ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಇನ್ಸ್‌ಪೆಕ್ಟರ್​ಗೆ 4 ವರ್ಷ ಜೈಲು ಶಿಕ್ಷೆ

ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಇನ್ಸ್‌ಪೆಕ್ಟರ್ ಗೆ 4 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಕರಾವಳಿ ಕಾವಲು ಪಡೆಯ ವೃತ್ತ ನಿರೀಕ್ಷಕ ಗಂಗಿ ರೆಡ್ಡಿಗೆ 4 ವರ್ಷ ಸಾದಾ ಸಜೆ ಜೊತೆಗೆ 5 ಲಕ್ಷ ದಂಡ ವಿಧಿಸಿ ನ್ಯಾ.ಬಿ. ಬಿ. ಜಕಾತಿ ಆದೇಶ ಹೊರಡಿಸಿದ್ದಾರೆ. 2009ರಲ್ಲಿ ಗಂಗಿ ರೆಡ್ಡಿ ಬೆಳ್ತಂಗಡಿ ಠಾಣೆಯಲ್ಲಿ ವೃತ್ತ ನಿರೀಕ್ಷಕರಾಗಿದ್ದರು. ಈ ವೇಳೆ ಲೋಕಾಯುಕ್ತ ಡಿ.ವೈ.ಎಸ್.ಪಿ. ಸದಾನಂದ ವರ್ಣೇಕರ್ ದಾಳಿ ನಡೆಸಿ ದಾಖಲೆ ವಶ ಪಡಿಸಿಕೊಂಡಿದ್ದರು. ದಾಳಿಯಲ್ಲಿ ರೂ. 19 ಲಕ್ಷದಷ್ಟು […]

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಇನ್ಸ್‌ಪೆಕ್ಟರ್​ಗೆ 4 ವರ್ಷ ಜೈಲು ಶಿಕ್ಷೆ
ಸಾಧು ಶ್ರೀನಾಥ್​

Updated on: Aug 27, 2020 | 4:25 PM

ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಇನ್ಸ್‌ಪೆಕ್ಟರ್ ಗೆ 4 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಕರಾವಳಿ ಕಾವಲು ಪಡೆಯ ವೃತ್ತ ನಿರೀಕ್ಷಕ ಗಂಗಿ ರೆಡ್ಡಿಗೆ 4 ವರ್ಷ ಸಾದಾ ಸಜೆ ಜೊತೆಗೆ 5 ಲಕ್ಷ ದಂಡ ವಿಧಿಸಿ ನ್ಯಾ.ಬಿ. ಬಿ. ಜಕಾತಿ ಆದೇಶ ಹೊರಡಿಸಿದ್ದಾರೆ.

2009ರಲ್ಲಿ ಗಂಗಿ ರೆಡ್ಡಿ ಬೆಳ್ತಂಗಡಿ ಠಾಣೆಯಲ್ಲಿ ವೃತ್ತ ನಿರೀಕ್ಷಕರಾಗಿದ್ದರು. ಈ ವೇಳೆ ಲೋಕಾಯುಕ್ತ ಡಿ.ವೈ.ಎಸ್.ಪಿ. ಸದಾನಂದ ವರ್ಣೇಕರ್ ದಾಳಿ ನಡೆಸಿ ದಾಖಲೆ ವಶ ಪಡಿಸಿಕೊಂಡಿದ್ದರು. ದಾಳಿಯಲ್ಲಿ ರೂ. 19 ಲಕ್ಷದಷ್ಟು ಅಕ್ರಮ ಆಸ್ತಿ ಪತ್ತೆಯಾಗಿತ್ತು.

ಭ್ರಷ್ಟಾಚಾರ ನಿಗ್ರಹ ಕಾಯಿದೆಯ ಕಲಂ 13 (1) (ಇ) ರ ಅಡಿ ಗಂಗಿ ರೆಡ್ಡಿ ಮೇಲಿನ ಆರೋಪ ಸಾಬೀತು ಆಗಿತ್ತು. ಮಂಗಳೂರಿನ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದಿಂದ ಈಗ ತೀರ್ಪು ಹೊರಬಿದ್ದಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us