ವಿಮಾನ ಹತ್ತುವಂತಿಲ್ಲ, ರೈಲು, ಬಸ್ಸಲ್ಲೂ ಎಂಟ್ರಿಯಿಲ್ಲ: ಸಿದ್ಧುಗೆ ಖಾಕಿ ನಿರ್ಬಂಧ
ಮಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಂಗಳೂರು ಭೇಟಿಗೆ ಪೊಲೀಸ್ ಇಲಾಖೆ ನಿರ್ಬಂಧಿಸಿದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಈಗಾಗಲೇ ಮಂಗಳೂರಿನಲ್ಲಿ ಪ್ರತಿಭಟನೆಗಳು ಹಿಂಸಾ ಸ್ವರೂಪ ಪಡೆದುಕೊಂಡಿದೆ. ಡಿಸೆಂಬರ್ 22ರ ರಾತ್ರಿಯವರೆಗೆ ಮಂಗಳೂರಿನಲ್ಲಿ ಕರ್ಫ್ಯೂ ಜಾರಿಯಲ್ಲಿರುತ್ತೆ. ಹೀಗಾಗಿ ಮಂಗಳೂರು ಭೇಟಿ ಮುಂದೂಡುವಂತೆ ಸಿದ್ದರಾಮಯ್ಯಗೆ ಪತ್ರ ಬರೆಯಲಾಗಿದೆ. ಸಿದ್ದರಾಮಯ್ಯ ಮಂಗಳೂರಿಗೆ ಆಗಮಿಸುವುದರಿಂದ ಕಾನೂನು ಸುವ್ಯವಸ್ಥೆ, ಶಾಂತಿಗೆ ಭಂಗವುಂಟಾಗುವ ಸಾಧ್ಯತೆಯಿದೆ. ಹೀಗಾಗಿ ಸಿದ್ದರಾಮಯ್ಯ ಮಂಗಳೂರು ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ಯಾವುದೇ ವಿಮಾನ ನಿಲ್ದಾಣದಿಂದ ಅಂದ್ರೆ, ಬೆಂಗಳೂರು, ಹುಬ್ಬಳ್ಳಿ, ಮೈಸೂರು, ಗೋವಾ ಏರ್‌ಪೋರ್ಟ್ […]
ಮಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಂಗಳೂರು ಭೇಟಿಗೆ ಪೊಲೀಸ್ ಇಲಾಖೆ ನಿರ್ಬಂಧಿಸಿದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಈಗಾಗಲೇ ಮಂಗಳೂರಿನಲ್ಲಿ ಪ್ರತಿಭಟನೆಗಳು ಹಿಂಸಾ ಸ್ವರೂಪ ಪಡೆದುಕೊಂಡಿದೆ. ಡಿಸೆಂಬರ್ 22ರ ರಾತ್ರಿಯವರೆಗೆ ಮಂಗಳೂರಿನಲ್ಲಿ ಕರ್ಫ್ಯೂ ಜಾರಿಯಲ್ಲಿರುತ್ತೆ. ಹೀಗಾಗಿ ಮಂಗಳೂರು ಭೇಟಿ ಮುಂದೂಡುವಂತೆ ಸಿದ್ದರಾಮಯ್ಯಗೆ ಪತ್ರ ಬರೆಯಲಾಗಿದೆ.
ಸಿದ್ದರಾಮಯ್ಯ ಮಂಗಳೂರಿಗೆ ಆಗಮಿಸುವುದರಿಂದ ಕಾನೂನು ಸುವ್ಯವಸ್ಥೆ, ಶಾಂತಿಗೆ ಭಂಗವುಂಟಾಗುವ ಸಾಧ್ಯತೆಯಿದೆ. ಹೀಗಾಗಿ ಸಿದ್ದರಾಮಯ್ಯ ಮಂಗಳೂರು ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ಯಾವುದೇ ವಿಮಾನ ನಿಲ್ದಾಣದಿಂದ ಅಂದ್ರೆ, ಬೆಂಗಳೂರು, ಹುಬ್ಬಳ್ಳಿ, ಮೈಸೂರು, ಗೋವಾ ಏರ್‌ಪೋರ್ಟ್ ಮೂಲಕವಾಗಬಹುದು ಅಥವಾ ಯಾವುದೇ ವಾಹನ, ರೈಲಿನ ಮೂಲಕವಾಗಬಹುದು ಮಂಗಳೂರಿಗೆ ಆಗಮಿಸದಂತೆ ಮಂಗಳೂರು ಪೊಲೀಸ್ ಆಯುಕ್ತ ಪಿ.ಎಸ್.ಹರ್ಷಾ ಪತ್ರ ಬರೆದಿದ್ದಾರೆ.
Published On - 10:08 am, Sat, 21 December 19