ವಿಮಾನ ಹತ್ತುವಂತಿಲ್ಲ, ರೈಲು, ಬಸ್ಸಲ್ಲೂ ಎಂಟ್ರಿಯಿಲ್ಲ: ಸಿದ್ಧುಗೆ ಖಾಕಿ ನಿರ್ಬಂಧ

ಮಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಂಗಳೂರು ಭೇಟಿಗೆ ಪೊಲೀಸ್ ಇಲಾಖೆ ನಿರ್ಬಂಧಿಸಿದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಈಗಾಗಲೇ ಮಂಗಳೂರಿನಲ್ಲಿ ಪ್ರತಿಭಟನೆಗಳು ಹಿಂಸಾ ಸ್ವರೂಪ ಪಡೆದುಕೊಂಡಿದೆ. ಡಿಸೆಂಬರ್ 22ರ ರಾತ್ರಿಯವರೆಗೆ ಮಂಗಳೂರಿನಲ್ಲಿ ಕರ್ಫ್ಯೂ ಜಾರಿಯಲ್ಲಿರುತ್ತೆ. ಹೀಗಾಗಿ ಮಂಗಳೂರು ಭೇಟಿ ಮುಂದೂಡುವಂತೆ ಸಿದ್ದರಾಮಯ್ಯಗೆ ಪತ್ರ ಬರೆಯಲಾಗಿದೆ. ಸಿದ್ದರಾಮಯ್ಯ ಮಂಗಳೂರಿಗೆ ಆಗಮಿಸುವುದರಿಂದ ಕಾನೂನು ಸುವ್ಯವಸ್ಥೆ, ಶಾಂತಿಗೆ ಭಂಗವುಂಟಾಗುವ ಸಾಧ್ಯತೆಯಿದೆ. ಹೀಗಾಗಿ ಸಿದ್ದರಾಮಯ್ಯ ಮಂಗಳೂರು ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ಯಾವುದೇ ವಿಮಾನ ನಿಲ್ದಾಣದಿಂದ ಅಂದ್ರೆ, ಬೆಂಗಳೂರು, ಹುಬ್ಬಳ್ಳಿ, ಮೈಸೂರು, ಗೋವಾ ಏರ್‌ಪೋರ್ಟ್‌ […]

ವಿಮಾನ ಹತ್ತುವಂತಿಲ್ಲ, ರೈಲು, ಬಸ್ಸಲ್ಲೂ ಎಂಟ್ರಿಯಿಲ್ಲ: ಸಿದ್ಧುಗೆ ಖಾಕಿ ನಿರ್ಬಂಧ
ಸಾಧು ಶ್ರೀನಾಥ್​

Updated on: Dec 21, 2019 | 10:34 AM

ಮಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಂಗಳೂರು ಭೇಟಿಗೆ ಪೊಲೀಸ್ ಇಲಾಖೆ ನಿರ್ಬಂಧಿಸಿದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಈಗಾಗಲೇ ಮಂಗಳೂರಿನಲ್ಲಿ ಪ್ರತಿಭಟನೆಗಳು ಹಿಂಸಾ ಸ್ವರೂಪ ಪಡೆದುಕೊಂಡಿದೆ. ಡಿಸೆಂಬರ್ 22ರ ರಾತ್ರಿಯವರೆಗೆ ಮಂಗಳೂರಿನಲ್ಲಿ ಕರ್ಫ್ಯೂ ಜಾರಿಯಲ್ಲಿರುತ್ತೆ. ಹೀಗಾಗಿ ಮಂಗಳೂರು ಭೇಟಿ ಮುಂದೂಡುವಂತೆ ಸಿದ್ದರಾಮಯ್ಯಗೆ ಪತ್ರ ಬರೆಯಲಾಗಿದೆ.

ಸಿದ್ದರಾಮಯ್ಯ ಮಂಗಳೂರಿಗೆ ಆಗಮಿಸುವುದರಿಂದ ಕಾನೂನು ಸುವ್ಯವಸ್ಥೆ, ಶಾಂತಿಗೆ ಭಂಗವುಂಟಾಗುವ ಸಾಧ್ಯತೆಯಿದೆ. ಹೀಗಾಗಿ ಸಿದ್ದರಾಮಯ್ಯ ಮಂಗಳೂರು ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ಯಾವುದೇ ವಿಮಾನ ನಿಲ್ದಾಣದಿಂದ ಅಂದ್ರೆ, ಬೆಂಗಳೂರು, ಹುಬ್ಬಳ್ಳಿ, ಮೈಸೂರು, ಗೋವಾ ಏರ್‌ಪೋರ್ಟ್‌ ಮೂಲಕವಾಗಬಹುದು ಅಥವಾ ಯಾವುದೇ ವಾಹನ, ರೈಲಿನ ಮೂಲಕವಾಗಬಹುದು ಮಂಗಳೂರಿಗೆ ಆಗಮಿಸದಂತೆ ಮಂಗಳೂರು ಪೊಲೀಸ್ ಆಯುಕ್ತ ಪಿ.ಎಸ್.ಹರ್ಷಾ ಪತ್ರ ಬರೆದಿದ್ದಾರೆ.

Published On - 10:08 am, Sat, 21 December 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us