ಡಿ.ಜೆ ಹಳ್ಳಿ ಗಲಾಟೆ: ರಾತ್ರೋರಾತ್ರಿ 80 ಆರೋಪಿಗಳು ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿ ಬಂಧಿತ 80 ಆರೋಪಿಗಳನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗಿದೆ. ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಬಳಿ ಫೇಸ್​ಬುಕ್ ಪೋಸ್ಟ್​ನಿಂದಾದ ಗಲಾಟೆ ಹಿಂಸಾಚಾರಕ್ಕೆ ತಿರುಗಿತ್ತು. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, 200 ಕ್ಕೂ ಅಧಿಕ ಮಂದಿ ಅರೆಸ್ಟ್ ಆಗಿದ್ದಾರೆ. ಈ ಪೈಕಕಿ 80 ಆರೋಪಿಗಳಿಗೆ 15 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, 80 ಆರೋಪಿಗಳನ್ನು ರಾತ್ರೋರಾತ್ರಿ ಬಳ್ಳಾರಿ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗಿದೆ. ಪೊಲೀಸರು, ಬಂಧಿತರನ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ನಿನ್ನೆ ಕೋರ್ಟ್‌ಗೆ […]

ಡಿ.ಜೆ ಹಳ್ಳಿ ಗಲಾಟೆ: ರಾತ್ರೋರಾತ್ರಿ 80 ಆರೋಪಿಗಳು ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್
Follow us
ಆಯೇಷಾ ಬಾನು
|

Updated on: Aug 14, 2020 | 8:52 AM

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿ ಬಂಧಿತ 80 ಆರೋಪಿಗಳನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗಿದೆ.

ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಬಳಿ ಫೇಸ್​ಬುಕ್ ಪೋಸ್ಟ್​ನಿಂದಾದ ಗಲಾಟೆ ಹಿಂಸಾಚಾರಕ್ಕೆ ತಿರುಗಿತ್ತು. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, 200 ಕ್ಕೂ ಅಧಿಕ ಮಂದಿ ಅರೆಸ್ಟ್ ಆಗಿದ್ದಾರೆ. ಈ ಪೈಕಕಿ 80 ಆರೋಪಿಗಳಿಗೆ 15 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, 80 ಆರೋಪಿಗಳನ್ನು ರಾತ್ರೋರಾತ್ರಿ ಬಳ್ಳಾರಿ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗಿದೆ.

ಪೊಲೀಸರು, ಬಂಧಿತರನ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ನಿನ್ನೆ ಕೋರ್ಟ್‌ಗೆ ಹಾಜರುಪಡಿಸಿದ್ದರು. ಆರೋಪಿಗಳನ್ನು ಬೆಂಗಳೂರಿನಲ್ಲಿ ಇರಿಸಿದ್ರೆ ಗಲಾಟೆ ಆಗುವ ಸಾಧ್ಯತೆ ಇದೆ. ಹೀಗಾಗಿ 80 ಆರೋಪಿಗಳನ್ನು ಸಿಸಿಬಿ, ಕೆಎಸ್‌ಆರ್‌ಪಿ ಭದ್ರತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಮೂಲಕ ಬಳ್ಳಾರಿ ಕಾರಾಗೃಹಕ್ಕೆ ಶಿಫ್ಟ್ ಮಾಡಿದ್ದಾರೆ. ಇನ್ನು ಬಂಧಿತರಲ್ಲಿ ಮೂವರಿಗೆ ಕೊರೊನಾ ಸೋಂಕು ತಗುಲಿದ್ದು, ಕೊರೊನಾ ಇರುವ ಕಾರಣ ಅವರನ್ನು ಕೋವಿಡ್ ಕೇರ್ ಸೆಂಟರ್​ಗೆ ರವಾನಿಸಲಾಗಿದೆ. ಉಳಿದಂತೆ ಹದಿನೈದು ಅರೋಪಿಗಳನ್ನು ಐದು ದಿನ ಪೊಲೀಸ್ ವಶಕ್ಕೆ ಪಡೆಯಲಾಗಿದೆ.