
ಕೊಪ್ಪಳ:ಗ್ರಾಮದಲ್ಲಿ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಆಂಬುಲೆನ್ಸ್ ರಸ್ತೆ ಮಧ್ಯದಲ್ಲಿ ಸಿಕ್ಕಿಹಾಕಿಕೊಂಡು ಕೊನೆಗೇ ಌಂಬುಲೆನ್ಸ್ ಸಿಬ್ಬಂದಿಯೇ ಗರ್ಭಿಣಿಗೆ ವಾಹನದಲ್ಲಿ ಹೆರಿಗೆ ಮಾಡಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕುಷ್ಟಗಿ ತಾಲೂಕಿನ ರಾಂಪುರ ಗ್ರಾಮದ ಮಹಿಳೆಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಕುಟುಂಬಸ್ಥರು ಌಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಸ್ಥಳಕ್ಕಾಗಮಿಸಿದ ಌಂಬುಲೆನ್ಸ್ ಗರ್ಭಿಣಿಯನ್ನು ಕುಷ್ಟಗಿ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಸಾಗಿತ್ತು.
ಆದರೆ, ಮಳೆ ಸುರಿದ ಪರಿಣಾಮವಾಗಿ ರಸ್ತೆಯ ಗುಂಡಿಯಲ್ಲಿ ಌಂಬುಲೆನ್ಸ್ ಸಿಲುಕಿಕೊಂಡಿತು. ಈ ನಡುವೆ ಗರ್ಭಿಣಿಗೆ ಹೆರಿಗೆ ನೋವು ಹೆಚ್ಚಾಯ್ತು. ಹೀಗಾಗಿ ಆಂಬುಲೆನ್ಸ್ ಸಿಬ್ಬಂದಿಯೇ ಗರ್ಭಿಣಿಗೆ ವಾಹನದಲ್ಲಿ ಹೆರಿಗೆ ಮಾಡಿಸಿದ್ದಾರೆ. ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ತಾಯಿ ಹಾಗೂ ಮಗುವಿನ ಜೀವ ಉಳಿದಿದ್ದು ಇಬ್ಬರೂ ಆರೋಗ್ಯವಾಗಿದ್ದಾರೆ. ಸದ್ಯ, ಹಿರೇಮನ್ನಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.