ನಂಜನಗೂಡು ಆರೋಗ್ಯಾಧಿಕಾರಿ ಆತ್ಮಹತ್ಯೆಯಲ್ಲ; CEO ಕೊಲೆ ಮಾಡಿದ್ದಾರೆ: ವೈದ್ಯರ ಆಕ್ರೋಶ
ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪಂಚಾಯತ್ ಸಿಇಓ ಪ್ರಶಾಂತ್ ಕುಮಾರ್ ಮಿಶ್ರಾ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಈ ಸಂಬಂಧ ಮೈಸೂರಿನಲ್ಲಿ ಮಾತನಾಡಿರುವ ವೈದ್ಯರ ಸಂಘದ ಅಧ್ಯಕ್ಷ ಡಾ.ರವೀಂದ್ರ, ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿಯಲ್ಲ. ಅವರಿಗೆ ಜಿಲ್ಲಾ ಪಂಚಾಯಿತಿ ಸಿಇಓ ಒತ್ತಡ ಹಾಕುವ ಮೂಲಕ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ. ಆತ್ಮಹತ್ಯೆಗೆ ಪ್ರೇರಣೆ ನೀಡುವುದು ಕೂಡಾ ಕೊಲೆಗೆ ಸಮಾನ ಎಂದು ಆರೋಪಿಸಿದ್ದಾರೆ. ಪ್ರಶಾಂತ್ […]

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪಂಚಾಯತ್ ಸಿಇಓ ಪ್ರಶಾಂತ್ ಕುಮಾರ್ ಮಿಶ್ರಾ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ.
ಈ ಸಂಬಂಧ ಮೈಸೂರಿನಲ್ಲಿ ಮಾತನಾಡಿರುವ ವೈದ್ಯರ ಸಂಘದ ಅಧ್ಯಕ್ಷ ಡಾ.ರವೀಂದ್ರ, ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿಯಲ್ಲ. ಅವರಿಗೆ ಜಿಲ್ಲಾ ಪಂಚಾಯಿತಿ ಸಿಇಓ ಒತ್ತಡ ಹಾಕುವ ಮೂಲಕ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ. ಆತ್ಮಹತ್ಯೆಗೆ ಪ್ರೇರಣೆ ನೀಡುವುದು ಕೂಡಾ ಕೊಲೆಗೆ ಸಮಾನ ಎಂದು ಆರೋಪಿಸಿದ್ದಾರೆ.
ಪ್ರಶಾಂತ್ ಕುಮಾರ್ ಮಿಶ್ರಾ ವಿರುದ್ಧ ಕೊಡಗು ಜಿಲ್ಲೆಯಲ್ಲಿ ಇದ್ದಾಗಲ್ಲೂ ಜಾತಿ ನಿಂದನೆ ಕೇಸ್ ಇದೆ. ಇಂತಹ ಅಧಿಕಾರಿ ನಮಗೆ ಬೇಡ. ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಸಸ್ಪೆಂಡ್ ಮಾಡಿ ಎಂದು ಮೈಸರು ಜಿಲ್ಲೆಯ ವೈದ್ಯರು ಆಗ್ರಹಿಸಿದ್ದಾರೆ.
ಈ ಸಂಬಂಧ ಮೈಸೂರು DHO ಕಚೇರಿ ಬಳಿ ಸೇರಿದ್ದ ವೈದ್ಯರು ಹೆಚ್ಒ ಶವವಿಟ್ಟು ಪ್ರತಿಭಟನೆ ಮಾಡಿದರಲ್ಲದೇ ಡಿಸಿ ಅಭಿರಾಂ ಜಿ.ಶಂಕರ್ ಹಾಗೂ ಜಿ.ಪಂ. ಸಿಇಒ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಕೆಲ ವೈದ್ಯರು ಜಿ.ಪಂ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಅಮಾನತಿಗೆ ಪಟ್ಟು ಹಿಡಿದರಲ್ಲದೇ, ಅವರನ್ನು ಅಮಾನತು ಮಾಡೋವರೆಗೆ ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದಲ್ಲಿ ಶೇ.60ರಷ್ಟು ಹುದ್ದೆಗಳು ಖಾಲಿ ಇವೆ. ಇಂಥದ್ರಲ್ಲಿ ವೈದ್ಯರು ಹೇಗೆ ಕೆಲಸ ಮಾಡಬೇಕು? ವೈದ್ಯರನ್ನು ಸವತಿ ಮಕ್ಕಳಂತೆ ನೋಡುತ್ತಿದ್ದಿರಿ, ಆ್ಯಂಟಿಜೆನ್ ಟೆಸ್ಟಿಂಗ್ ಮಾಡುವಂತೆ ಟಾರ್ಗೆಟ್ ಕೊಟ್ಟಿದ್ದೀರಿ ಇದು ಎಷ್ಟು ಸರಿ ಎಂದು ಅಧಿಕಾರಿಗಳಿಗೆ ಡಾ.ರವೀಂದ್ರ ಏರುದನಿಯಲ್ಲಿ ಫುಲ್ ಕ್ಲಾಸ್ ತೆಗೆದುಕೊಂಡರು.



