
ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿಯ ಏರ್‌ಲೈನ್ಸ್ ಡಾಬಾ ಬಳಿ ಗಾಂಜಾ ಮಾರುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುನಿರಾಜು ಮತ್ತು ನಾಗೇಶ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ.
ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಈಶಾನ್ಯ ವಲಯದ ಪೊಲೀಸರಿಂದ ಆರೋಪಿಗಳ ಬಂಧನವಾಗಿದ್ದು ಬಂಧಿತರ ಬಳಿಯಿಂದ 3.5 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.