AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡಿ ಬೇಡಿದ್ರೂ ಸಿಗಲಿಲ್ಲ ಚಿಕಿತ್ಸೆ, ಹೃದಯಾಘಾತಕ್ಕೆ ನರಳಿ ನರಳಿ ಮಗನ ಎದುರೇ ಪ್ರಾಣ ಬಿಟ್ರು..

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ನಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಆಸ್ಪತ್ರೆಯ ನಿರ್ಲಕ್ಷ್ಯ ಜೀವ ಬಲಿ ಪಡೆಯುತ್ತಿರುವಂತಹ ಘಟನೆಗಳು ನಡೆಯುತ್ತಿವೆ. ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಕರುಣಾಜನಕ ಕಥೆ ಕಂಡು ಬಂದಿದೆ. ಉಸಿರು ನಿಲ್ಲೋ ಸಮಯದಲ್ಲೂ ಚಿಕಿತ್ಸೆ ಸಿಗಲಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲೇ ಚಿಕಿತ್ಸೆ ನೀಡದೇ ಸಿಬ್ಬಂದಿ ನಿರ್ಲಕ್ಷ್ಯವಹಿಸಿ ಜೀವವೊಂದು ಬಲಿಯಾಗಿರುವ ಘಟನೆ ಮರು ಕಳಿಸಿದೆ. ನಿನ್ನೆ ಕುರುಬರಹಳ್ಳಿ ಮಹಿಳೆಗೆ ಹೃದಯಾಘಾತವಾಗಿತ್ತು. ಹೀಗಾಗಿ ಚಿಕಿತ್ಸೆ ಕೊಡಿಸಲು ತಾಯಿಯನ್ನು ಕರೆದುಕೊಂಡು ಮಗ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದ್ದಾರೆ. ಜಯದೇವ ಸೇರಿ ವಿವಿಧ […]

ಕಾಡಿ ಬೇಡಿದ್ರೂ ಸಿಗಲಿಲ್ಲ ಚಿಕಿತ್ಸೆ, ಹೃದಯಾಘಾತಕ್ಕೆ ನರಳಿ ನರಳಿ ಮಗನ ಎದುರೇ ಪ್ರಾಣ ಬಿಟ್ರು..
ಆಯೇಷಾ ಬಾನು
ಆಯೇಷಾ ಬಾನು|

Updated on:Jul 05, 2020 | 12:14 PM

Share

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ನಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಆಸ್ಪತ್ರೆಯ ನಿರ್ಲಕ್ಷ್ಯ ಜೀವ ಬಲಿ ಪಡೆಯುತ್ತಿರುವಂತಹ ಘಟನೆಗಳು ನಡೆಯುತ್ತಿವೆ. ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಕರುಣಾಜನಕ ಕಥೆ ಕಂಡು ಬಂದಿದೆ. ಉಸಿರು ನಿಲ್ಲೋ ಸಮಯದಲ್ಲೂ ಚಿಕಿತ್ಸೆ ಸಿಗಲಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲೇ ಚಿಕಿತ್ಸೆ ನೀಡದೇ ಸಿಬ್ಬಂದಿ ನಿರ್ಲಕ್ಷ್ಯವಹಿಸಿ ಜೀವವೊಂದು ಬಲಿಯಾಗಿರುವ ಘಟನೆ ಮರು ಕಳಿಸಿದೆ.

ನಿನ್ನೆ ಕುರುಬರಹಳ್ಳಿ ಮಹಿಳೆಗೆ ಹೃದಯಾಘಾತವಾಗಿತ್ತು. ಹೀಗಾಗಿ ಚಿಕಿತ್ಸೆ ಕೊಡಿಸಲು ತಾಯಿಯನ್ನು ಕರೆದುಕೊಂಡು ಮಗ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದ್ದಾರೆ. ಜಯದೇವ ಸೇರಿ ವಿವಿಧ ಆಸ್ಪತ್ರೆಗಳಿಗೆ ಸುತ್ತಾಡಿದ್ದಾರೆ. ಆದ್ರೆ, ಯಾವ ಆಸ್ಪತ್ರೆಯಲ್ಲೂ ಚಿಕಿತ್ಸೆ ನೀಡಿಲ್ಲ. ಕೊನೆಗೆ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದ್ರೆ, ಅಲ್ಲಿಯೂ ಸಿಬ್ಬಂದಿ ಅಡ್ಮಿಟ್ ಮಾಡಿಕೊಂಡಿಲ್ಲ. ರಾಜಕಾರಣಿಯೊಬ್ರು ಪೋನ್ ಮಾಡಿ ಹೇಳಿದ್ರೂ ನಿರ್ಲಕ್ಷ್ಯವಹಿಸಲಾಗಿದೆ. ಆಸ್ಪತ್ರೆ ಆವರಣದಲ್ಲೇ ಕಾಡಿ ಬೇಡಿದ್ರೂ ವೈದ್ಯರು ಕರುಣೆ ತೋರಿಲ್ಲ. ವೈದ್ಯ ನಿರ್ಲಕ್ಷ್ಯದಿಂದಾಗಿ ಮಹಿಳೆ ಕೊನೆಯುಸಿರೆಳೆದಿದ್ದಾರೆ. ನತದೃಷ್ಟ ಮಗನ ಕಣ್ಣೆದುರೇ ಹೆತ್ತ ತಾಯಿ ಜೀವಬಿಟ್ಟಿದ್ದಾರೆ. ಕಿಮ್ಸ್ ಸಿಬ್ಬಂದಿ ವಿರುದ್ಧ ಮೃತಳ ಮಗ ಆರೋಪಿಸಿದ್ದಾರೆ. ತನ್ನ ತಾಯಿ ಸಾವು ಕಂಡು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಆಕ್ಸಿಜನ್ ಕೊಟ್ಟಿದ್ರೆ ನನ್ನ ತಾಯಿ ಬದುಕುತ್ತಿದ್ರು ಕಾಡಿ ಬೇಡಿ, ಕಣ್ಣೀರಿಟ್ರೂ ಎಮರ್ಜೆನ್ಸಿಗೆ ಸೇರಿಸಿಕೊಂಡಿಲ್ಲ. ಸಾಮಾನ್ಯರ ಕಷ್ಟಕ್ಕೆ ಯಾವ ಆಸ್ಪತ್ರೆಯೂ ಆಗ್ತಿಲ್ಲ. ಬೆಡ್ ಇಲ್ಲ ಌಂಬುಲೆನ್ಸ್ ವ್ಯವಸ್ಥೆ ಸರಿಯಾಗಿ ಸಿಗುತ್ತಿಲ್ಲ ಎಂದು ಹೆತ್ತ ತಾಯಿಯ ಕಳೆದುಕೊಂಡ ಮಗ ಲೋಕೇಶ್ ಗೋಳಾಡಿದ್ದಾರೆ.

Published On - 12:12 pm, Sun, 5 July 20

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ