
ಕಲಬುರಗಿ:ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಕಮಲಾಪುರ ತಾಲೂಕಿನ ದಿನಸಿ ತಾಂಡಾ ಬಳಿ ನಡೆದಿದೆ. ಮಾರುತಿ(45), ಶಾರದಾಬಾಯಿ(40) ಹತ್ಯೆಯಾದ ದಂಪತಿ.
ಕೆಲ ದುಷ್ಕರ್ಮಿಗಳು ನಿನ್ನೆ ಮಧ್ಯರಾತ್ರಿ ಮನೆಗೆ ನುಗ್ಗಿ ಮಾರಾಕಾಸ್ತ್ರಗಳಿಂದ ಕೊಚ್ಚಿ ದಂಪತಿಯ ಕೊಂದು ಪರಾರಿಯಾಗಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ಹಳೆ ವೈಷಮ್ಯವಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಘಟನೆ ಜನರಲ್ಲಿ ನಡುಕ ಹುಟ್ಟುವಂತೆ ಮಾಡಿದೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ. ಕಮಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.