
ಬೆಂಗಳೂರು: ಡಿ.ಜೆ.ಹಳ್ಳಿ-ಕೆ.ಜಿ. ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣವನ್ನ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಖಂಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ರ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿನ ಗಲಭೆ ಪ್ರಕರಣ ತೀವ್ರ ಖಂಡನೀಯ. ಸಮಾಜದ ಸ್ವಾಸ್ಥ್ಯ ಕದಡುವುದರಿಂದ ಯಾರಿಗೂ ಉಪಯೋಗವಿಲ್ಲ. ಎಲ್ಲರಿಗೂ ನಷ್ಟ. ಪ್ರಚೋದನೆ ಮಾಡುವುದು ತಪ್ಪು, ಪ್ರಚೋದಿತರಾಗಿ ಸಾರ್ವಜನಿಕರು, ಪೊಲೀಸರು, ಪತ್ರಕರ್ತರು.. ಹೀಗೆ ಎಲ್ಲರ ಮೇಲೆ ಹಲ್ಲೆ ಮಾಡಿ ಗಲಾಟೆ ಮಾಡುವುದೂ ತಪ್ಪು. ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದಿದ್ದಾರೆ ಮಾಜಿ ಪ್ರಧಾನಿ ದೇವೇಗೌಡ.
ಬೆಂಗಳೂರಿನಲ್ಲಿನ ಗಲಭೆ ಪ್ರಕರಣ ತೀವ್ರ ಖಂಡನೀಯ. ಸಮಾಜದ ಸ್ವಾಸ್ಥ್ಯ ಕದಡುವುದರಿಂದ ಯಾರಿಗೂ ಉಪಯೋಗವಿಲ್ಲ,ಎಲ್ಲರಿಗೂ ನಷ್ಟ. ಪ್ರಚೋದನೆ ಮಾಡುವುದು ತಪ್ಪು, ಪ್ರಚೋದಿತರಾಗಿ ಸಾರ್ವಜನಿಕರು, ಪೊಲೀಸರು,ಪತ್ರಕರ್ತರು ಹೀಗೆ ಎಲ್ಲರ ಮೇಲೆ ಹಲ್ಲೆ ಮಾಡಿ ಗಲಾಟೆ ಮಾಡುವುದೂ ತಪ್ಪು. ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ.
— H D Devegowda (@H_D_Devegowda) August 12, 2020