Race ಮಾಡೋಕೆ ಹೋಗಿ ಮರಕ್ಕೆ ಗುದ್ದಿದ.. ಕಾರು ಜಖಂ, ಚಾಲಕ ಆಸ್ಪತ್ರೆಗೆ ದಾಖಲು

ಬೆಂಗಳೂರು:Car race ಮಾಡುವ ವೇಳೆ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ದೊಮ್ಮಲೂರು ಬಳಿ ಈ ಅಪಘಾತ ಸಂಭವಿಸಿದೆ. ಎಂಜಿ ರಸ್ತೆ ಕಡೆಯಿಂದಅತಿ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದೆ. ಇದರ ಪರಿಣಾಮವಾಗಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಜೊತೆಗೆ, ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವಘಡದ ವೇಳೆ ಕಾರಿನಲ್ಲಿ ಮೂವರು ಯುವಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

Race ಮಾಡೋಕೆ ಹೋಗಿ ಮರಕ್ಕೆ ಗುದ್ದಿದ.. ಕಾರು ಜಖಂ, ಚಾಲಕ ಆಸ್ಪತ್ರೆಗೆ ದಾಖಲು
ಸಾಧು ಶ್ರೀನಾಥ್​

Updated on: Aug 04, 2020 | 6:21 PM

ಬೆಂಗಳೂರು:Car race ಮಾಡುವ ವೇಳೆ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ದೊಮ್ಮಲೂರು ಬಳಿ ಈ ಅಪಘಾತ ಸಂಭವಿಸಿದೆ.

ಎಂಜಿ ರಸ್ತೆ ಕಡೆಯಿಂದಅತಿ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದೆ. ಇದರ ಪರಿಣಾಮವಾಗಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಜೊತೆಗೆ, ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.

ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವಘಡದ ವೇಳೆ ಕಾರಿನಲ್ಲಿ ಮೂವರು ಯುವಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

Published On - 5:47 pm, Tue, 4 August 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us