ಚಾಮುಂಡಿಬೆಟ್ಟದಲ್ಲಿ ರಥೋತ್ಸವ: ಭಕ್ತಾದಿಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಚಾಮುಂಡಿಬೆಟ್ಟದಲ್ಲಿ ರಥೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಭಕ್ತಾದಿಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಅ.28ರ ಸಂಜೆ 6ರಿಂದ ಅ.29 ಮಧ್ಯಾಹ್ನ 12ರವರಗೆ ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ. ಅಕ್ಟೋಬರ್ 29ರಂದು ಚಾಮುಂಡಿ ರಥೋತ್ಸವ ನಡೆಯಲಿದ್ದು ದಸರಾ ನಂತರ ನಡೆಯುವ ರಥೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಹಾಗಾಗಿ, ಈ ಆದೇಶವನ್ನು ಹೊರಡಿಸಲಾಗಿದೆ. ಸ್ಥಳೀಯರು ಹಾಗೂ ಕಾರ್ಯನಿಮಿತ್ತ ತೆರಳುವ ಅಧಿಕಾರಿಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ.

ಚಾಮುಂಡಿಬೆಟ್ಟದಲ್ಲಿ ರಥೋತ್ಸವ: ಭಕ್ತಾದಿಗಳ ಪ್ರವೇಶಕ್ಕೆ ನಿರ್ಬಂಧ

Updated on: Oct 27, 2020 | 6:56 PM

ಮೈಸೂರು: ಚಾಮುಂಡಿಬೆಟ್ಟದಲ್ಲಿ ರಥೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಭಕ್ತಾದಿಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಅ.28ರ ಸಂಜೆ 6ರಿಂದ ಅ.29 ಮಧ್ಯಾಹ್ನ 12ರವರಗೆ ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.

ಅಕ್ಟೋಬರ್ 29ರಂದು ಚಾಮುಂಡಿ ರಥೋತ್ಸವ ನಡೆಯಲಿದ್ದು ದಸರಾ ನಂತರ ನಡೆಯುವ ರಥೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಹಾಗಾಗಿ, ಈ ಆದೇಶವನ್ನು ಹೊರಡಿಸಲಾಗಿದೆ. ಸ್ಥಳೀಯರು ಹಾಗೂ ಕಾರ್ಯನಿಮಿತ್ತ ತೆರಳುವ ಅಧಿಕಾರಿಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ.