ರಸ್ತೆ ದಾಟುತ್ತಿದ್ದ ಜಿಂಕೆಗೆ ಬೈಕ್ ಡಿಕ್ಕಿ: ಜಿಂಕೆ ಸಾವು, ಸವಾರನಿಗೆ ಗಂಭೀರ ಗಾಯ

|

Updated on: Oct 24, 2020 | 9:36 AM

ಮೈಸೂರು: ರಸ್ತೆ ದಾಟುತ್ತಿದ್ದ ಜಿಂಕೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ನಾಗಾಪುರ ಬಳಿ ನಡೆದಿದೆ. ಹುಣಸೂರು-ನಾಗರಹೊಳೆ ರಸ್ತೆಯಲ್ಲಿರುವ ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದ ಬಳಿ ಅವಘಡ ಸಂಭವಿಸಿದೆ. ಬೈಕ್​ ಡಿಕ್ಕಿ ಹೊಡೆದ ರಭಸಕ್ಕೆ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿದೆ. ಇನ್ನು ಬೈಕ್​ ಸವಾರ ಸಂತೋಷ್​ಗೆ ಗಾಯಗಳಾಗಿದ್ದು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ದಾಟುತ್ತಿದ್ದ ಜಿಂಕೆಗೆ ಬೈಕ್ ಡಿಕ್ಕಿ: ಜಿಂಕೆ ಸಾವು, ಸವಾರನಿಗೆ ಗಂಭೀರ ಗಾಯ
Follow us on

ಮೈಸೂರು: ರಸ್ತೆ ದಾಟುತ್ತಿದ್ದ ಜಿಂಕೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ನಾಗಾಪುರ ಬಳಿ ನಡೆದಿದೆ. ಹುಣಸೂರು-ನಾಗರಹೊಳೆ ರಸ್ತೆಯಲ್ಲಿರುವ ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದ ಬಳಿ ಅವಘಡ ಸಂಭವಿಸಿದೆ.

ಬೈಕ್​ ಡಿಕ್ಕಿ ಹೊಡೆದ ರಭಸಕ್ಕೆ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿದೆ. ಇನ್ನು ಬೈಕ್​ ಸವಾರ ಸಂತೋಷ್​ಗೆ ಗಾಯಗಳಾಗಿದ್ದು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.