ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ನರಳಿ ನರಳಿ ಮೃತಪಟ್ಟ ಕೊರೊನಾ ಸೋಂಕಿತ
ಬೆಂಗಳೂರು: ಮಹಾಮಾರಿ ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಸರಿಯಾದ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ನರಳಿ ನರಳಿ ನರಳಿ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ. ಹೋಟೆಲ್ನಲ್ಲಿ ಕ್ವಾರಂಟೈನ್ ಇದ್ದ ವ್ಯಕ್ತಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಮೂರು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ಸೋಂಕಿತನನ್ನು ಕರೆದುಕೊಂಡು ಹೋಗಿದ್ದಾರೆ. ಆದರೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಯನ್ನು ಅಡ್ಮಿಟ್ ಮಾಡಿಕೊಂಡಿಲ್ಲ. ವಾಪಸ್ ಕ್ವಾರಂಟೈನ್ ಹೋಟೆಲ್ಗೆ ಹೊದ್ರೆ ಸೋಂಕಿತನೆಂದು ಅಲ್ಲಿಯೂ ಆತನನ್ನು ಸೇರಿಸಿಕೊಂಡಿಲ್ಲ. ಮರುದಿನ ಎಲ್ಲಾ ಆಸ್ಪತ್ರೆಗಳಿಗೆ ಅಡ್ಡಾಡಿದ್ರೂ ಯಾರು ದಾಖಲು ಮಾಡಿಕೊಂಡಿಲ್ಲ. ಹೀಗಾಗಿ ಚಿಕಿತ್ಸೆ ಇಲ್ಲದೆ […]
ಬೆಂಗಳೂರು: ಮಹಾಮಾರಿ ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಸರಿಯಾದ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ನರಳಿ ನರಳಿ ನರಳಿ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ.
ಹೋಟೆಲ್ನಲ್ಲಿ ಕ್ವಾರಂಟೈನ್ ಇದ್ದ ವ್ಯಕ್ತಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಮೂರು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ಸೋಂಕಿತನನ್ನು ಕರೆದುಕೊಂಡು ಹೋಗಿದ್ದಾರೆ. ಆದರೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಯನ್ನು ಅಡ್ಮಿಟ್ ಮಾಡಿಕೊಂಡಿಲ್ಲ.
ವಾಪಸ್ ಕ್ವಾರಂಟೈನ್ ಹೋಟೆಲ್ಗೆ ಹೊದ್ರೆ ಸೋಂಕಿತನೆಂದು ಅಲ್ಲಿಯೂ ಆತನನ್ನು ಸೇರಿಸಿಕೊಂಡಿಲ್ಲ. ಮರುದಿನ ಎಲ್ಲಾ ಆಸ್ಪತ್ರೆಗಳಿಗೆ ಅಡ್ಡಾಡಿದ್ರೂ ಯಾರು ದಾಖಲು ಮಾಡಿಕೊಂಡಿಲ್ಲ. ಹೀಗಾಗಿ ಚಿಕಿತ್ಸೆ ಇಲ್ಲದೆ ವ್ಯಕ್ತಿ ನರಳಿ ನರಳಿ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.
ಕಲಾಸಿಪಾಳ್ಯದ ಪೊಲೀಸ್ ಠಾಣೆಯ ಮುಂದೆ ಮೃತ ಸೋಂಕಿತನ ಮನೆಯಿದೆ. ಮಧ್ಯರಾತ್ರಿ ಸುಮಾರು 2 ಗಂಟೆಗೆ ಆ್ಯಂಬುಲೆನ್ಸ್ನಲ್ಲಿ ಬಂದು ಮೃತದೇಹ ತೆಗೆದುಕೊಂಡು ಹೋಗಿದ್ದಾರೆ.
Published On - 11:31 am, Thu, 25 June 20