ಯಡಿಯೂರಪ್ಪ ಸರ್ಕಾರ ಮಾತ್ರವಲ್ಲ, 20 ವರ್ಷದಿಂದ ಡ್ರಗ್ಸ್ ದಂಧೆ ನಡೆಯುತ್ತಿದೆ- LRS

ಯಡಿಯೂರಪ್ಪ ಸರ್ಕಾರ ಮಾತ್ರವಲ್ಲ, 20 ವರ್ಷದಿಂದ ಡ್ರಗ್ಸ್ ದಂಧೆ ನಡೆಯುತ್ತಿದೆ- LRS

ಮಂಡ್ಯ:ಬೆಂಗಳೂರಿನಲ್ಲಿ ಮಾತ್ರವಲ್ಲ, ನಾಗಮಂಗಲದಲ್ಲೂ ಡ್ರಗ್ಸ್ ಸಿಗುತ್ತದೆ. ಆದರೆ ಪೊಲೀಸ್ ಇಲಾಖೆಗೆ ಮಾಹಿತಿ ತಿಳಿದಿದ್ದರೂ ಸಹ ಕಣ್ಮುಚ್ಚಿ ಕುಳಿತಿದೆ. ಇದರಿಂದಾಗಿ ಗ್ರಾಮಾಂತರ ಪ್ರದೇಶಕ್ಕೂ ಡ್ರಗ್ಸ್ ದಂಧೆ ವ್ಯಾಪಿಸುತ್ತಿದೆ ಎಂದು ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಗಂಭೀರ ಆರೋಪ ಮಾಡಿದ್ದಾರೆ.

ನನ್ನ ಶಾಲೆಯಿರುವ ಕಲ್ಯಾಣ ನಗರ ವಿದೇಶೀಯರ ಡ್ರಗ್ಸ್ ದಂಧೆ ಅಡ್ಡೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಡ್ರಗ್ಸ್ ದಂಧೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಲ್.ಆರ್. ಶಿವರಾಮೇಗೌಡ, ಬೆಂಗಳೂರಿನ ಕಲ್ಯಾಣ ನಗರದಲ್ಲಿ ನನ್ನದು ಸ್ಕೂಲ್ ಇದೆ. ಆ ರಸ್ತೆಯಲ್ಲಿ ನೈಜೀರಿಯ, ಸೌತ್ ಆಫ್ರಿಕಾ ಪ್ರಜೆಗಳು ಡ್ರಗ್ಸ್ ಮಾರಾಟ ಮಾಡುತ್ತಾ, ಸೇವನೆ ಮಾಡಿ ನಿಂತಿರುತ್ತಾರೆ. ಈ ಬಗ್ಗೆ ಪೊಲೀಸರಿಗೂ ಮಾಹಿತಿ ನೀಡಿದ್ದೇವೆ. ಆದರೆ ಏನೂ ಪ್ರಯೋಜನವಾಗಿಲ್ಲ.

ಜೆಡಿಎಸ್ ಸರ್ಕಾರವಿದ್ದಾಗಲೂ ಡ್ರಗ್ಸ್ ದಂಧೆ ನಡೆಯುತ್ತಿತ್ತು.. ಯಡಿಯೂರಪ್ಪ ಸರ್ಕಾರ ಮಾತ್ರವಲ್ಲ, 20 ವರ್ಷದಿಂದ ಡ್ರಗ್ಸ್ ದಂಧೆ ನಡೆದುಕೊಂಡ ಬರ್ತಿದೆ. ಈಗ ದೊಡ್ಡ ಪ್ರಮಾಣಕ್ಕೆ ಹೋಗಿದೆ. ಜೆಡಿಎಸ್ ಸರ್ಕಾರವಿದ್ದಾಗಲೂ ಡ್ರಗ್ಸ್ ದಂಧೆ ನಡೆಯುತ್ತಿತ್ತು, ನಮ್ಮದೇ ಪಕ್ಷದ ಮುಖಂಡರು ಗಾಂಜಾ ಸೇರಿದಂತೆ ಬೇರೆ ಬೇರೆ ಚಟುವಟಿಕೆಯಿಂದ ಬಂದ ಹಣದಲ್ಲೇ ಸರ್ಕಾರ ಬೀಳಿಸುವ ಪ್ರಯತ್ನ ಮಾಡಿದ್ದರು.

ಸ್ಯಾಂಡಲ್ ವುಡ್ ಈ ಮಟ್ಟಕ್ಕೆ ಇಳಿದಿರೋದು ದುರ್ದೈವ. ಡ್ರಗ್ಸ್ ದಂಧೆ ಮಟ್ಟ ಹಾಕಲು ಸರ್ಕಾರ ವಿಫಲವಾಗಿದೆ. ಡ್ರಗ್ಸ್ ದಂಧೆಕೋರರಿಗೆ ರಾಜಕಾರಣಿಗಳ ಬೆಂಬಲವೂ ಇದೆ. ಗೋವಾ, ಶ್ರೀಲಂಕಾಕ್ಕೆ ಕರೆದೊಯ್ದು ಇಸ್ಪೀಟ್ ಆಡಿಸುತ್ತಾರೆ. ಜೊತೆಗೆ ತೋಟದ ಮನೆಯಲ್ಲಿ ರೇವಾ ಪಾರ್ಟಿ ಮಾಡುವಂತಹ ದಂಧೆ ನಡೆಯುತ್ತಿದೆ. ಇಂತಹ ಘಟನೆಗಳಿಂದ ದೂರವಾಗಬೇಕಾದ್ರೆ ಪೊಲೀಸ್ ಇಲಾಖೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಎಲ್.ಆರ್.ಶಿವರಾಮೇಗೌಡ ಹೇಳಿದ್ದಾರೆ.

Published On - 10:50 am, Wed, 2 September 20

Click on your DTH Provider to Add TV9 Kannada