ಡ್ರಗ್ಸ್​ ಪ್ರಕರಣದಲ್ಲಿ ಬಂಧಿಸಲಾಗಿದ್ದ ಸೋಂಕಿತ ಎಸ್ಕೇಪ್, ಎಲ್ಲಿ?

ಹುಬ್ಬಳ್ಳಿ: ಕೊರೊನಾ ಮತ್ತು ಡ್ರಗ್ಸ್​ ಪ್ರಕರಣ ದೇಶದಾದ್ಯಂತ ಹೆಚ್ಚಿನ ಗಮನ ಸೆಳೆದಿದೆ. ಸದ್ಯ ಈ ಪ್ರಕರಣಗಳಿಂದ ಪೊಲೀಸರು ಹೈರಾಣಾಗಿದ್ದಾರೆ. ಈ ನಡುವೆ ಡ್ರಗ್ಸ್​ ಪ್ರಕರಣದಲ್ಲಿ ಬಂಧಿಸಲಾಗಿದ್ದ ಸೋಂಕಿತ ಪರಾರಿಯಾಗಿದ್ದು, ಪೊಲೀಸರಿಗೆ ದೊಡ್ಡ ತಲೆ ನೋವಾಗಿದೆ. ಗಾಂಜಾ ಮಾರಾಟ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಹುಬ್ಬಳ್ಳಿಯ ಗೋಪನಕೊಪ್ಪ ಬಿಸಿಎಂ ಹಾಸ್ಟೆಲ್​ನಿಂದ ಪರಾರಿಯಾಗಿದ್ದಾನೆ. ಮೂತ್ರ ವಿಸರ್ಜನೆ ಮಾಡಿ ಬರುವೆ ಎಂಬ ನೆಪ ಮಾಡಿ ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾನೆ. ಈ ಬಗ್ಗೆ ಅಶೋಕ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ […]

ಡ್ರಗ್ಸ್​ ಪ್ರಕರಣದಲ್ಲಿ ಬಂಧಿಸಲಾಗಿದ್ದ ಸೋಂಕಿತ ಎಸ್ಕೇಪ್, ಎಲ್ಲಿ?
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Oct 03, 2020 | 12:11 PM

ಹುಬ್ಬಳ್ಳಿ: ಕೊರೊನಾ ಮತ್ತು ಡ್ರಗ್ಸ್​ ಪ್ರಕರಣ ದೇಶದಾದ್ಯಂತ ಹೆಚ್ಚಿನ ಗಮನ ಸೆಳೆದಿದೆ. ಸದ್ಯ ಈ ಪ್ರಕರಣಗಳಿಂದ ಪೊಲೀಸರು ಹೈರಾಣಾಗಿದ್ದಾರೆ. ಈ ನಡುವೆ ಡ್ರಗ್ಸ್​ ಪ್ರಕರಣದಲ್ಲಿ ಬಂಧಿಸಲಾಗಿದ್ದ ಸೋಂಕಿತ ಪರಾರಿಯಾಗಿದ್ದು, ಪೊಲೀಸರಿಗೆ ದೊಡ್ಡ ತಲೆ ನೋವಾಗಿದೆ.

ಗಾಂಜಾ ಮಾರಾಟ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಹುಬ್ಬಳ್ಳಿಯ ಗೋಪನಕೊಪ್ಪ ಬಿಸಿಎಂ ಹಾಸ್ಟೆಲ್​ನಿಂದ ಪರಾರಿಯಾಗಿದ್ದಾನೆ. ಮೂತ್ರ ವಿಸರ್ಜನೆ ಮಾಡಿ ಬರುವೆ ಎಂಬ ನೆಪ ಮಾಡಿ ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾನೆ.

ಈ ಬಗ್ಗೆ ಅಶೋಕ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಕೊರೊನಾ ಸೋಂಕಿತನಾಗಿರುವುದಿಂದ ಆತಂಕ ಹೆಚ್ಚಾಗಿದೆ. ಆದಷ್ಟು ಬೇಗ ಆರೋಪಿಯನ್ನು ಹಿಡಿಯಲು ಪೊಲೀಸರು ಸಜ್ಜಾಗಿದ್ದಾರೆ.

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us