ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಅಭಿವೃದ್ಧಿ ಸಮಿತಿ ರಚನೆ

ದಕ್ಷಿಣ ಕನ್ನಡ: ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ರಾಜ್ಯದ ಶ್ರೀಮಂತ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ನೂತನ ಅಭಿವೃದ್ಧಿ ಸಮಿತಿ ರಚನೆ ಮಾಡಲಾಗಿದೆ. ಕಾರ್ಯನಿರ್ವಾಹಣಾಧಿಕಾರಿ ಸೇರಿ 6 ಜನರ ಅಭಿವೃದ್ಧಿ ಸಮಿತಿರಚನೆಯಾಗಿದ್ದು, ಮುಂದಿನ 3 ವರ್ಷಗಳ ಅವಧಿಗೆ ಈ ಸಮಿತಿ ರಚಿಸಿ ಆದೇಶಿಸಲಾಗಿದೆ. ಪಿ.ಜಿ.ಎಸ್.ಪ್ರಸಾದ್, ಕೃಷ್ಣ ಶೆಟ್ಟಿ ಕಡಬ, ಪ್ರಸನ್ನ, ಎಸ್.ಮೋಹನ್ ರಾಮ್, ವನಜಾ ಭಟ್ ಸಮಿತಿ ಸದಸ್ಯರಾಗಿ ನೇಮಕ‌ಗೊಂಡಿದ್ದಾರೆ. ವ್ಯವಸ್ಥಾಪನಾ ಸಮಿತಿಗೆ ಪೂರಕವಾಗಿ ಕೆಲಸ ಮಾಡಬೇಕು. ಕ್ಷೇತ್ರದ ಆಂತರಿಕ ವಿಚಾರದಲ್ಲಿ ಕೈಹಾಕದಂತೆ ಸಮಿತಿಗೆ ಸೂಚನೆ ನೀಡಲಾಗಿದೆ. ಇನ್ನು ಭವಿಷ್ಯದಲ್ಲಿ […]

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಅಭಿವೃದ್ಧಿ ಸಮಿತಿ ರಚನೆ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ

Updated on: Oct 30, 2020 | 1:42 PM

ದಕ್ಷಿಣ ಕನ್ನಡ: ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ರಾಜ್ಯದ ಶ್ರೀಮಂತ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ನೂತನ ಅಭಿವೃದ್ಧಿ ಸಮಿತಿ ರಚನೆ ಮಾಡಲಾಗಿದೆ. ಕಾರ್ಯನಿರ್ವಾಹಣಾಧಿಕಾರಿ ಸೇರಿ 6 ಜನರ ಅಭಿವೃದ್ಧಿ ಸಮಿತಿರಚನೆಯಾಗಿದ್ದು, ಮುಂದಿನ 3 ವರ್ಷಗಳ ಅವಧಿಗೆ ಈ ಸಮಿತಿ ರಚಿಸಿ ಆದೇಶಿಸಲಾಗಿದೆ.

ಪಿ.ಜಿ.ಎಸ್.ಪ್ರಸಾದ್, ಕೃಷ್ಣ ಶೆಟ್ಟಿ ಕಡಬ, ಪ್ರಸನ್ನ, ಎಸ್.ಮೋಹನ್ ರಾಮ್, ವನಜಾ ಭಟ್ ಸಮಿತಿ ಸದಸ್ಯರಾಗಿ ನೇಮಕ‌ಗೊಂಡಿದ್ದಾರೆ. ವ್ಯವಸ್ಥಾಪನಾ ಸಮಿತಿಗೆ ಪೂರಕವಾಗಿ ಕೆಲಸ ಮಾಡಬೇಕು. ಕ್ಷೇತ್ರದ ಆಂತರಿಕ ವಿಚಾರದಲ್ಲಿ ಕೈಹಾಕದಂತೆ ಸಮಿತಿಗೆ ಸೂಚನೆ ನೀಡಲಾಗಿದೆ. ಇನ್ನು ಭವಿಷ್ಯದಲ್ಲಿ ಕುಕ್ಕೆ ಅಭಿವೃದ್ಧಿ ಪ್ರಾಧಿಕಾರ ರಚಿಸಲು ಸರ್ಕಾರ ಚಿಂತನೆ ನಡೆಸಿದೆ. ಹೀಗಾಗಿ ಕೇವಲ ಮೂರು ವರ್ಷಗಳ ಅವಧಿಗೆ ಅಭಿವೃದ್ಧಿ ಸಮಿತಿ ರಚನೆ ಮಾಡಲಾಗಿದೆ.

ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ಭಕ್ತರಿಗೆ ಆಘಾತ: ಕೋಟ್ಯಂತರ ಮೌಲ್ಯದ ಆಭರಣ, ವಿಗ್ರಹಗಳ ಅವ್ಯವಹಾರ ಆರೋಪ

Published On - 1:39 pm, Fri, 30 October 20