ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ.. ಸಾಹಿತಿ ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ ಮೀರಾ
ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪ ಹಿನ್ನೆಲೆಯಲ್ಲಿ ಸಾಹಿತಿ ಭಗವಾನ್‌ಗೆ ವಕೀಲೆ ಮೀರಾ ರಾಘವೇಂದ್ರ ಮಸಿ ಬಳಿದ ಘಟನೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ನಡೆದಿದೆ.
ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪ ಹಿನ್ನೆಲೆಯಲ್ಲಿ ಸಾಹಿತಿ ಭಗವಾನ್ ಮುಖಕ್ಕೆ ವಕೀಲೆ ಮೀರಾ ರಾಘವೇಂದ್ರ ಮಸಿ ಬಳಿದ ಘಟನೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ನಡೆದಿದೆ. ಇಷ್ಟು ವಯಸ್ಸಾಗಿದೆ. ಇನ್ನು ನಾಚಿಕೆಯಾಗಲ್ವಾ? ರಾಮನ ಬಗ್ಗೆ ಧರ್ಮದ ಬಗ್ಗೆ ಮಾತಾನಾಡ್ತೀರಾ ಎಂದು ವಕೀಲೆ ಮೀರಾ, ಭಗವಾನ್ ಅವರಿಗೆ ಅವಾಜ್ ಹಾಕಿ ಮುಖಕ್ಕೆ ಮಸಿ ಬಳಿದಿದ್ದಾರೆ.
ಬುದ್ಧಿಜೀವಿ, ಧರ್ಮ ವಿರೋಧಿ #ಫ್ರೊಭಗವಾನ್ ಇಂದು ಕೋರ್ಟ್ ಕಟಕಟೆಗೆ ಹಾಜರಾಗಿ ಜಾಮೀನು ಪಡೆದುಕೊಂಡರು. ಅವರಿಗೆ ಮಸಿ ಬಳಿದು ತಕ್ಕ ಶಾಸ್ತಿ ಮಾಡಿದ್ದೇನೆ. #ಜೈಶ್ರೀರಾಮ್??? pic.twitter.com/t0iF36VR3x
— Meera Raghavendra (@MeeraRaghavendr) February 4, 2021
ಹಿಂದೂ ಧರ್ಮವೆಂಬುವುದೇ ಇಲ್ಲ. ಹಿಂದೂ ಧರ್ಮ ಅವಮಾನಕಾರ. ಮಾನ ಮರ್ಯಾದೆ ಇದ್ದವರು ಹಿಂದೂ ಧರ್ಮ ಬಳಸಬಾರದು ಎಂದು ಸಾಹಿತಿ ಕೆ.ಎಸ್. ಭಗವಾನ್ ಹೇಳಿಕೆ ನೀಡಿದ್ದರು. ಈ ಸಂಬಂಧ 2020ರ ಅಕ್ಟೋಬರ್ 10ರಂದು ಭಗವಾನ್ ವಿರುದ್ಧ ಮೀರಾ ರಾಘವೇಂದ್ರ ಕ್ರಿಮಿನಲ್ ಕೇಸ್ ದಾಖಲಿಸಿದ್ದರು.
ಈ ಹಿನ್ನೆಲೆಯಲ್ಲಿ ಇಂದು ಸಾಹಿತಿ ಭಗವಾನ್ ಕೋರ್ಟ್‌ಗೆ ಹಾಜರಾಗಿದ್ದರು. ಈ ಬಗ್ಗೆ ವಿಚಾರಣೆ ನಡೆಸಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ವಿಚಾರಣೆ ಬಳಿಕ ಕೋರ್ಟ್‌ನಿಂದ ಭಗವಾನ್ ಹೊರಗೆ ಬಂದ ವೇಳೆ ಭಗವಾನ್‌ಗೆ ಮೀರಾ ರಾಘವೇಂದ್ರ ಮಸಿ ಬಳಿದಿದ್ದಾರೆ.
ಸದಾ ನಮ್ಮ ಧರ್ಮವನ್ನೇ ಟಾರ್ಗೆಟ್ ಮಾಡುವ ವಿಚಾರವ್ಯಾಧಿ, ಬುದ್ಧಿಜೀವಿ #ಪ್ರೋಭಗವಾನ್ ಮೇಲೆ ಕಳೆದ ತಿಂಗಳು #ಬೆಂಗಳೂರು #ACMM ನ್ಯಾಯಾಲಯದಲ್ಲಿ ದಿ. 11.10.2020 ರ ಹೇಳಿಕೆ ಸಾಕ್ಷ್ಯಧಾರಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದೆ. ಹೇಳಿಕೆ ಹಾಗೂ ವಾದ ಆಲಿಸಿದ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ಆರೋಪಿ ಭಗವಾನ್ ಗೆ #ಸಮನ್ಸ ಜಾರಿಗೊಳಿಸಿದೆ. pic.twitter.com/5qEsmW1D2v
— Meera Raghavendra (@MeeraRaghavendr) December 17, 2020
ಕೇಂದ್ರದ ನಡೆ ಪ್ರಶ್ನಿಸಿದ್ದಕ್ಕೆ ಪೊಲೀಸರಿಂದ ಹಿರಿಯ ಸಾಹಿತಿ ಹಂ.ಪ. ನಾಗರಾಜಯ್ಯ ವಿಚಾರಣೆ: ಹಲವರ ಖಂಡನೆ
Published On - 2:25 pm, Thu, 4 February 21