ಡ್ರಗ್ಸ್​ ಪ್ರಕರಣದಲ್ಲಿ ಬಂಧಿಸಲಾಗಿದ್ದ ಸೋಂಕಿತ ಎಸ್ಕೇಪ್, ಎಲ್ಲಿ?

  • Publish Date - 12:11 pm, Sat, 3 October 20 Edited By: sadhu srinath
ಡ್ರಗ್ಸ್​ ಪ್ರಕರಣದಲ್ಲಿ ಬಂಧಿಸಲಾಗಿದ್ದ ಸೋಂಕಿತ ಎಸ್ಕೇಪ್, ಎಲ್ಲಿ?

ಹುಬ್ಬಳ್ಳಿ: ಕೊರೊನಾ ಮತ್ತು ಡ್ರಗ್ಸ್​ ಪ್ರಕರಣ ದೇಶದಾದ್ಯಂತ ಹೆಚ್ಚಿನ ಗಮನ ಸೆಳೆದಿದೆ. ಸದ್ಯ ಈ ಪ್ರಕರಣಗಳಿಂದ ಪೊಲೀಸರು ಹೈರಾಣಾಗಿದ್ದಾರೆ. ಈ ನಡುವೆ ಡ್ರಗ್ಸ್​ ಪ್ರಕರಣದಲ್ಲಿ ಬಂಧಿಸಲಾಗಿದ್ದ ಸೋಂಕಿತ ಪರಾರಿಯಾಗಿದ್ದು, ಪೊಲೀಸರಿಗೆ ದೊಡ್ಡ ತಲೆ ನೋವಾಗಿದೆ.

ಗಾಂಜಾ ಮಾರಾಟ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಹುಬ್ಬಳ್ಳಿಯ ಗೋಪನಕೊಪ್ಪ ಬಿಸಿಎಂ ಹಾಸ್ಟೆಲ್​ನಿಂದ ಪರಾರಿಯಾಗಿದ್ದಾನೆ. ಮೂತ್ರ ವಿಸರ್ಜನೆ ಮಾಡಿ ಬರುವೆ ಎಂಬ ನೆಪ ಮಾಡಿ ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾನೆ.

ಈ ಬಗ್ಗೆ ಅಶೋಕ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಕೊರೊನಾ ಸೋಂಕಿತನಾಗಿರುವುದಿಂದ ಆತಂಕ ಹೆಚ್ಚಾಗಿದೆ. ಆದಷ್ಟು ಬೇಗ ಆರೋಪಿಯನ್ನು ಹಿಡಿಯಲು ಪೊಲೀಸರು ಸಜ್ಜಾಗಿದ್ದಾರೆ.