ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಏರೋ ಇಂಡಿಯಾ 2021 ಕ್ಕೆ ಸಂಬಂಧಿಸಿ ಅಪೆಕ್ಸ್ ಸಮಿತಿ ಸಭೆ ಜರುಗಿತು. ಇದಕ್ಕೂ ಮುನ್ನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಮುಖ್ಯಮಂತ್ರಿ ಕೊಠಡಿಯಲ್ಲಿ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅವರನ್ನು ಸ್ವಾಗತಿಸಿದರು.
ಸಭೆಯಲ್ಲಿ ಈ ವರ್ಷದ ಏರೋ ಇಂಡಿಯಾಗೆ ನಡೆಸಲಾದ ತಯಾರಿಗಳನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪರಿಶೀಲಿಸಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಹಿರಿಯ ಅಧಿಕಾರಿಗಳ ಬಳಿ ತಯಾರಿಗಳ ಕುರಿತು ಮಾಹಿತಿ ಪಡೆದರು.
ರಕ್ಷಣಾ ವಸ್ತುಪ್ರದರ್ಶನ ಸಂಸ್ಥೆಯ ನಿರ್ದೇಶಕ ಅಚಲ್ ಮಲ್ಹೋತ್ರಾ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಮತ್ತಿತರರು ಉಪಸ್ಥಿತರಿದ್ದರು. ಫೆಬ್ರವರಿ 3 ರಿಂದ 7 ರವರೆಗೆ 2021 ರವರೆಗೆ 13 ನೇ ಆವೃತ್ತಿಯ ಏರೋ ಇಂಡಿಯಾ 2021 ನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಏರೋ ಇಂಡಿಯಾ ಭಾರತೀಯ ವಾಯುಪಡೆಯ ಸಾಮರ್ಥ್ಯ ಪ್ರದರ್ಶನಕ್ಕೆ ಸಾಕ್ಷಿಯಾಗುತ್ತದೆ. ಸಾವಿರಾರು ಜನ ವಿಮಾನಗಳ ಸಾಹಸ ಕ ಣ್ತುಂಬಿಕೊಳ್ಳುತ್ತಾರೆ.