ಡಿ.ಜೆ.ಹಳ್ಳಿ-ಕೆ.ಜಿ.ಹಳ್ಳಿ ಗಲಭೆ ಪ್ರಕರಣ: ಫೇಸ್​ಬುಕ್​ ನವೀನ್‌ಗೆ ಸಿಕ್ತು ಜಾಮೀನು

ಡಿ.ಜೆ.ಹಳ್ಳಿ-ಕೆ.ಜಿ.ಹಳ್ಳಿ ಗಲಭೆ ಪ್ರಕರಣ: ಫೇಸ್​ಬುಕ್​ ನವೀನ್‌ಗೆ ಸಿಕ್ತು ಜಾಮೀನು

ಬೆಂಗಳೂರು: ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಗಲಭೆ ಪ್ರಕರಣದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ್ದ ಆರೋಪಿ ನವೀನ್‌ಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ. ನವೀನ್‌ಗೆ ಜಾಮೀನು ನೀಡಿದರೆ ಆತನಿಗೆ ಪ್ರಾಣ ಬೆದರಿಕೆಯಿದೆ. ಸಮಾಜದಲ್ಲಿ ಅಶಾಂತಿ ತಲೆದೋರುತ್ತದೆಂದು ಎಸ್‌ಪಿಪಿ ವಾದ ಮಂಡಿಸಿದರು. ಆದರೆ ಈ ಕಾರಣಕ್ಕೆ ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಫೇಸ್‌ಬುಕ್ ಪೋಸ್ಟ್ ಡಿಲೀಟ್ ಮಾಡಿದ್ದಾನೆ. ಕಠಿಣ ಷರತ್ತು ವಿಧಿಸಿ ಜಾಮೀನು ನೀಡಲಾಗುವುದು. ಮತ್ತೆ ಇಂಥ ಕೃತ್ಯದಲ್ಲಿ ತೊಡಗಿದ್ರೆ ಜಾಮೀನು […]

sadhu srinath

|

Oct 22, 2020 | 2:51 PM

ಬೆಂಗಳೂರು: ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಗಲಭೆ ಪ್ರಕರಣದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ್ದ ಆರೋಪಿ ನವೀನ್‌ಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ.

ನವೀನ್‌ಗೆ ಜಾಮೀನು ನೀಡಿದರೆ ಆತನಿಗೆ ಪ್ರಾಣ ಬೆದರಿಕೆಯಿದೆ. ಸಮಾಜದಲ್ಲಿ ಅಶಾಂತಿ ತಲೆದೋರುತ್ತದೆಂದು ಎಸ್‌ಪಿಪಿ ವಾದ ಮಂಡಿಸಿದರು. ಆದರೆ ಈ ಕಾರಣಕ್ಕೆ ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಫೇಸ್‌ಬುಕ್ ಪೋಸ್ಟ್ ಡಿಲೀಟ್ ಮಾಡಿದ್ದಾನೆ. ಕಠಿಣ ಷರತ್ತು ವಿಧಿಸಿ ಜಾಮೀನು ನೀಡಲಾಗುವುದು. ಮತ್ತೆ ಇಂಥ ಕೃತ್ಯದಲ್ಲಿ ತೊಡಗಿದ್ರೆ ಜಾಮೀನು ರದ್ದುಪಡಿಸಬಹುದು ಎಂದು ನ್ಯಾ. ಬಿ.ಎ. ಪಾಟೀಲ್‌ ಅವರ ಏಕ ಸದಸ್ಯ ಪೀಠ ಆದೇಶ ನೀಡಿದೆ.

Follow us on

Related Stories

Most Read Stories

Click on your DTH Provider to Add TV9 Kannada