
ಬೆಂಗಳೂರು: ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಗಲಭೆ ಪ್ರಕರಣದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ್ದ ಆರೋಪಿ ನವೀನ್‌ಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ.
ನವೀನ್‌ಗೆ ಜಾಮೀನು ನೀಡಿದರೆ ಆತನಿಗೆ ಪ್ರಾಣ ಬೆದರಿಕೆಯಿದೆ. ಸಮಾಜದಲ್ಲಿ ಅಶಾಂತಿ ತಲೆದೋರುತ್ತದೆಂದು ಎಸ್‌ಪಿಪಿ ವಾದ ಮಂಡಿಸಿದರು. ಆದರೆ ಈ ಕಾರಣಕ್ಕೆ ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಫೇಸ್‌ಬುಕ್ ಪೋಸ್ಟ್ ಡಿಲೀಟ್ ಮಾಡಿದ್ದಾನೆ. ಕಠಿಣ ಷರತ್ತು ವಿಧಿಸಿ ಜಾಮೀನು ನೀಡಲಾಗುವುದು. ಮತ್ತೆ ಇಂಥ ಕೃತ್ಯದಲ್ಲಿ ತೊಡಗಿದ್ರೆ ಜಾಮೀನು ರದ್ದುಪಡಿಸಬಹುದು ಎಂದು ನ್ಯಾ. ಬಿ.ಎ. ಪಾಟೀಲ್ ಅವರ ಏಕ ಸದಸ್ಯ ಪೀಠ ಆದೇಶ ನೀಡಿದೆ.
Published On - 2:50 pm, Thu, 22 October 20