ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್: ಮೂವರ ಬಂಧನ
ದೇವನಹಳ್ಳಿ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಗಂಟಿಗಾನಹಳ್ಳಿ ಗ್ರಾಮದ ಹೊರವಲಯದ ತೋಟದಮನೆಯಲ್ಲಿ ಬೆಟ್ಟಿಂಗ್ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಪಿಎಸ್ಐ ಗಜೇಂದ್ರ ನೇತೃತ್ವದ ತಂಡ ತೋಟದ ಮನೆ ಮೇಲೆ ದಾಳಿ ನಡೆಸಿ ಬೆಟ್ಟಿಂಗ್ ನಡೆಸುತ್ತಿದ್ದ ಚೆನ್ನಕೇಶವ, ಮಣಿಕಂಠ ಮತ್ತು ಹರೀಶ್ನನ್ನು ಬಂಧಿಸಿದ್ದಾರೆ. ಬಂಧಿತರಿಂದ 18,700 ರೂ. ವಶಕ್ಕೆ ಪಡೆಯಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೇವನಹಳ್ಳಿ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಗಂಟಿಗಾನಹಳ್ಳಿ ಗ್ರಾಮದ ಹೊರವಲಯದ ತೋಟದಮನೆಯಲ್ಲಿ ಬೆಟ್ಟಿಂಗ್ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಪಿಎಸ್ಐ ಗಜೇಂದ್ರ ನೇತೃತ್ವದ ತಂಡ ತೋಟದ ಮನೆ ಮೇಲೆ ದಾಳಿ ನಡೆಸಿ ಬೆಟ್ಟಿಂಗ್ ನಡೆಸುತ್ತಿದ್ದ ಚೆನ್ನಕೇಶವ, ಮಣಿಕಂಠ ಮತ್ತು ಹರೀಶ್ನನ್ನು ಬಂಧಿಸಿದ್ದಾರೆ. ಬಂಧಿತರಿಂದ 18,700 ರೂ. ವಶಕ್ಕೆ ಪಡೆಯಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




