ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವಿಧಾನ ಪರಿಷತ್ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ

ಪರಿಷತ್ ಉಪಸಭಾಪತಿ S.L.ಧರ್ಮೇಗೌಡ(65) ಗುಣಸಾಗರ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

  • Updated On - 12:49 pm, Tue, 29 December 20 Edited By: Rashmi Kallakatta
ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವಿಧಾನ ಪರಿಷತ್ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ
ಪರಿಷತ್ ಉಪಸಭಾಪತಿ S.L.ಧರ್ಮೇಗೌಡ

ಚಿಕ್ಕಮಗಳೂರು: ಪರಿಷತ್ ಉಪಸಭಾಪತಿ S.L.ಧರ್ಮೇಗೌಡ(65) ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಿಲ್ಲೆಯ ಕಡೂರು ತಾಲೂಕಿನ ಗುಣಸಾಗರ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

H.D.ಕುಮಾರಸ್ವಾಮಿ ಆಪ್ತರಾಗಿದ್ದ ಎಸ್.ಎಲ್.ಧರ್ಮೇಗೌಡ. ಗನ್‌ಮ್ಯಾನ್‌, ಎಸ್ಕಾರ್ಟ್ ಸಿಬ್ಬಂದಿ ಮನೆಗೆ ಕಳಿಸಿ ನಿನ್ನೆ ಸಂಜೆ ವೇಳೆಗೆ ತಮ್ಮ ಡ್ರೈವರ್ ಜತೆ ಕಾರಿನಲ್ಲಿ ಸಖರಾಯಪಟ್ಟಣದ ಮನೆಯಿಂದ ಗುಣಸಾಗರಕ್ಕೆ ಬಂದಿದ್ದರು.

ಬಳಿಕ ರೈಲು ಹಳಿ ಬಳಿ ಕಾರು ನಿಲ್ಲಿಸಲು ಡ್ರೈವರ್‌ಗೆ ಸೂಚಿಸಿದ್ರು. ನನಗೆ ಒಬ್ಬರ ಜೊತೆ ಖಾಸಗಿಯಾಗಿ ಮಾತನಾಡಬೇಕು. ನೀನು ಹೋಗು ಎಂದು ಚಾಲಕನನ್ನು ಕಳಿಸಿದ್ದಾರೆ. ನಂತರ ಕಡೂರಿನ ವ್ಯಕ್ತಿಗೆ ಕರೆ ಮಾಡಿ ಜನಶತಾಬ್ಧಿ ರೈಲು ಬರುವ ಸಮಯವನ್ನು ವಿಚಾರಿಸಿದ್ದಾರೆ. ಬಳಿಕ ತಮ್ಮ ಮೊಬೈಲ್ ಫೋನ್ ಸ್ವಿಚ್ಡ್ ಆಫ್ ಮಾಡಿಕೊಂಡು ಚಲಿಸುವ ರೈಲಿಗೆ ತಲೆ ಕೊಟ್ಟಿದ್ದಾರೆ.

ರಾತ್ರಿ 10 ಗಂಟೆಯಾದರೂ ವಾಪಸಾಗದ ಹಿನ್ನೆಲೆಯಲ್ಲಿ ಧರ್ಮೇಗೌಡ ಅವರಿಗಾಗಿ ಹುಡುಕಾಟ ಶುರುವಾಗಿತ್ತು. ಈ ವೇಳೆ ಗುಣಸಾಗರ ಬಳಿ ತಡರಾತ್ರಿ 1.30ರ ಸುಮಾರಿಗೆ ಧರ್ಮೇಗೌಡರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಸಿ.ಟಿ.ರವಿ, ಚಿಕ್ಕಮಗಳೂರು ಎಸ್‌ಪಿ ಭೇಟಿ ನೀಡಿದ್ದಾರೆ.

ಇವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳು ಇದ್ದಾರೆ. ಸೋದರ ಭೋಜೇಗೌಡ ಸಹ ಜೆಡಿಎಸ್ ನ ಪ್ರಭಾವಿ ನಾಯಕರಲ್ಲಿ ಒಬ್ಬರು.

ಪಾರ್ಥಿವ ಶರೀರ ಶಿವಮೊಗ್ಗಕ್ಕೆ ರವಾನೆ
ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಶಿವಮೊಗ್ಗಕ್ಕೆ ಕಳಿಸಲಾಗಿದೆ. ಇಂದು ಮಧ್ಯಾಹ್ನ ಸಖರಾಯಪಟ್ಟಣ ಸಮೀಪದ ಮದಗದಕೆರೆ ರಸ್ತೆಯಲ್ಲಿರುವ ತೋಟದಮನೆಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುವುದು. ನಂತರ ಸಖರಾಯಪಟ್ಟಣದಲ್ಲಿರುವ ಧರ್ಮೇಗೌಡರ ತಂದೆ ಎಸ್.ಆರ್.ಲಕ್ಷ್ಮಯ್ಯ ಸಮಾಧಿಯ ಪಕ್ಕದಲ್ಲೇ ಸಮಾಧಿ ಮಾಡಲಾಗುವುದು ಎಂದು ಮೃತರ ಸೋದರ ಕುಶಾಲ್ ಗೌಡ ಮಾಹಿತಿ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಪ್ರದೇಶವೆನಿಸಿದ ಕಡೂರು ಮತ್ತು ತರೀಕೆರೆ ತಾಲ್ಲೂಕುಗಳಲ್ಲಿ ಧರ್ಮೇಗೌಜನಪ್ರಿಯರಾಗಿದ್ದರು. 2004ರಲ್ಲಿ ಬೀರೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

ಸಭಾಪತಿ ಕುರ್ಚಿಗಾಗಿ ಫುಲ್​ ಫೈಟ್​: ಅಕ್ಷರಶಃ ರಣಾಂಗಣವಾದ ಮೇಲ್ಮನೆ