ಚಿಕ್ಕಿ ಘಟಕದಿಂದ ಬದುಕು ರೂಪಿಸಿಕೊಂಡ ಮಾಜಿ ದೇವದಾಸಿಯರಿಗೆ ರಾಜ್ಯೋತ್ಸವ ಪ್ರಶಸ್ತಿ ಸಿಹಿ!

ಬಳ್ಳಾರಿ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ದೇವದಾಸಿಯರಿಗೆ ಬದುಕು ಕಟ್ಟಿಕೊಟ್ಟಿರುವ ಮಾಜಿ ದೇವದಾಸಿಯರ ಸ್ವಾವಲಂಬನಾ ಕೇಂದ್ರಕ್ಕೆ ಈ ಬಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ! ಹೌದು, ಸಿಹಿ ತಿನಿಸು ಚಿಕ್ಕಿ ತಯಾರಿಕಾ ಘಟಕದಿಂದ ಬದುಕು ರೂಪಿಸಿಕೊಂಡು ಸ್ವಾವಲಂಬಿಗಳಾಗಿ ಜೀವನ ನಡೆಸುವ ಮೂಲಕ ಎಲ್ಲರಿಗೂ ಮಾದರಿ ಆಗಿರುವುದನ್ನು ಗುರುತಿಸಿರುವ ರಾಜ್ಯ ಸರ್ಕಾರ ಮಾಜಿ ದೇವದಾಸಿಯರ ಸ್ವಾವಲಂಬನಾ ಕೇಂದ್ರಕ್ಕೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವುದರ ಮೂಲಕ ಅವರ ಕಾರ್ಯಕ್ಕೆ ಬೆನ್ನುತಟ್ಟಿ ಪ್ರೋತ್ಸಾಹಿಸಿದೆ. ಈ ಮೂಲಕ, ಬಳ್ಳಾರಿ ಜಿಲ್ಲಾಡಳಿತವು ರಾಜ್ಯದಲ್ಲೇ ಪ್ರಥಮ ಬಾರಿಗೆ ಕೈ […]

ಚಿಕ್ಕಿ ಘಟಕದಿಂದ ಬದುಕು ರೂಪಿಸಿಕೊಂಡ ಮಾಜಿ ದೇವದಾಸಿಯರಿಗೆ ರಾಜ್ಯೋತ್ಸವ ಪ್ರಶಸ್ತಿ ಸಿಹಿ!
Follow us
ಸಾಧು ಶ್ರೀನಾಥ್​
|

Updated on:Oct 31, 2020 | 9:57 PM

ಬಳ್ಳಾರಿ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ದೇವದಾಸಿಯರಿಗೆ ಬದುಕು ಕಟ್ಟಿಕೊಟ್ಟಿರುವ ಮಾಜಿ ದೇವದಾಸಿಯರ ಸ್ವಾವಲಂಬನಾ ಕೇಂದ್ರಕ್ಕೆ ಈ ಬಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ!

ಹೌದು, ಸಿಹಿ ತಿನಿಸು ಚಿಕ್ಕಿ ತಯಾರಿಕಾ ಘಟಕದಿಂದ ಬದುಕು ರೂಪಿಸಿಕೊಂಡು ಸ್ವಾವಲಂಬಿಗಳಾಗಿ ಜೀವನ ನಡೆಸುವ ಮೂಲಕ ಎಲ್ಲರಿಗೂ ಮಾದರಿ ಆಗಿರುವುದನ್ನು ಗುರುತಿಸಿರುವ ರಾಜ್ಯ ಸರ್ಕಾರ ಮಾಜಿ ದೇವದಾಸಿಯರ ಸ್ವಾವಲಂಬನಾ ಕೇಂದ್ರಕ್ಕೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವುದರ ಮೂಲಕ ಅವರ ಕಾರ್ಯಕ್ಕೆ ಬೆನ್ನುತಟ್ಟಿ ಪ್ರೋತ್ಸಾಹಿಸಿದೆ. ಈ ಮೂಲಕ, ಬಳ್ಳಾರಿ ಜಿಲ್ಲಾಡಳಿತವು ರಾಜ್ಯದಲ್ಲೇ ಪ್ರಥಮ ಬಾರಿಗೆ ಕೈ ಹಾಕಿದ ವಿಶಿಷ್ಠ ಪ್ರಯತ್ನಕ್ಕೆ ಯಶಸ್ಸು ದೊರೆತಂತಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕರ ಸಹಯೋಗದೊಂದಿಗೆ ಜಿಲ್ಲಾಡಳಿತದ ನೇತೃತ್ವದಲ್ಲಿ ಕೂಡ್ಲಿಗಿ ಪಟ್ಟಣದ ಊರಮ್ಮ ದೇವಿ ದೇವಸ್ಥಾನದಲ್ಲಿ ಮಾಜಿ ದೇವದಾಸಿಯವರ ಪೈಕಿ ಅಣ್ಣಮ್ಮ ಸೇರಿದಂತೆ 15 ಜನರನ್ನು ಗುರುತಿಸಿ, ಸ್ವಸಹಾಯ ಸಂಘ ರಚಿಸಿ ಇದಕ್ಕೆ ದೇವದಾಸಿ ಸ್ವಾಲಂಬನಾ ಕೇಂದ್ರವೆಂದು ಹೆಸರಿಡಲಾಗಿತ್ತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಹಿಳಾ ಅಭಿವೃದ್ಧಿ ನಿಗಮದಿಂದ ಕಡಿಮೆ ಬಡ್ಡಿ ದರದಲ್ಲಿ 12 ಲಕ್ಷ ರೂ. ಸಾಲದ ಸೌಲಭ್ಯ ನೀಡಿದೆ. ಚಿಕ್ಕಿ ಘಟಕ ಆರಂಭಕ್ಕೂ ಮುನ್ನ ಸಂಘದ ಎಲ್ಲ ಸದಸ್ಯರಿಗೆ 15 ದಿನ ತರಬೇತಿ ಸಹ ನೀಡಲಾಗಿತ್ತು.

ಈ ಮಾಜಿ ದೇವದಾಸಿಯರು ತಯಾರಿಸಿದ ಶೇಂಗಾ ಚಿಕ್ಕಿಗಳನ್ನು ಗರ್ಭಿಣಿಯರು-ಬಾಣಂತಿಯರು ಹಾಗೂ 6 ವರ್ಷದೊಳಗಿನ ಮಕ್ಕಳಿಗೆ ವಿತರಿಸುವುದಕ್ಕಾಗಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಮಾಡಲಾಗುತ್ತಿದೆ. ಶೇಂಗಾ ಚಿಕ್ಕಿಗಳಿಗೆ ಸಂಬಂಧಿಸಿದ ಹಣವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಜಿ ದೇವದಾಸಿ ಸ್ವಾಲಂಬನಾ ಕೇಂದ್ರಕ್ಕೆ ನೀಡುತ್ತಿದೆ.

ಜಿಲ್ಲೆಯಲ್ಲಿ 10,540 ಮಾಜಿ ದೇವದಾಸಿಯರ ಪೈಕಿ ಕೂಡ್ಲಿಗಿಯಲ್ಲೇ ಇವರ ಸಂಖ್ಯೆ ಹೆಚ್ಚಿರುವುದರ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಶೇಂಗಾ ಚಿಕ್ಕಿ ತಯಾರಿಕಾ ಘಟಕವನ್ನು ಜಿಲ್ಲಾಡಳಿತವು ಸ್ಥಾಪಿಸುವುದರ ಮೂಲಕ ಇವರಿಗೆ ಉದ್ಯೊಗ ಕಲ್ಪಿಸಿ ಸ್ವಾವಲಂಬಿ ಜೀವನಕ್ಕೆ ರಹದಾರಿ ಕಲ್ಪಿಸಿದೆ. ಮುಂದಿನ ದಿನಗಳಲ್ಲಿ ಚಿಕ್ಕಿ ತಯಾರಿಕಾ ಘಟಕದಲ್ಲಿ ಯಂತ್ರಗಳನ್ನು ಅಳವಡಿಸುವ ಚಿಂತನೆಯೂ ಇದೆ.

ಅಂಗನವಾಡಿ ಕೇಂದ್ರಗಳಲ್ಲಿ ವಿತರಿಸುವ ಪೌಷ್ಠಿಕ ಆಹಾರ ಮೆನುದಲ್ಲಿ ಶೇಂಗಾ ಚಿಕ್ಕಿಯೂ ಒಂದಾಗಿದೆ. ಹೀಗಾಗಿಯೇ, ಇವರು ತಯಾರಿಸುವ ಚಿಕ್ಕಿಗಳನ್ನು ಕೂಡ್ಲಿಗಿ ತಾಲೂಕಿನಲ್ಲಿ 300ಕ್ಕೂ ಹೆಚ್ಚು ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಮಾಡಲಾಗುತ್ತಿದೆ. ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಂದ ಮಾಸಿಕ 7 ಲಕ್ಷ ಚಿಕ್ಕಿ ಬೇಡಿಕೆಯಿರುವುದರಿಂದ ಪ್ರಾರಂಭಿಕ ಹಂತದಲ್ಲಿ ನಿತ್ಯ 4 ಸಾವಿರ ಚಿಕ್ಕಿಗಳನ್ನು ತಯಾರಿಸುವಲ್ಲಿ ಮಾಜಿ ದೇವದಾಸಿಯರು ನಿರತರಾಗಿದ್ದಾರೆ.

ಮುಂದಿನ ದಿನಗಳಲ್ಲಿ ಉದ್ಯೋಗಿನಿ ಯೋಜನೆಯಡಿ ಇನ್ನೂ ಹೆಚ್ಚಿನ ಸಾಲಸೌಲಭ್ಯ ಒದಗಿಸಿ ಘಟಕಕ್ಕೆ ಚಿಕ್ಕಿ ತಯಾರಿಸುವ ಯಂತ್ರಗಳನ್ನು ಒದಗಿಸುವ ಉದ್ದೇಶವಿದೆ. ಅದರ ಜೊತೆಗೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ಮಾಜಿ ದೇವದಾಸಿಯರಿಗೆ ತರಬೇತಿ ನೀಡಿ, ಚಿಕ್ಕಿ ಘಟಕದಲ್ಲಿ ಕೆಲಸ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾಗರಾಜ ಹೇಳಿದ್ದಾರೆ.

ಮಾಜಿ ದೇವದಾಸಿಯರನ್ನು ಸಮಾಜದ ಮುಖ್ಯವಾಹಿನಿಗೆ ತಂದು, ಆರ್ಥಿಕವಾಗಿ ಸಬಲರನ್ನಾಗಿಸಬೇಕು ಎಂಬುದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅವರ ಕನಸಾಗಿದೆ. ಅವರ ನೇತೃತ್ವದಲ್ಲಿ ಕೂಡ್ಲಿಗಿಯಲ್ಲಿ ಚಿಕ್ಕಿ ಘಟಕ ಆರಂಭವಾಗಿದ್ದು, ಈ ಘಟಕ ನಡೆಸುತ್ತಿರುವ ಮಾಜಿ ದೇವದಾಸಿ ಸ್ವಾವಲಂಬನಾ ಕೇಂದ್ರಕ್ಕೆ ರಾಜ್ಯೋತ್ಸವ ಪ್ರಶಸ್ತಿ ಸಂದಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ. -ಬಸವರಾಜ ಹರನಹಳ್ಳಿ

Published On - 9:33 pm, Sat, 31 October 20

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ