ಪ್ರಭಾಸ್​ ಜತೆ 75 ದಿನ ಕಳೆಯಲಿದ್ದಾರೆ ದೀಪಿಕಾ ಪಡುಕೋಣೆ; ಕಾರಣವೇನು ಗೊತ್ತಾ?

ನಾಗ್​ ಅಶ್ವಿನ್​ ನಿರ್ದೇಶನ ಮಾಡುತ್ತಿರುವ ಚಿತ್ರಕ್ಕೆ ಪ್ರಭಾಸ್​ ನಾಯಕ. ದೀಪಿಕಾ ಚಿತ್ರದ ನಾಯಕಿ. ಅಮಿತಾಭ್​ ಬಚ್ಚನ್​ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ.

ಪ್ರಭಾಸ್​ ಜತೆ 75 ದಿನ ಕಳೆಯಲಿದ್ದಾರೆ ದೀಪಿಕಾ ಪಡುಕೋಣೆ; ಕಾರಣವೇನು ಗೊತ್ತಾ?
ಪ್ರಭಾಸ್​-ದೀಪಿಕಾ
Follow us
ರಾಜೇಶ್ ದುಗ್ಗುಮನೆ
|

Updated on: Mar 11, 2021 | 7:38 PM

ಬಾಲಿವುಡ್​ ನಟಿಯರು ದಕ್ಷಿಣ ಭಾರತಕ್ಕೆ ಕಾಲಿಡುವ ಟ್ರೆಂಡ್​ ಆರಂಭವಾಗಿದೆ. ಪ್ರಭಾಸ್​ ನಟನೆಯ ಸಾಹೋ ಸಿನಿಮಾ ಮೂಲಕ ಶ್ರದ್ಧಾ ಕಪೂರ್​ ಟಾಲಿವುಡ್​ಗೆ ಪರಿಚಯಗೊಂಡಿದ್ದರು. ಆರ್​ಆರ್​ಆರ್​ ಚಿತ್ರದ ಮೂಲಕ ಆಲಿಯಾ ಭಟ್​ ಕೂಡ ದಕ್ಷಿಣದತ್ತ ಮುಖ ಮಾಡಿದ್ದಾರೆ. ಈ ಸಾಲಿಗೆ ಮತ್ತೊಂದು ಸೇರ್ಪಡೆ ದೀಪಿಕಾ ಪಡುಕೋಣೆ. ಪ್ರಭಾಸ್ ನಟನೆಯ ಚಿತ್ರಕ್ಕೆ ಅವರೇ ನಾಯಕಿ. ವಿಶೇಷ ಎಂದರೆ, ಈ ಚಿತ್ರಕ್ಕಾಗಿ ದೀಪಿಕಾ ದೊಡ್ಡ ಕಾಲ್​ಶೀಟ್​ ಅನ್ನೇ ಕೊಟ್ಟಿದ್ದಾರೆ.

ನಾಗ್​ ಅಶ್ವಿನ್​ ನಿರ್ದೇಶನ ಮಾಡುತ್ತಿರುವ ಚಿತ್ರಕ್ಕೆ ಪ್ರಭಾಸ್​ ನಾಯಕ. ದೀಪಿಕಾ ಚಿತ್ರದ ನಾಯಕಿ. ಅಮಿತಾಭ್​ ಬಚ್ಚನ್​ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಈ ಚಿತ್ರದಲ್ಲಿ ನಟಿಸೋಕೆ ದೀಪಿಕಾ ಈಗ 75 ದಿನಗಳ ಕಾಲ್​ ಶೀಟ್​ ನೀಡಿದ್ದಾರಂತೆ.

ಶಾರುಖ್​ ಖಾನ್​ ನಟನೆಯ ಪಠಾಣ್​ ಚಿತ್ರದಲ್ಲಿ ದೀಪಿಕಾ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ ಪೂರ್ಣಗೊಳ್ಳೋಕೆ ಇನ್ನೂ ಸಾಕಷ್ಟು ಸಮಯ ಹಿಡಿಯಲಿದೆ. ಪ್ರಭಾಸ್​ ಸಲಾರ್ ಹಾಗೂ ಆದಿ ಪುರುಷ್​ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದು, ಇದರ ಕೆಲಸ ಜುಲೈ ವೇಳೆಗೆ ಪೂರ್ಣಗೊಳ್ಳಲಿದೆ. ಇದಾದ ನಂತರ ಇಬ್ಬರೂ ನಾಗ್​ ಅಶ್ವಿನ್​ ಚಿತ್ರದ ಶೂಟಿಂಗ್​ನಲ್ಲಿ ತೊಡಗಿಕೊಳ್ಳಲಿದ್ದಾರೆ. ಜುಲೈನಲ್ಲಿ ದೀಪಿಕಾ ಈ ಸಿನಿಮಾದ ಸೆಟ್​ ಸೇರಿಕೊಂಡರೆ 75 ದಿನಗಳ ಕಾಲ ಸಂಪೂರ್ಣವಾಗಿ ಇದೇ ಚಿತ್ರಕ್ಕಾಗಿ ಮುಡಿಪಿಡಲಿದ್ದಾರಂತೆ.

ನಾಗ್​ ಅಶ್ವಿನ್​-ಪ್ರಭಾಸ್​ ಸಿನಿಮಾ 2021ರ ಮಧ್ಯ ಅಥವಾ ಅಂತ್ಯಕ್ಕೆ ತೆರೆಗೆ ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಸಿನಿಮಾದಲ್ಲಿ ವಿಎಫ್​ಎಕ್ಸ್​ ಕೆಲಸಗಳು ತುಂಬಾನೇ ಇದ್ದು, ಹೀಗಾಗಿ, ಸಿನಿಮಾ ಶೂಟಿಂಗ್​​ ಬೇಗ ಪೂರ್ಣಗೊಂಡರೂ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಿಗೆ ಹೆಚ್ಚು ಸಮಯ ಹಿಡಿಯಲಿದೆ. ದೊಡ್ಡ ದೊಡ್ಡ ವಿಎಫ್​ಎಕ್ಸ್​ ಸಂಸ್ಥೆಗಳಿಗೆ ವಿಎಫ್​ಎಕ್ಸ್ ಕೆಲಸ ಮಾಡಿದವರು ಈ ಚಿತ್ರಕ್ಕೂ ಕೆಲಸ ಮಾಡುವ ಸಾಧ್ಯತೆ ಇದೆ. ಈ ಎಲ್ಲಾ ಕಾರಣಗಳಿಗೆ ಈ ಸಿನಿಮಾ ರಿಲೀಸ್​ ಆಗೋದು ಕೊಂಚ ವಿಳಂಬವಾಗಲಿದೆ.

ಇದನ್ನೂ ಓದಿ: ಹೃತಿಕ್​ ಜೊತೆ ರೊಮ್ಯಾನ್ಸ್​ ಮಾಡಲಿದ್ದಾರೆ ದೀಪಿಕಾ ಪಡುಕೋಣೆ: ಈ ಚಿತ್ರಕ್ಕೆ ನಿರ್ದೇಶಕರಾರು ಗೊತ್ತಾ?

Salaar Movie: ಬಜೆಟ್​ ವಿಚಾರದಲ್ಲಿ ಭಾರೀ ಟ್ರೋಲ್​ ಆದ ಪ್ರಭಾಸ್​ ನಟನೆಯ ಸಲಾರ್​ ಸಿನಿಮಾ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ