Siddaramaiah in Delhi | ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ರಾಜ್ಯಕ್ಕೆ ಅನ್ಯಾಯವೆಸಗಿದ್ದಾರೆ: ವಿರೋಧ ಪಕ್ಷದ ನಾಯಕ

Siddaramaiah in Delhi | ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ರಾಜ್ಯಕ್ಕೆ ಅನ್ಯಾಯವೆಸಗಿದ್ದಾರೆ: ವಿರೋಧ ಪಕ್ಷದ ನಾಯಕ

ಅರುಣ್​ ಕುಮಾರ್​ ಬೆಳ್ಳಿ
|

Updated on:Jan 30, 2023 | 4:33 PM

ದೆಹಲಿಯಲ್ಲಿ ಮಾತಾಡಿದ ಸಿದ್ದರಾಮಯ್ಯ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ, ರಾಜ್ಯಕ್ಕೆ ಬಹಳ ದೊಡ್ಡ ಅನ್ಯಾಯವೆಸಗಿದ್ದಾರೆ ಎಂದು ಹೇಳಿದರು.

ನವದೆಹಲಿ: ಹವಾಮಾನದಲ್ಲುಂಟಾದ ವೈಪ್ಯರೀತ್ಯದಿಂದಾಗಿ ದೆಹಲಿ ಮತ್ತು ಶ್ರೀನಗರ ನಡುವಿನ ವಿಮಾನ ಹಾರಾಟ ಸ್ಥಗಿತಗೊಂಡು ಸಿದ್ದರಾಮಯ್ಯ (Siddaramaiah) ಮತ್ತು ರಾಜ್ಯದ ಬೇರೆ ಕೆಲ ನಾಯಕರು ಭಾರತ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಾಗದ ವಿಷಯ ನಿಮಗೆ ಗೊತ್ತಿದೆ. ದೆಹಲಿಯಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತಾಡಿದ ಸಿದ್ದರಾಮಯ್ಯ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ, ರಾಜ್ಯಕ್ಕೆ ಬಹಳ ದೊಡ್ಡ ಅನ್ಯಾಯವೆಸಗಿದ್ದಾರೆ (injustice) ಎಂದು ಹೇಳಿದರು. ಕರ್ನಾಟಕಕ್ಕೆ ರೂ. 5,460 ಕೋಟಿಗಳಷ್ಟು ತೆರಿಗೆ ಹಂಚಿಕೆಯಲ್ಲಿ ಅಭಾವ ಉಂಟಾದಾಗ ವಿಶೇಷ ಅನುದಾನವನ್ನು ನೀಡಲಾಗಿತ್ತು. ಆದರೆ, ನಿರ್ಮಲಾ ಸೀತಾರಾಮನ್ ಅವರು ನಮಗೆ ಅದನ್ನು ನೀಡದೆ ಅನ್ಯಾಯವೆಸಗಿಬಿಟ್ಟರು ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jan 30, 2023 02:49 PM