AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ -ಅತ್ತೆಯನ್ನು ಕೊಡಲಿಯಿಂದ ಕೊಚ್ಚಿ ಕೊಂದ ಅಳಿಯ!

ಬಾಗಲಕೋಟೆ:ಅತ್ತೆ ಮನೆಯವರು ಆಸ್ತಿ ಮತ್ತು ವರದಕ್ಷಿಣೆ ನೀಡಿಲ್ಲವೆಂದು ಜಗಳ ತೆಗೆದ ಪತಿ ಮಹಾಶಯ ತನ್ನ ಹೆಂಡತಿ ಹಾಗೂ ಅತ್ತೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.   ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ಲಿಂಗಾಪುರ ಗ್ರಾಮದ ರಂಜಿತಾ(22) ಹಾಗೂ ರೇಣವ್ವ(50) ಮೃತ ದುರ್ದೈವಿಗಳು. ವರ್ಷದ ಹಿಂದೆ ಮೃತ ರಂಜಿತಾಗೆ, ವಿಠ್ಠಲ ಎಂಬ ಯುವಕನೊಂದಿಗೆ ಮದುವೆಯಾಗಿತ್ತು. ಆದರೆ ಆಸ್ತಿ ವಿಚಾರವಾಗಿ ಪದೇಪದೇ ರಂಜಿತಾಳ ಜೊತೆ ವಿಠ್ಠಲ ಜಗಳ ತೆಗೆಯುತ್ತಿದ್ದ, ಇದರಿಂದ ರೋಸಿ ಹೋಗಿದ್ದ ರಂಜಿತ […]

ಪತ್ನಿ -ಅತ್ತೆಯನ್ನು ಕೊಡಲಿಯಿಂದ ಕೊಚ್ಚಿ ಕೊಂದ ಅಳಿಯ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 10, 2020 | 10:48 AM

Share

ಬಾಗಲಕೋಟೆ:ಅತ್ತೆ ಮನೆಯವರು ಆಸ್ತಿ ಮತ್ತು ವರದಕ್ಷಿಣೆ ನೀಡಿಲ್ಲವೆಂದು ಜಗಳ ತೆಗೆದ ಪತಿ ಮಹಾಶಯ ತನ್ನ ಹೆಂಡತಿ ಹಾಗೂ ಅತ್ತೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ಲಿಂಗಾಪುರ ಗ್ರಾಮದ ರಂಜಿತಾ(22) ಹಾಗೂ ರೇಣವ್ವ(50) ಮೃತ ದುರ್ದೈವಿಗಳು. ವರ್ಷದ ಹಿಂದೆ ಮೃತ ರಂಜಿತಾಗೆ, ವಿಠ್ಠಲ ಎಂಬ ಯುವಕನೊಂದಿಗೆ ಮದುವೆಯಾಗಿತ್ತು. ಆದರೆ ಆಸ್ತಿ ವಿಚಾರವಾಗಿ ಪದೇಪದೇ ರಂಜಿತಾಳ ಜೊತೆ ವಿಠ್ಠಲ ಜಗಳ ತೆಗೆಯುತ್ತಿದ್ದ, ಇದರಿಂದ ರೋಸಿ ಹೋಗಿದ್ದ ರಂಜಿತ ವಾರದ ಹಿಂದೆ ಜಗಳವಾಡಿಕೊಂಡು ತವರಿಗೆ ವಾಪಾಸಾಗಿದ್ದಳು.

ಆದರೆ 2 ದಿನಗಳ ಹಿಂದೆ ತಾಯಿ ಜೊತೆ ಗಂಡನ ಮನೆಗೆ ವಾಪಸಾಗಿದ್ದ ರಂಜಿತಾ ಜೊತೆ, ಪತಿ ವಿಠ್ಠಲ ಪುನಃ ಜಗಳ ತೆಗೆದಿದ್ದಾನೆ. ವಿಕೋಪಕ್ಕೆ ತಿರುಗಿದ ಜಗಳದಲ್ಲಿ ವಿಠ್ಠಲ ಕೊಡಲಿಯಿಂದ ಕೊಚ್ಚಿ, ತನ್ನ ಪತ್ನಿ ಹಾಗೂ ಅತ್ತೆಯನ್ನು ಕೊಂದಿದ್ದಾನೆ ಎಂದು ಮೃತರ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಸದ್ಯ ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು