ಬೇಬಿಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ಮೇಲೆ ದಾಳಿ: ಹಿಟಾಚಿ.. ರಾಕ್ ಬ್ರೇಕರ್, ಲಾರಿ ವಶ

  • TV9 Web Team
  • Published On - 14:16 PM, 6 Nov 2020
ಬೇಬಿಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ಮೇಲೆ ದಾಳಿ: ಹಿಟಾಚಿ.. ರಾಕ್ ಬ್ರೇಕರ್, ಲಾರಿ ವಶ

ಮಂಡ್ಯ: ಜಿಲ್ಲೆಯ ಬೇಬಿಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ಮೇಲೆ ಗಣಿ & ಭೂವಿಜ್ಞಾನ ಇಲಾಖೆ ಅಧಿಕಾರಿ ಪುಷ್ಪ ನೇತೃತ್ವದ ತಂಡ ದಾಳಿ ನಡೆಸಿದೆ. ಈ ವೇಳೆ 2 ಹಿಟಾಚಿ, 1 ರಾಕ್ ಬ್ರೇಕರ್, 1 ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.

ಕೆಆರ್‌ಎಸ್ ಜಲಾಶಯದ ಸುರಕ್ಷತೆ ದೃಷ್ಟಿಯಿಂದ ಬೇಬಿಬೆಟ್ಟದಲ್ಲಿ ಗಣಿಗಾರಿಕೆ ನಿಷೇಧಿಸಲಾಗಿತ್ತು. ಆದ್ರೂ ಕೆಲವರು ಅಕ್ರಮವಾಗಿ ಗಲ್ಲು ಗಣಿಗಾರಿಕೆ ನಡೆಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಇಂದು ಅಧಿಕಾರಿಗಳ ತಂಡ ದಾಳಿ ನಡೆಸಿ ಅಕ್ರಮಕ್ಕೆ ಬ್ರೇಕ್ ಹಾಕಿದೆ. ಈವರೆಗೆ 30ಕ್ಕೂ ಹೆಚ್ಚು ಅಕ್ರಮ ಗಣಿಗಾರಿಕೆ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ.