AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

108 ಌಂಬುಲೆನ್ಸ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಉಳಿಯಿತು ತಾಯಿ-ಮಗು ಜೀವ, ಎಲ್ಲಿ?

ಕೊಪ್ಪಳ:ಗ್ರಾಮದಲ್ಲಿ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಆಂಬುಲೆನ್ಸ್ ರಸ್ತೆ ಮಧ್ಯದಲ್ಲಿ ಸಿಕ್ಕಿಹಾಕಿಕೊಂಡು ಕೊನೆಗೇ ಌಂಬುಲೆನ್ಸ್ ಸಿಬ್ಬಂದಿಯೇ ಗರ್ಭಿಣಿಗೆ ವಾಹನದಲ್ಲಿ ಹೆರಿಗೆ ಮಾಡಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕುಷ್ಟಗಿ ತಾಲೂಕಿನ ರಾಂಪುರ ಗ್ರಾಮದ ಮಹಿಳೆಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಕುಟುಂಬಸ್ಥರು ಌಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಸ್ಥಳಕ್ಕಾಗಮಿಸಿದ ಌಂಬುಲೆನ್ಸ್ ಗರ್ಭಿಣಿಯನ್ನು ಕುಷ್ಟಗಿ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಸಾಗಿತ್ತು. ಆದರೆ, ಮಳೆ ಸುರಿದ ಪರಿಣಾಮವಾಗಿ ರಸ್ತೆಯ ಗುಂಡಿಯಲ್ಲಿ ಌಂಬುಲೆನ್ಸ್ ಸಿಲುಕಿಕೊಂಡಿತು. ಈ […]

108 ಌಂಬುಲೆನ್ಸ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಉಳಿಯಿತು ತಾಯಿ-ಮಗು ಜೀವ, ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on: Aug 04, 2020 | 2:03 PM

Share

ಕೊಪ್ಪಳ:ಗ್ರಾಮದಲ್ಲಿ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಆಂಬುಲೆನ್ಸ್ ರಸ್ತೆ ಮಧ್ಯದಲ್ಲಿ ಸಿಕ್ಕಿಹಾಕಿಕೊಂಡು ಕೊನೆಗೇ ಌಂಬುಲೆನ್ಸ್ ಸಿಬ್ಬಂದಿಯೇ ಗರ್ಭಿಣಿಗೆ ವಾಹನದಲ್ಲಿ ಹೆರಿಗೆ ಮಾಡಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಕುಷ್ಟಗಿ ತಾಲೂಕಿನ ರಾಂಪುರ ಗ್ರಾಮದ ಮಹಿಳೆಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಕುಟುಂಬಸ್ಥರು ಌಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಸ್ಥಳಕ್ಕಾಗಮಿಸಿದ ಌಂಬುಲೆನ್ಸ್ ಗರ್ಭಿಣಿಯನ್ನು ಕುಷ್ಟಗಿ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಸಾಗಿತ್ತು.

ಆದರೆ, ಮಳೆ ಸುರಿದ ಪರಿಣಾಮವಾಗಿ ರಸ್ತೆಯ ಗುಂಡಿಯಲ್ಲಿ ಌಂಬುಲೆನ್ಸ್ ಸಿಲುಕಿಕೊಂಡಿತು. ಈ ನಡುವೆ ಗರ್ಭಿಣಿಗೆ ಹೆರಿಗೆ ನೋವು ಹೆಚ್ಚಾಯ್ತು. ಹೀಗಾಗಿ ಆಂಬುಲೆನ್ಸ್ ಸಿಬ್ಬಂದಿಯೇ ಗರ್ಭಿಣಿಗೆ ವಾಹನದಲ್ಲಿ ಹೆರಿಗೆ ಮಾಡಿಸಿದ್ದಾರೆ. ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ತಾಯಿ ಹಾಗೂ ಮಗುವಿನ ಜೀವ ಉಳಿದಿದ್ದು ಇಬ್ಬರೂ ಆರೋಗ್ಯವಾಗಿದ್ದಾರೆ. ಸದ್ಯ, ಹಿರೇಮನ್ನಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್