಕ್ಷ ರೂಪಾಯಿ ಬಿಲ್ ಭರಿಸಿ ಮೃತದೇಹ ತೆಗೆದುಕೊಂಡು ಹೋಗುವಂತೆ ಆಸ್ಪತ್ರೆಯವರು ಸೂಚಸಿದ್ದಾರಂತೆ.
ಹಾಗಾಗಿ, ವೈದ್ಯರ ನಡೆಯನ್ನು ಖಂಡಿಸಿ ಮೃತನ ಸಂಬಂಧಿಕರಿಂದ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಲಾಯಿತು. ತಮಟೆ ಬಾರಿಸುವುದರ ಮೂಲಕ ಆಸ್ಪತ್ರೆ ವೈದ್ಯರ ವಿರುದ್ಧ ಹೋರಾಟ ನಡೆಸುತ್ತಿರುವ ಸಂಬಂಧಿಕರು ನ್ಯಾಯಕ್ಕಾಗಿ ಮೊರೆಯಿಟ್ಟರು. ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಹೋರಾಟ ನಡೆಸುತ್ತಿರುವ ಮೃತನ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿತ್ತು. ಹಾಗಾಗಿ, ಆದರ್ಶನಗರ ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.
Published On - 11:51 am, Wed, 23 September 20